Cancellation of deputation of school teachers: ನಿಯೋಜನೆಯ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಿಯೋಜನೆ ರದ್ದುಪಡಿಸಿದ ಆದೇಶ -2025

Cancellation of deputation of school teachers: ನಿಯೋಜನೆಯ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಿಯೋಜನೆ ರದ್ದುಪಡಿಸಿದ ಆದೇಶ -2025

Cancellation of deputation of school teachers: ವಿಷಯಕ್ಕೆ ಸಂಬಂಧಪಟ್ಟಂತೆ, ಶಾಲಾ ಶಿಕ್ಷಣ ಇಲಾಖೆಯಲ್ಲಿ ಸರ್ಕಾರದ ಆದೇಶಾನುಸಾರ 2024-25ನೇ ಸಾಲಿನ ಶೈಕ್ಷಣಿಕ ಅವಧಿಯವರೆಗೆ ಕೆಲವು ಶಿಕ್ಷಕರುಗಳನ್ನು ಸರ್ಕಾರವು ತಾತ್ಕಾಲಿಕವಾಗಿ ನಿಯೋಜಿಸಿದೆ. ಆದರೆ ಕೆಲವು ಜಿಲ್ಲೆಗಳ ಉಪನಿರ್ದೇಶಕರುಗಳು ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳು ನಿಯೋಜನೆ ಮೇಲಿರುವ ಶಿಕ್ಷಕರುಗಳನ್ನು ಮಾರ್ಚಿ ಬಿಡುಗಡೆಗೊಳಿಸದಿರುವುದು ಗಮನಕ್ಕೆ ಬಂದಿರುತ್ತದೆ. ಅಂತ್ಯಕ್ಕೆ ಕರ್ತವ್ಯದಿಂದ

ಪ್ರಸ್ತುತ ಹೆಚ್ಚುವರಿ ಶಿಕ್ಷಕರ ಮರುಹೊಂದಾಣಿಕೆ ಪ್ರಕ್ರಿಯೆ ಚಾಲ್ತಿಯಲ್ಲಿರುವುದರಿಂದ ನಿಯೋಜನೆಯ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಿಯೋಜನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಂತಹ ಶಿಕ್ಷಕರುಗಳನ್ನು ಕೂಡಲೆ ಶಾಲಾ ಕರ್ತವ್ಯದಿಂದ ಬಿಡುಗಡೆಗೊಳಿಸತಕ್ಕದ್ದು ಹಾಗೂ ಬಿಡುಗಡೆಗೊಂಡ ಶಿಕ್ಷಕರು ದಿನಾಂಕ: 09/04/2025 ರೊಳಗೆ ಮೂಲ ಶಾಲೆಯಲ್ಲಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗತಕ್ಕದ್ದು, ಒಂದು ವೇಳೆ ನಿಗದಿತ ದಿನಾಂಕದೊಳಗೆ ಮೂಲ ಶಾಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಅಂತಹ ಶಿಕ್ಷಕರನ್ನು ಅನಧಿಕೃತ ಗೈರು ಹಾಜರಿ ಪ್ರಕರಣ ಎಂದು ಪರಿಗಣಿಸಿ ಶಿಸ್ತು ಕ್ರಮ ಜರುಗಿಸಲು ತಿಳಿಸಿದೆ ಹಾಗೂ ಮೂಲ ಶಾಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗದ ಶಿಕ್ಷಕರ ವೇತನವನ್ನು ಪಾವತಿಸದೇ ತಡೆಹಿಡಿಯಲು ಸೂಚಿಸಿದೆ. ತಪ್ಪಿದಲ್ಲಿ ಸಂಬಂಧಪಟ್ಟ ವೇತನ ಬಟಾವಾಡೆ ಅಧಿಕಾರಿಗಳನ್ನೇ ನೇರಹೊಣೆಗಾರನ್ನಾಗಿ ಮಾಡಲಾಗುವುದು.

ಶಿಕ್ಷಕರನ್ನು ಬಿಡುಗಡೆಗೊಳಿಸಲಾಗಿರುವ ಹಾಗೂ ಮೂಲ ಶಾಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿರುವ ಶಿಕ್ಷಕರ ಜಿಲ್ಲಾವಾರು ಪಟ್ಟಿಯನ್ನು ನಮೂನೆಯಲ್ಲಿರುವಂತೆ ದಿನಾಂಕ: 17/04/2025ರ ಒಳಗಾಗಿ ಈ ಕಛೇರಿಗೆ ಕಳುಹಿಸಲು ತಿಳಿಸಿದೆ ತಪ್ಪಿದಲ್ಲಿ ಅಂತಹ ಉಪನಿರ್ದೇಶಕರು(ಆಡಳಿತ) ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳು ಮತ್ತು ಸಂಬಂಧಿಸಿದ ಸಿಬ್ಬಂಧಿಗಳ ವಿರುದ್ಧ ಕರ್ತವ್ಯ ನಿರ್ಲಕ್ಷತೆ ಎಂದು ಪರಿಗಣಿಸಿ ಶಿಸ್ತು ಕ್ರಮ ಜರುಗಿಸಲಾಗುವುದು. ಎಂದು ಆದೇಶದಲ್ಲಿ ತಿಳಿಸಲಾಗಿದೆ.

 

CLICK HERE TO DOWNLOAD ORDER
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!