CLT EXAM-ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆ)(ತಿದ್ದುಪಡಿ) ನಿಯಮಗಳು, 2025.

CLT EXAM-ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆ)(ತಿದ್ದುಪಡಿ) ನಿಯಮಗಳು, 2025.

CLT EXAM- ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು, 2012, ಇದನ್ನು ಮತ್ತಷ್ಟು ತಿದ್ದುಪಡಿ ಮಾಡುವುದಕ್ಕೆ ದಿನಾಂಕ: 18.01.2025ರ ಅಧಿಸೂಚನೆ ಸಂಖ್ಯೆ: ಸಿಆಸುಇ 103 ಸೇವನೆ 2024 ರಲ್ಲಿ ಪ್ರಕಟಿಸಿರುವ ಈ ಮುಂದಿನ ನಿಯಮಗಳ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಅದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆಗಳನ್ನು ಮತ್ತು ಸಲಹೆಗಳನ್ನು ಆಹ್ವಾನಿಸಿ ದಿನಾಂಕ: 18.01.2025ರ ಕರ್ನಾಟಕ ರಾಜ್ಯಪತ್ರದ ಭಾಗ IV-ಎ ರಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ 14)ರ 3ನೇ ಪ್ರಕರಣದ (2)ನೇ ಉಪ ಪ್ರಕರಣದ (ಎ) ಖಂಡವನ್ನು ಪ್ರಕರಣ 8 ರೊಂದಿಗೆ ಓದಿಕೊಂಡು ಅಗತ್ಯಪಡಿಸಲಾದಂತೆ ಪ್ರಕಟಿಸಲಾಗಿರುವುದರಿಂದ;

ಸದರಿ ರಾಜ್ಯಪತ್ರವನ್ನು ದಿನಾಂಕ:18.01.2025ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಿರುವುದರಿಂದ;

ಮತ್ತು, ಸದರಿ ಕರಡು ನಿಯಮಗಳ ಬಗ್ಗೆ, ಸ್ವೀಕೃತವಾಗಿರುವ ಆಕ್ಷೇಪಣೆ ಮತ್ತು ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಶೀಲಿಸಿರುವುದರಿಂದ;

ಈಗ, ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ 14) ರ 3ನೇ ಪ್ರಕರಣದ (1) ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ನಿಯಮಗಳನ್ನು ರಚಿಸುತ್ತದೆ, ಎಂದರೆ:-

ನಿಯಮಗಳು

1.ಶೀರ್ಷಿಕೆ ಮತ್ತು ಪ್ರಾರಂಭ:-

(1) ಈ ನಿಯಮಗಳನ್ನು ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) (ತಿದ್ದುಪಡಿ) ನಿಯಮಗಳು, 2025 ಎಂದು ಕರೆಯತಕ್ಕದ್ದು.

(2) ಈ ನಿಯಮಗಳು ಅಧಿಕೃತ ರಾಜ್ಯ ಪತ್ರದಲ್ಲಿ ಅಂತಿಮವಾಗಿ ಪ್ರಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2.ನಿಯಮ 2ಕ್ಕೆ ತಿದ್ದುಪಡಿ:-ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರ (ಇದರಲ್ಲಿ ಇನ್ನು ಮುಂದೆ ಸದರಿ ನಿಯಮಗಳೆಂದು ಉಲ್ಲೇಖಿಸಲಾಗಿದೆ) ನಿಯಮ 2ರಲ್ಲಿ “ದಿನಾಂಕ: 31.12.2024 ರೊಳಗೆ” ఎంబ ಪದ ಮತ್ತು ಅಂಕಿಗಳ ಬದಲಿಗೆ “ದಿನಾಂಕ: 31.12.2025 ರೊಳಗೆ” ಎಂಬ ಪದ ಮತ್ತು ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

(ವೀರಭದ್ರ)
ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು-1).

CLICK HERE TO DOWNLOAD 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!