Dearness Allowance (DA): ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿ:01-07-2025ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವ ಬಗ್ಗೆ.
Dearness Allowance (DA): ಸೂಚಿತ ವಿಷಯದನ್ವಯ ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಕರ್ನಾಟಕ ರಾಜ್ಯ ಸರ್ಕಾರವು ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುವುದು ಸಂಪ್ರದಾಯವಾಗಿರುತ್ತದೆ.
ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಉಲ್ಲೇಖಿತ ಆದೇಶದಲ್ಲಿ ದಿನಾಂಕ: 01-07-2025ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ.(ಪ್ರತಿ ಲಗತ್ತಿಸಿದೆ)
ಆದ್ದರಿಂದ, ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೂ ದಿನಾಂಕ: 01-07-2025 ರಿಂದ ಅನ್ವಯವಾಗುವಂತೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಲು ತಮ್ಮಲ್ಲಿ ಕೋರಿದೆ.




ಇದನ್ನೂ ನೋಡಿ…..
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್ಗೆ ಸೇರಿ.