Chamarajanagar District Judiciary Recruitment 2026:ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ವಿವಿಧ ಹುದ್ದೆಗಳ ಭರ್ತಿ – ನೇರ ನೇಮಕಾತಿಗೆ ಅರ್ಜಿ ಆಹ್ವಾನ

Chamarajanagar District Judiciary Recruitment 2026:ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ವಿವಿಧ ಹುದ್ದೆಗಳ ಭರ್ತಿ – ನೇರ ನೇಮಕಾತಿಗೆ ಅರ್ಜಿ ಆಹ್ವಾನ

Chamarajanagar District Judiciary Recruitment 2026:
ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ, ವಯೋಮಿತಿ ಹಾಗೂ ಇತರ ಪ್ರಮುಖ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

ಚಾಮರಾಜನಗರದ ಜಿಲ್ಲಾ ನ್ಯಾಯಾಂಗ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ 13 ಸೇವಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ (Online) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಃ 13.04.2026

ವಿಶೇಷ ಸೂಚನೆ :

1. ಅರ್ಜಿಗಳನ್ನು ಕಡ್ಡಾಯವಾಗಿ ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್:

https://chamarajanagara.dcourts.gov.in/online-recruitment/

ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್ ಲೈನ್ ನಲ್ಲಿ ದಿನಾಂಕಃ 13.03.2026 ರಿಂದ ದಿನಾಂಕಃ 13.04.2026 ರ ರಾತ್ರಿ 11.59ರ ವರೆಗೆ ಮಾತ್ರ ಸಲ್ಲಿಸತಕ್ಕದ್ದು. ಮುಂದುವರೆದು ಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಕಡೆಯ ದಿನಾಂಕಃ 16.04.2026 ಆಗಿರುತ್ತದೆ.

2. ಅಭ್ಯರ್ಥಿಗಳು ಅರ್ಜಿಯಲ್ಲಿ ತಮ್ಮ ಚಾಲ್ತಿಯಲ್ಲಿರುವ ದೂರವಾಣಿ ಸಂಖ್ಯೆ ಹಾಗೂ ಇ-ಮೇಲ್ ವಿಳಾಸವನ್ನು ಕಡ್ಡಾಯವಾಗಿ ನಮೂದಿಸಬೇಕು.

3. ಆನ್ ಲೈನ್ ಹೊರತುಪಡಿಸಿ / ಖುದ್ದಾಗಿ / ಅಂಚೆ ಮೂಲಕ / ಇನ್ನಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಹುದ್ದೆಗಳ ಸಂಖ್ಯೆ:13

ವೇತನ ಶ್ರೇಣಿ:
27000-650-29600-725-32500-800-35700-900-39300-1000-43300-1125-46675/-

ಹುದ್ದೆಗಳ ವರ್ಗೀಕರಣ :

*ಅಂಗವಿಕಲ ಮೀಸಲಾತಿಃ ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 149 ಎಸ್ ಆರ್ ಆರ್2020, ಬೆಂಗಳೂರು, ದಿನಾಂಕಃ 25.09.2020 ರನ್ವಯ”ಒಂದು ವೇಳೆ ಅಧಿಸೂಚಿಸಿರುವಅಂಗವಿಕಲತೆ ಹೊಂದಿರುವ ಅಭರ್ಥಿ ಲಭ್ಯವಿಲ್ಲದೇ ಇದ್ದಲ್ಲಿ ಅಂತಹ ರಿಕ್ತ ಸ್ಥಾನವನ್ನು ಮುಂದಿನ ನೇಮಕಾತಿಗೆ ಮುಂದಕ್ಕೂಯ್ಯಲಾಗುವುದು (Carry forward).

ಶೈಕ್ಷಣಿಕ ವಿದ್ಯಾರ್ಹತೆ:

1 ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.”

3. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು (ಕನ್ನಡ ಓದಲು ಹಾಗೂ ಬರೆಯಲು ಹಾಗೂ ಸಾಮಾನ್ಯ ಜ್ಞಾನದ ಬಗ್ಗೆ ಪರೀಕ್ಷೆ ನಡೆಸಲಾಗುವುದು)

 

ಸೇವಕ ಹುದ್ದೆಗಳಿಗೆ ನೇಮಕಾತಿ ವಿಧಾನ:

ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ 1 : 10 ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. (ಕನ್ನಡ ಓದಲು ಹಾಗೂ ಬರೆಯಲು ಹಾಗೂ ಸಾಮಾನ್ಯ ಜ್ಞಾನದ ಬಗ್ಗೆ ಪರೀಕ್ಷೆ 10 ಅಂಕಗಳಿಗೆ ನಡೆಸಲಾಗುವುದು)

ಸೂಚನೆ:

1. ಮೇಲೆ ತಿಳಿಸಿರುವ ಹುದ್ದೆಗೆ 10 ಅಂಕಗಳನ್ನು ಸಂದರ್ಶನಕ್ಕೆ ನಿಗದಿಸಲಾಗಿದೆ.

2. ಆಯ್ಕೆಯ ಪಟ್ಟಿಯನ್ನು ಕರ್ನಾಟಕ ರಾಜ್ಯ ಪತ್ರ ಅಧಿಸೂಚನೆ ಸಂಖ್ಯೆ LAW 01 LAC 2005,Bengaluru, Dated 13.02.2008 Rule 5 (v) & (vi) ಪ್ರಕಾರ ಪ್ರಕಟಿಸಲಾಗುವುದು.

ಪರಿವೀಕ್ಷಣಾ ಅವಧಿ :

ಆಯ್ಕೆಯಾದ ಅಭ್ಯರ್ಥಿಗಳನ್ನು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣಾ ನಿಯಮಗಳು) 1977 ರ ಪ್ರಕಾರ 2ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ.

ವಯೋಮಿತಿ ಸಡಿಲಿಕೆ :

3. ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಅಭ್ಯರ್ಥಿಯು

a) ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಮತ್ತು ಗರಿಷ್ಠ ವಯಸ್ಸನ್ನು ಮೀರಿರ ಕೂಡದು.

b) ಗರಿಷ್ಠ ವಯೋಮಿತಿ :

▪️ಸಾಮಾನ್ಯ ವರ್ಗ: 35+5 ವರ್ಷ ಮೀರಿರಬಾರದು

▪️ಪ್ರವರ್ಗ 2A, 2B, 3A, 3B:38 +5 ವರ್ಷ ಮೀರಿರಬಾರದು

▪️ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1: 40 +5 ವರ್ಷ ಮೀರಿರಬಾರದು

* ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 262 ಸೇನೆನಿ 2025, ದಿನಾಂಕಃ 29.01.2026 ರನ್ವಯ

“ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31.12.2027 ರವೆರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸಿರುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗಧಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿ ಕ್ರಮವಾಗಿ (as a one time measure) 5 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ” ಎಂದು ತಿಳಿಸಿರುತ್ತಾರೆ.

4. ಅಭ್ಯರ್ಥಿಯು ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಅಥವಾ ಸ್ಥಳೀಯ ಪ್ರಾಧಿಕಾರದಲ್ಲಿ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಯಾದ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಗೊಂಡು ಕರ್ನಾಟಕ ರಾಜ್ಯ ಸರ್ಕಾರದ ಸ್ವಾಮ್ಯ ಅಥವಾ ನಿಯಂತ್ರಣದಲ್ಲಿರುವ ನಿಗಮದಲ್ಲಿ ಹುದ್ದೆಗೆ ಹೊಂದಿರುವ ಅಥವಾ ಹಿಂದೆ ಹೊಂದಿದ್ದಲ್ಲಿ ಗರಿಷ್ಠ ವಯೋಮಿತಿಯನ್ನು ಅವರು ಎಷ್ಟು ವರ್ಷಗಳು ಅವಧಿಗೆ ಹುದ್ದೆಯಲ್ಲಿ ಸೇವೆ ಸಲ್ಲಿಸಿರುವರೋ ಅಥವಾ ಹಿಂದೆ ಸಲ್ಲಿಸಿದ್ದರೋ ಅಷ್ಟು ವರ್ಷಗಳು ಅಥವಾ 10 ವರ್ಷಗಳ ಅವಧಿ, ಎರಡರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳ ಸಡಿಲಿಕೆಯನ್ನು ನೀಡಲಾಗುವುದು.

5. ಅಭ್ಯರ್ಥಿಯು ಮಾಜಿ ಸೈನಿಕನಾಗಿದ್ದಲ್ಲಿ, ಅವನು ಸಶಸ್ತ್ರ ದಳಗಳಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿರುವನೋ ಆ ವರ್ಷಗಳಿಗೆ 03 ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷಗಳು

6. ಅಭ್ಯರ್ಥಿಯು ಅಂಗವಿಕಲನಾಗಿದ್ದಲ್ಲಿ ವಿಧವೆಯಾಗಿದ್ದಲ್ಲಿ ಮತ್ತು ಜೀತ ಕಾರ್ಮಿಕನಾಗಿದ್ದಲ್ಲಿ 10 ವರ್ಷಗಳು

 

ನಿಗದಿತ ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ

ವರ್ಗ ಅರ್ಜಿ ಶುಲ್ಕ
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ₹200/-
ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು

ಶುಲ್ಕ ವಿನಾಯಿತಿ

 
 
ನಿಗದಿತ ಶುಲ್ಕವನ್ನು ಮೇಲೆ ನೀಡಲಾದ ನ್ಯಾಯಾಲಯದ ವೆಬ್‌ಸೈಟ್ ಲಿಂಕ್ ಮುಖಾಂತರ Online Payment through Net Banking / Credit Card /Debit – Card/ UPI ಸೌಲಭ್ಯದ ಮೂಲಕ ಮಾತ್ರ ಪಾವತಿಸತಕ್ಕದ್ದು, ಇದನ್ನು ಹೊರತುಪಡಿಸಿ ಯಾವುದೇ ಚಲನ್ ಡಿಮ್ಯಾಂಡ್ ಡ್ರಾಫ್ಟ್ ಪೋಸ್ಟಲ್ ಆರ್ಡರ್ಃ ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
 
ಅಭ್ಯರ್ಥಿಗಳು ON-LINE ಮೂಲಕ ಅರ್ಜಿ ಭರ್ತಿ ಮಾಡುವ ಮೊದಲು ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ತಿಳಿದುಕೊಳ್ಳತಕ್ಕದು.
 
1. ಅಭ್ಯರ್ಥಿಗಳು ಅರ್ಜಿಯನ್ನು ON-LINE ಮೂಲಕ ಕೊಟ್ಟಿರುವ ಎಲ್ಲಾ ಸೂಚನೆಗಳನ್ನು ಗಮನವಿಟ್ಟು ಓದಿಕೊಳ್ಳಬೇಕು ಮತ್ತು ತಪ್ಪಾಗದಂತೆ ನೋಡಿಕೊಳ್ಳುವುದು ಸರಿಯಾದ ಮಾಹಿತಿ ನೀಡದೇ ಇರುವ ಮತ್ತು ಅಪೂರ್ಣ ಮಾಹಿತಿಯುಳ್ಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
 
2. ಅಭ್ಯರ್ಥಿಗಳು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು ಹಾಗೂ ಇ-ಮೇಲ್ ಐಡಿಯನ್ನು ಹೊಂದಿದ್ದಲ್ಲಿ ನಮೂದಿಸುವುದು. ಒಂದು ವೇಳೆ SMS ಅಥವಾ ಇ-ಮೇಲ್ ಮುಖಾಂತರ ಅಭ್ಯರ್ಥಿಗಳಿಗೆ ಸಂದೇಶ ತಲುಪದಿದ್ದಲ್ಲಿ ಈ ಪ್ರಾಧಿಕಾರವು ಹೊಣೆಯಾಗುವುದಿಲ್ಲ.
 
3. ಅಭ್ಯರ್ಥಿಯು ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಲು ಈ ಕೆಳಕಂಡ ನಿರ್ದೇಶನಗಳನ್ನು ಪಾಲಿಸತಕ್ಕದ್ದು.
 
ಅ ಬಣ್ಣದ ಭಾವಚಿತ್ರವು ಇತ್ತೀಚಿನದಾಗಿದ್ದು ಅಳತೆಯಲ್ಲಿ 5cmಉದ್ದ x 3.6 cm ಅಗಲವುಳ್ಳದ್ದಾಗಿರಬೇಕು ಮತ್ತು 50 kb ಅಳತೆಯದ್ದಾಗಿರಬೇಕು ಹಾಗೂ ಅದು jpg ನಮೂನೆಯಲ್ಲಿರಬೇಕು ಭಾವಚಿತ್ರದ ಹಿಂಬದಿಯು ಬಿಳಿ ಬಣ್ಣದ್ದಾಗಿರಬೇಕು.
 
ಅ ಭಾವಚಿತ್ರವನ್ನು ಸ್ಕ್ಯಾನ್ ಮಾಡಿ ಅರ್ಜಿಗೆ ಅಪ್‌ಲೋಡ್ ಮಾಡಬೇಕು (ಯಾವುದೇ ಕಾರಣಕ್ಕೂ ಭಾವಚಿತ್ರದ ಮೇಲೆ ಸಹಿ ಮಾಡಬಾರದು)
 
ಇ ಅಭ್ಯರ್ಥಿಯು ಕಪ್ಪು ಬಾಲ್ ಪಾಯಿಂಟ್ ಪೆನ್ನಿನಲ್ಲಿ ಬಿಳಿ ಹಾಳೆಯ ಮೇಲೆ ಸಹಿ ಮಾಡಿ (2.5 cm ಉದ್ದ x 7.5 cm ಅಗಲವುಳ್ಳದ್ದಾಗಿರಬೇಕು ಮತ್ತು 26 kb ಅಳತೆಯದ್ದಾಗಿರಬೇಕು ಹಾಗೂ jpg ನಮೂನೆಯಲ್ಲಿರಬೇಕು) ಅಪ್ ಲೋಡ್ ಮಾಡಬೇಕು.
 
4. ತದನಂತರ ಅಭ್ಯರ್ಥಿಯು ON-LINE ಅರ್ಜಿಯಲ್ಲಿ ಕೋರಲಾದ ಎಲ್ಲಾ ಮಾಹಿತಿಗಳನ್ನ ಭರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಲು ಅರ್ಜಿಯಲ್ಲಿ ತಿಳಿಸಿರುವಂತೆ ಕ್ರಮ ಕೈಗೊಳ್ಳುವುದು. ತದನಂತರ ಅರ್ಜಿಯನ್ನು ಶುಲ್ಕವನ್ನು ತುಂಬಿದ ಪ್ರತಿಯನ್ನು Download ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ತಮ್ಮ ಹತ್ತಿರ ಕಾಯ್ದಿರಿಸಿಕೊಳ್ಳತಕ್ಕದ್ದು ಹಾಗೂ ಅರ್ಹತಾ ಪರೀಕ್ಷೆಯ ಸಮಯದಲ್ಲಿ ಹಾಜರುಪಡಿಸತಕ್ಕದು.
 
5. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೂ ವಿಳಂಬ ಮಾಡದೇ ಮುಂಚಿತವಾಗಿ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿ ಹಿಂದಿರುಗಿಸಲಾಗುವುದಿಲ್ಲ.
 
6. ನ್ಯಾಯಾಲಯದ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿಯನ್ನು ಆನ್ ಲೈನ್ ಮೂಲಕ ನೊಂದಾಯಿಸಲು / ಸಲ್ಲಿಸಲು ದಿನಾಂಕಃ 13.04.2026 ರಾತ್ರಿ 11.59 ರವರೆಗೆ ಮತ್ತು ಅರ್ಜಿ ಶುಲ್ಕ ಪಾವತಿಸಲು ಕಡೆಯ ದಿನಾಂಕಃ 16.04.2026 ರಾತ್ರಿ 11.59 ರ ವರೆಗೆ ಅವಕಾಶ ಇರುತ್ತದೆ.
 
7. ಅರ್ಹ ಅಭ್ಯರ್ಥಿಗಳಿಗೆ SMS & E-Mail ಮುಖಾಂತರ ಮಾಹಿತಿ ನೀಡಲಾಗುವುದು, ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ನ್ಯಾಯಾಲಯದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗುವುದು. ಸದರಿ ಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
 
8. ಆನ್ ಲೈನ್ ಹೊರತುಪಡಿಸಿ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
 
9. ಸೇವಾನಿರತ ಅಭ್ಯರ್ಥಿಗಳು ಅರ್ಜಿಗಳ ಸ್ವೀಕೃತಿಗಾಗಿ ನಿಗದಿಪಡಿಸಲಾದ ದಿನಾಂಕ ಹಾಗೂ ಸಮಯವನ್ನು ಮೀರದಂತೆ ಆನ್ ಲೈನ್ ನಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸತಕ್ಕದ್ದು ಮತ್ತು ಸಂಬಂಧಪಟ್ಟ ಪ್ರಾಧಿಕಾರದಿಂದ ನೀಡಲಾದ “ನಿರಾಕ್ಷೇಪಣಾ ಪ್ರಮಾಣಪತ್ರ ” ವನ್ನುಹೊಂದಿರತಕ್ಕದು.
 
10. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ನಮೂನೆ ‘ಡಿ’ ಯಲ್ಲಿ ಪ್ರವರ್ಗ-1 ರ ಅಭ್ಯರ್ಥಿಗಳು ನಮೂನೆ ‘ಇ’ಯಲ್ಲಿ ಮತ್ತು 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು ನಮೂನೆ ‘ಎಫ್’ ನಲ್ಲಿ ಸಂಬಂಧಿಸಿದ ತಹಸೀಲ್ದಾರರಿಂದ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಹೊಂದಿರತಕ್ಕದ್ದು.
 
11. ಅಂಗವಿಕಲ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ವೈದ್ಯಕೀಯ ಪ್ರಮಾಣ ಪತ್ರವನ್ನು ದಿನಾಂಕಃ 19.11.2005 ರ ಸರ್ಕಾರದ ಅಧಿಕೃತ ಜ್ಞಾಪನಾ ಸಂಖ್ಯೆ: ಸಿಆಸುಇ/115/ಸನೆನಿ/2005 ರಲ್ಲಿ ನಿಗಧಿಪಡಿಸಿದ ನಮೂನೆಯಲ್ಲಿ ಅಂಗವಿಕಲತೆಯ ಬಗ್ಗೆ ಜಿಲ್ಲಾ ಮಟ್ಟದ ವೈದ್ಯಕೀಯ ಮಂಡಳಿಯಿಂದ ಪ್ರಮಾಣ ಪತ್ರವನ್ನು ಪಡೆದಿರಬೇಕು.
 
12. ಮಾಜಿ ಸೈನಿಕ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಸೈನಿಕ ಸೇವೆಯಿಂದ ಬಿಡುಗಡೆಯಾದ / ವಿಮುಕ್ತಿ ಹೊಂದಿದ ಬಗೆಗಿನ ಪ್ರಮಾಣ ಪತ್ರವನ್ನು ಸಲ್ಲಿಸುವುದು,
 
13. ವಿಧವೆಯರು ಜೀತ ಕಾರ್ಮಿಕರು ಮತ್ತು ವಯೋಮಿತಿ ರಿಯಾಯಿತಿಗೆ ಅರ್ಹರಾದ ಇನ್ನಿತರರು ವಯೋಮಿತಿ ರಿಯಾಯಿತಿ ಕೋರಲು ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಹೊಂದಿರತಕ್ಕದ್ದು.
 
14. ಮೇಲ್ಕಂಡ ಪ್ರಯೋಜನಗಳನ್ನು ಕ್ಷೇಮು ಮಾಡುವ ಅಭ್ಯರ್ಥಿಗಳು ಆನ್ ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಂದು ಅಥವಾ ಅದಕ್ಕಿಂತ ಮುಂಚೆ ಸಕ್ಷಮ ಪ್ರಾಧಿಕಾರಿಗಳು ನೀಡಿದ ಸಂಬಂಧಪಟ್ಟ ಪ್ರಮಾಣಪತ್ರಗಳನ್ನು ಹೊಂದಿರತಕ್ಕದು.
 
15. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಲ್ಲಿ, ಮಹಿಳಾ ಅಭ್ಯರ್ಥಿಗಳು, ಮಾಜಿ ಸೈನಿಕ ಅಭ್ಯರ್ಥಿಗಳು, ಯೋಜನಾ ನಿರಾಶ್ರಿತ ಅಭ್ಯರ್ಥಿಗಳು, ಗ್ರಾಮೀಣ ಅಭ್ಯರ್ಥಿಗಳು ಹಾಗೂ ಕನ್ನಡ ಮಾಧ್ಯಮ ಅಭ್ಯರ್ಥಿಗಳ ಮೀಸಲಾತಿಗಳಿಗೆ ಅರ್ಹ ಅಭ್ಯರ್ಥಿಗಳು ಲಭ್ಯವಿರದೇ ಇದ್ದ ಪಕ್ಷದಲ್ಲಿ ಆ ಹುದ್ದೆಗಳನ್ನು ಆಯಾ ಪಂಗಡಗಳ ಇತರೆ ಅಭ್ಯರ್ಥಿಗಳಿಂದ ಭರ್ತಿ ಮಾಡಲಾಗುವುದು.
 
16. ಅಭ್ಯರ್ಥಿಗಳು ತಮ್ಮ ಎಸ್.ಎಸ್.ಎಲ್.ಸಿ ಅಂಕಗಳು ಶ್ರೇಣಿಯಲ್ಲಿದ್ದರೆ ಅಥವಾ CGPA ಆಗಿದ್ದರೆ ಅದನ್ನು ಅಂಕಗಳಾಗಿ ಪರಿವರ್ತಿಸಿ ಗರಿಷ್ಠ ಅಂಕಗಳು, ಪಡೆದ ಅಂಕಗಳು ಮತ್ತು ಒಟ್ಟು ಶೇಕಡಾವಾರನ್ನು ಕಡ್ಡಾಯವಾಗಿ ನಿಗಧಿತ ಕಾಲಂನಲ್ಲಿ ನಮೂದಿಸಿಸಬೇಕು.
 
17. ದಾಖಲೆಗಳ ಪರಿಶೀಲನೆಗಾಗಿ ಕರೆಯಲ್ಪಡುವ ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆ (ಜನ್ಮ ದಿನಾಂಕವನ್ನು ತೋರಿಸಲು ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಗ್ರಾಮೀಣ/ ಮಾಜಿ ಸೈನಿಕರು / ವಿಧವೆಯರು / ಅಂಗವಿಕಲರು ಸಂಬಂಧಿಸಿದಂತೆ ಅಗತ್ಯ ಮೂಲ ದಾಖಲೆಗಳನ್ನು ಪರಿಶೀಲನೆಗಾಗಿ ಸಲ್ಲಿಸತಕ್ಕದ್ದು. ಪರಿಶೀಲನೆ ಮಾಡುವಾಗ ಅರ್ಜಿದಾರರು ಅರ್ಜಿಯಲ್ಲಿ ಒದಗಿಸಿರುವ ಮಾಹಿತಿಯು ಸುಳ್ಳೆಂದು ಕಂಡುಬಂದಲ್ಲಿ ಆಗ ಅವರ ಅಭ್ಯರ್ಥಿಕೆಯು ತಿರಸ್ಕೃತವಾಗುತ್ತದೆ ಹಾಗೂ ಅವರು ಸುಳ್ಳು ಮಾಹಿತಿ ನೀಡಿದ್ದಕ್ಕಾಗಿ ಕ್ರಿಮಿನಲ್ ಪ್ರಾಸಿಕ್ಯೂಷನ್‌ಗೂ ಸಹ ಗುರಿಯಾಗಬೇಕಾಗುತ್ತದೆ.
 
