Cabinet meeting:ಇಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ..
Cabinet meeting-27-03-2025
▪️ಗದಗಿನ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಹೆಸರನ್ನು ಸಹಕಾರಿ ರಂಗದ ಭೀಷ್ಮಕೆ.ಎಚ್. ಪಾಟೀಲ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಎಂದು ಮರುನಾಮಕರಣ ಮಾಡಲು ನಿರ್ಧಾರ
▪️ಬೆಂಗಳೂರಿನ ಸರ್ಕಾರಿ ಯುನಾನಿ ಮತ್ತು ಹೋಮಿಯೋಪತಿ ವೈದ್ಯಕೀಯ ಮಹಾವಿದ್ಯಾಲಯದ ಪುರುಷರ ವಿದ್ಯಾರ್ಥಿ ನಿಲಯ ಕಟ್ಟಡ ಕಾಮಗಾರಿಯ ರೂ. 11.70 ಕೋಟಿಗಳ ಪರಿಷ್ಕೃತ ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ
▪️ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಆಲಮೇಲದಲ್ಲಿ ಹೊಸ ತೋಟಗಾರಿಕೆ ಕಾಲೇಜು ಅನ್ನು ಸ್ಥಾಪಿಸಲು ಹಂತ ಹಂತವಾಗಿ ಒಟ್ಟು ರೂ.145 ಕೋಟಿ ಅಂದಾಜು ವೆಚ್ಚವನ್ನು ಭರಿಸಲು ತೀರ್ಮಾನಿಸಲಾಗಿದ್ದು, ರೂ.39 ಕೋಟಿ ವೆಚ್ಚದಲ್ಲಿ ಮೊದಲನೇ ಹಂತದಲ್ಲಿ ಆಡಳಿತ ಮತ್ತು ಶೈಕ್ಷಣಿಕ ಭವನ ನಿರ್ಮಾಣ ಮಾಡಲು ತೀರ್ಮಾನ
▪️ಕೆಕೆಆರ್‌ಡಿಬಿ ನಿಧಿಯಡಿ ಕಲ್ಯಾಣ ಕರ್ನಾಟಕ ಪ್ರದೇಶದ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ವಿವಿಧ ರಸ್ತೆಗಳ ನಿರ್ಮಾಣ ಕಾಮಗಾರಿಯನ್ನು ರೂ. 47 ಕೋಟಿಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ
▪️ಗದಗ ಜಿಲ್ಲೆಯ ಗದಗ ಪಟ್ಟಣದಲ್ಲಿ ಪೀಠೋಪಕರಣಗಳ ಸಹಿತ ಹೊಸ “ಪ್ರಜಾಸೌಧ’ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ತೀರ್ಮಾನ
▪️ಸಿಎನ್‌ಸಿ ಟೆಕ್ನಾಲಜಿ ಕ್ಷೇತ್ರದ ಶ್ರೇಷ್ಠತಾ ಕೇಂದ್ರವನ್ನು (ಸೆಂಟರ್ ಆಫ್ ಎಕ್ಸಲೆನ್ಸ್) ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ) ಕಲಬುರಗಿಯಲ್ಲಿ ರೂ.16 ಕೋಟಿಗಳ ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ
▪️ಬೆಂಗಳೂರು ನಗರದ ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಳೆಯ ಕಟ್ಟಡದ ಜಾಗದಲ್ಲಿ ಹೊಸದಾಗಿ ವಸತಿ ಶಾಲಾ ಕಟ್ಟಡವನ್ನು ರೂ. 25 ಕೋಟಿಗಳ ಅಂದಾಜು ವೆಚ್ಚದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ
▪️ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ನಡೆಸಲಾಗುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ 61 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ರೂ.1,292 ಕೋಟಿಗಳ ಅಂದಾಜು ವೆಚ್ಚದ ಕಾಮಗಾರಿಗೆ ಅನುಮೋದನೆ.
▪️ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಅಭಾವವನ್ನು ನೀಗಿಸಲು ರಾಜ್ಯದ ಪ್ರಮುಖ ಜಲಾಶಯಗಳ ನಿರ್ವಹಣೆಯನ್ನು ಕಂದಾಯ ಇಲಾಖೆಗೆ ವಹಿಸಲು ತೀರ್ಮಾನ
▪️ವಿಜಯಪುರ ಜಿಲ್ಲೆಯ ವಿಜಯಪುರ ನಗರಕ್ಕೆ ಆಲಮಟ್ಟಿ ಹಿನ್ನೀರಿನಿಂದ ನೀರು ಸರಬರಾಜು ಮಾಡುವ ಕೊಳವೆ ಮಾರ್ಗಕ್ಕೆ ಎಂಎಸ್ ಪೈಪ್ ಅಳವಡಿಕೆ ಮಾಡಲು ರೂ. 50 ಕೋಟಿ ವೆಚ್ಚದ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ
▪️ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮೈಸೂರು ಡಾ. ಬಿ.ಆರ್. ಅಂಬೇಡ್ಕರ್ ಭವನದ ಬಾಕಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ರೂ.23 ಕೋಟಿ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮOplಮೋದನೆ