Dasara Holiday-2025: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ದಸರಾ ರಜಾ ಅವಧಿ ವಿಸ್ತರಣೆ ಸಾಧ್ಯತೆ!

Dasara Holiday: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ದಸರಾ ರಜಾ ಅವಧಿ ವಿಸ್ತರಣೆ ಸಾಧ್ಯತೆ!

Dasara Holiday:ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ದಿನಾಂಕ: 20-09-2025 ರಿಂದ 07-10-2025ರವರೆಗೆ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಸರಾ ರಜೆ ಘೋಷಣೆಯಾಗಿರುತ್ತದೆ.

Dasara Holiday: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-2025ರ ಗಣತಿ ಕಾರ್ಯದಲ್ಲಿ ರಾಜ್ಯದಾದ್ಯಂತ ಸರ್ಕಾರಿ ಶಾಲೆಗಳ ಶಿಕ್ಷಕರುಗಳಿಗೆ ದಿನಾಂಕ:22-09-2025 ರಿಂದ 07-10-2025ರ ವರೆಗೆ ಕರ್ತವ್ಯ ನಿರ್ವಹಿಸಲು ನಿಯೋಜಿಸಲಾಗಿರುತ್ತದೆ. ಗಣತಿ ಕಾರ್ಯದಲ್ಲಿನ ತಾಂತ್ರಿಕ ಸಮಸ್ಯೆಗಳಿಂದಾಗಿ ಗಣತಿ ಕಾರ್ಯ ಪೂರ್ಣಗೊಂಡಿರುವುದಿಲ್ಲ ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಗಣತಿ ಕಾರ್ಯ ದಿನಾಂಕ: 05-10-2025 ರಿಂದ ಪ್ರಾರಂಭವಾಗಿರುತ್ತದೆ.

 

ದಿನಾಂಕ: 08-10-2025ರೊಳಗೆ ಗಣತಿ ಕಾರ್ಯ ಪೂರ್ಣಗೊಳ್ಳದೇ ಇರುವುದರಿಂದ ಹಾಗೂ ಶಾಲಾ ರಜಾ ಅವಧಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರುಗಳು ದೈಹಿಕ ಹಾಗೂ ಭೌದ್ಧಿಕವಾಗಿ ಒತ್ತಡದಲ್ಲಿ ಗಣತಿ ಕಾರ್ಯದ ಕರ್ತವ್ಯ ನಿರ್ವಹಿಸಿರುವುದರಿಂದ ಅವರುಗಳ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯಕ್ಕಾಗಿ ರಜೆಯ ಅವಶ್ಯಕತೆ ಇರುವುದರಿಂದ, ದಿನಾಂಕ: 17-10-2025ರ ವರೆಗೆ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಸರಾ ರಜೆ ಅವಧಿಯನ್ನು ವಿಸ್ತರಿಸುವಂತೆ ನಿರ್ದೇಶನ ನೀಡಲು ತಮ್ಮಲ್ಲಿ ಕೋರಿದೆ.

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment