cashless treatmentCashless treatment for government employees
cashless treatment Reg….Cashless treatment for government employees
ಪ್ರಶ್ನೆ : ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ವೈದ್ಯಕೀಯ ಸೇವೆ ಕಲ್ಪಿಸುವ ಯೋಜನೆಯಡಿಯಲ್ಲಿ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ಸಿಗುವ ವೈದ್ಯಕೀಯ ಸೇವೆಗಳು ಮತ್ತು ಸೌಲಭ್ಯಗಳಾವುವು (ವಿವರ ನೀಡುವುದು)
ಉತ್ತರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ರಾಜ್ಯ ಸರ್ಕಾರವು ರೂಪಿಸಿರುವ ನಗದು ರಹಿತ “ಕರ್ನಾಟಕ ಆರೋಗ್ಯ ಸಂಜೀವಿನಿ (KASS)” ಯೋಜನೆಯಡಿ ಕೇಂದ್ರದ CGHS ವ್ಯವಸ್ಥೆಯಡಿ ಒಳಗೊಂಡಿರುವ ಚಿಕಿತ್ಸಾ ವಿಧಾನಗಳು, ವೈದ್ಯರ ಸಮಾಲೋಚನೆ ವೈದ್ಯಕೀಯ ತಪಾಸಣೆಗಳು, ಶಸ್ತ್ರಚಿಕಿತ್ಸೆಗಳು, ವೈದ್ಯಕೀಯ ನಿರ್ವಹಣೆ ಮುಂತಾದ ವೈದ್ಯಕೀಯ ಸೇವೆಗಳು ವೈದ್ಯಕೀಯ ಒಳಗೊಂಡಿರುತ್ತದೆ ಈ ಯೋಜನೆಯಡಿಯ ವೈದ್ಯಕೀಯ ಸೇವೆಗಳು ಮತ್ತು ಸೌಲಭ್ಯಗಳನ್ನು ದಿನಾಂಕ:05.09.2022 ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 16 ಎಸ್‌ಎಂಆರ್ 2020 ರಲ್ಲಿ ವಿವರಿಸಲಾಗಿದೆ.
ಪ್ರಶ್ನೆ: ಸದರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಹಾಗೂ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ಉತ್ಕೃಷ್ಟ ವೈದ್ಯಕೀಯ ಸೇವೆ ಸಕಾಲದಲ್ಲಿ ಲಭ್ಯವಾಗುವಂತಾಗಲು ಸರಕಾರ ರೂಪಿಸಿರುವ ನಿಯಮ ಹಾಗೂ ಮಾನದಂಡಗಳೇನು;
ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ರಾಜ್ಯ ಸರ್ಕಾರವು ರೂಪಿಸಿರುವ ನಗದು ರಹಿತ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS)” ಯನ್ನು ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963 ರ ಭಾಗವಾಗಿ ಅನುಷ್ಠಾನಗೊಳಿಸಲು ನಿಯಮಗಳಲ್ಲಿ ಅಳವಡಿಸಲು ಕ್ರಮವಹಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS)” ಯಡಿ ಭಾವಿತ ನೋಂದಾವಣೆಗೆ (Deemed Empanelment) ಒಳಪಡಿಸಲು ದಿನಾಂಕ: 09.03.2023ರ ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 16 ಎಸ್‌ಎಂಆರ್ 2020 (ಭಾ-5) ರಲ್ಲಿ ಅನುಮತಿಸಲಾಗಿದೆ ಹಾಗೂ ಸಮಗ್ರ ಅಂಶಗಳನ್ನು ಒಳಗೊಂಡ ನೂತನ ಒಪ್ಪಂದ(MoU)ವನ್ನು ಖಾಸಗಿ ಆಸ್ಪತ್ರೆಗಳ ಜೊತೆ ಮಾಡಿಕೊಳ್ಳುವ ಪ್ರಕ್ರಿಯೆಗೆ ಸಂಬಂಧಿಸಿದ ಕಾರ್ಯವು ಪ್ರಗತಿಯಲ್ಲಿರುತ್ತದೆ. ಸಂಬಂಧಿಸಿದ ಕಾರ್ಯವು ಪ್ರಗತಿಯಲ್ಲಿರುತ್ತದೆ.
ಪ್ರಶ್ನೆ: ಸದರಿ ಯೋಜನೆಯಡಿ ಸೇವೆ ಒದಗಿಸಲು ನೋಂದಣಿಯಾಗಿರುವ ಆಸ್ಪತ್ರೆಗಳು ಎಷ್ಟು ಮತ್ತು ಯಾವುವು;
ಉತ್ತರ: ದಿನಾಂಕ: 09.03.2023ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 16 ಎಸ್‌ಎಂಆರ್ 2020 (ಭಾ-5) ರಲ್ಲಿ ಈಗಾಗಲೇ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ನ ವಿವಿಧ ಯೋಜನೆಗಳಡಿಯಲ್ಲಿ ಮತ್ತು ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು, 1963 ರಡಿ ನೊಂದಾಯಿತವಾಗಿರುವ (ಜ್ಯೋತಿ ಸಂಜೀವಿನಿ ಯೋಜನೆ ಸೇರಿದಂತೆ) ಖಾಸಗಿ ಆಸ್ಪತ್ರೆಗಳನ್ನು KASS ಯೋಜನೆಯಡಿ ಭಾವಿತ ನೋಂದಾವಣೆಗೆ ಖಾಸಗಿ ಆಸ್ಪತ್ರೆಗಳ ಜೊತೆ ನೂತನವಾಗಿ ಒಪ್ಪಂದ ಮಾಡಿಕೊಳ್ಳುವ ಪ್ರಕ್ರಿಯೆಗೆ ಸಂಬಂಧಿಸಿದ ಕಾರ್ಯವು ಪ್ರಗತಿಯಲ್ಲಿರುತ್ತದೆ.
ಪ್ರಶ್ನೆ: ಪ್ರಸ್ತುತ ಆರ್ಥಿಕ ವರ್ಷದಲ್ಲಿ ಇದುವರೆಗೆ ಎಷ್ಟು ಜನ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರು ನಗದು ರಹಿತ ವೈದ್ಯಕೀಯ ಸೇವೆ ಯೋಜನೆಯ ಲಾಭ ಪಡೆದಿದ್ದಾರೆ: ಮತ್ತು ಅದಕ್ಕೆ ಖರ್ಚಾಗಿರುವ ಅನುದಾನ ಎಷ್ಟು? ( ವಿವರ ನೀಡುವುದು)
ಉತ್ತರ: “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS)”ಯನ್ನು ಅನುಷ್ಠಾನಗೊಳಿಸುವ KASS)”ಯನ್ನು ಪ್ರಕ್ರಿಯೆಯು ಪ್ರಗತಿಯಲ್ಲಿದೆ.