18. ನೈತಿಕ ದುರ್ನಡತೆಗಾಗಿ / ನೀತಿ ಬಾಹಿರ ಚಟುವಟಿಕೆಗಳಿಂದಾಗಿ ನ್ಯಾಯಾಲಯದಿಂದ ಶಿಕ್ಷೆಗೊಳಪಟ್ಟಿರುವ ವ್ಯಕ್ತಿ ಅಥವಾ ರಾಜ್ಯ / ಕೇಂದ್ರ / ಸ್ಥಳೀಯ ಸಂಸ್ಥೆ ಕಛೇರಿಗಳಲ್ಲಿ ನೈತಿಕ ದುರ್ನಡತೆಯಿಂದಾಗಿ ಅಥವಾ ನೀತಿಬಾಹಿರ ಚಟುವಟಿಕೆಗಳಲ್ಲಿ ಒಳಗಾಗಿ ಅಥವಾ ಆಯ್ಕೆಯಾದ ಅಭ್ಯರ್ಥಿಯು ಬದಲಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕಾನೂನು ಬಾಹಿರ / ನೀತಿ ಬಾಹಿರ ಚುಟುವಟಿಕೆಗಳಲ್ಲಿ ತೊಡಗಿ ಸೇವೆಯಿಂದ ತೆಗೆದು ಹಾಕಿದ್ದಲ್ಲಿ / ವಜಾ ಮಾಡಲ್ಪಟ್ಟಿದ್ದು ಕಂಡುಬಂದಲ್ಲಿ ನೇಮಕಾತಿಗೆ ಅನರ್ಹರಾಗಿರುತ್ತಾರೆ.
 
19. ಅರ್ಜಿಯಲ್ಲಿ ತಪ್ಪು ಮಾಹಿತಿ ನೀಡಿ ಉದ್ಯೋಗ ಪಡೆಯುವ ಅಭ್ಯರ್ಥಿಗಳನ್ನು ಯಾವುದೇ ಸಮಯದಲ್ಲಾದರೂ ವಜಾ ಮಾಡಲಾಗುತ್ತದೆ ಹಾಗೂ ಕಾನೂನು ಕ್ರಮ ಜರುಗಿಸಲಾಗುವುದು.
 
20. ಅಭ್ಯರ್ಥಿಗಳ ಆಯ್ಕೆಯ ವಿಷಯದಲ್ಲಿ ಆಯ್ಕೆ ಪ್ರಾಧಿಕಾರದ ನಿರ್ಧಾರವೇ ಅಂತಿಮವಾಗಿರುತ್ತದೆ.
 
21. ಪಿಂಚಣಿ ಸೌಲಭ್ಯಃ ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ (ಎಸ್‌ಪಿಎಲ್) 04 ಪಿಇಟಿ 2005, ದಿನಾಂಕಃ 31.03.2006 ರಂತೆ 
 
22. ಅಭ್ಯರ್ಥಿಯು ನೇಮಕಾತಿ ಸಂಬಂಧ ಯಾವುದೇ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅವಲಂಬಿಸಿರುವುದು ಕಂಡುಬಂದಲ್ಲಿ ಅಂತಹವರನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.
 
23. ಅರ್ಹತಾ ಪರೀಕ್ಷೆಗೆ ಹಾಗೂ ಸಂದರ್ಶನಕ್ಕೆ ಆಯ್ಕೆಯಾಗುವ ಅಭ್ಯರ್ಥಿಗಳು ಚಾಮರಾಜನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.
 
24. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲುವ ಸಮಯದಲ್ಲಿ ಯಾವುದಾದರೂ ತಾಂತ್ರಿಕ ದೋಷವಾದ್ದಲ್ಲಿ onlinerecruitmentpdjchmnagar@gmail.com – ಗೆ ತಮ್ಮ ದೂರುಗಳನ್ನುದೂರುಗಳನ್ನು ಸಲ್ಲಿಸಿ ಬಗೆಹರಿಸಿಕೊಳ್ಳುವುದು.
 
Chamarajanagar District Judiciary Recruitment 2026
 
 

 
 
 
 
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!