ECIL RECURITMENT -2025: ECIL ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಕೆಗೆ ನೇರ ಲಿಂಕ್ ಇಲ್ಲಿದೆ

ECIL RECURITMENT -2025: ECIL ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಕೆಗೆ ನೇರ ಲಿಂಕ್ ಇಲ್ಲಿದೆ

ECIL RECURITMENT -2025: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್  ಇಂಡಿಯಾ ಲಿಮಿಟೆಡ್ (ECIL) ಗ್ರಾಜುಯೇಟ್ ಎಂಜಿನಿಯರ್ ಟ್ರೇನಿ ವಿಭಾಗದ-80 ಮತ್ತು ಟೆಕ್ನಿಷಿಯನ್ ವಿಭಾಗದ 45 ಹುದ್ದೆಗಳು ಸೇರಿ ಒಟ್ಟು 125 ಹುದ್ದೆಗಳಿಗೆ ನೇಮಕಾತಿ ನಡೆಸಲು ಅರ್ಜಿ ಆಹ್ವಾನಿಸಿದೆ. ಆಸಕ್ತರು, ಜೂನ್ 5ರ ಒಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಒಟ್ಟು ಹುದ್ದೆಗಳಲ್ಲಿ ವಿವಿಧ ವರ್ಗಗಳಿಗೆ ವಿವಿಧ ಹುದ್ದೆಗಳನ್ನು ಮೀಸಲು ಇಡಲಾಗಿದೆ.

 

1.ಗ್ರಾಜುಯೇಷನ್ ಎಂಜಿನಿಯರ್ ಟ್ರೇನಿ ಹುದ್ದೆಗಳ ನೇಮಕಾತಿಗೆ ಅರ್ಹತೆ:

ಈ ಹುದ್ದೆಗಳಿಗೆ ಆಕಾಂಕ್ಷಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಿಂದ ಪದವಿ, ಬಿಇ ಅಥವಾ ಬಿಟೆಕ್ ವಿದ್ಯಾರ್ಹತೆ ಹೊಂದಿರಬೇಕು.

2. ಟೆಕ್ನಿಷಿಯನ್ ಗ್ರೇಡ್ ಹುದ್ದೆಗಳ ನೇಮಕಾತಿಗೆ ಅರ್ಹತೆ:

ಎಸ್ಸೆಸ್ಸೆಲ್ಸಿ ಜತೆಗೆ ಐಟಿಐ ಅಭ್ಯಸಿಸಿರಬೇಕು.

ವಯೋಮಿತಿ ವಿವರ:

ಅಭ್ಯರ್ಥಿಗಳ ವಯೋಮಿತಿ ಏಪ್ರಿಲ್ 30ರ ವೇಳೆಗೆ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

▪️ನಿಯಮಾನುಸಾರ ಮೀಸಲಾತಿ ವ್ಯಾಪ್ತಿಗೆ ಒಳಪಡುವ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ,

▪️ಎಸ್‌ಸಿ / ಎಸ್‌ಟಿ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕದ ವಿವರ:

▪️ಗ್ರಾಜುಯೇಷನ್‌ ಎಂಜಿನಿಯರ್ ಟ್ರೇನಿ ಹುದ್ದೆಗಳ ಸಾಮಾನ್ಯ, ಒಬಿಸಿ, ಆರ್ಥಿಕ ದುರ್ಬಲ ವರ್ಗಗಳ ಆಕಾಂಕ್ಷಿಗಳು ಆನ್‌ಲೈನ್ ಮೂಲಕ 1,000 ರೂ.,

▪️ಟೆಕ್ನಿಷಿಯನ್ ಟ್ರೇಡ್ ಹುದ್ದೆಗಳ  ಆಕಾಂಕ್ಷಿಗಳು 750 : ರೂ. ಅರ್ಜಿ ಶುಲ್ಕ ಪಾವತಿಸಬೇಕು.

▪️ಉಳಿದಂತೆ ಎಸ್‌ಸಿ, ಎಸ್‌ಟಿ, ವಿಶೇಷಚೇತನ ಅಭ್ಯರ್ಥಿಗಳಿಗೆ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ ಹೇಗಿರಲಿದೆ:

ಕಂಪ್ಯೂಟರ್ ಆಧರಿತ ಪರೀಕ್ಷೆ, ಟ್ರೇಡ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. 100 ಅಂಕಗಳ 100 ಪ್ರಶ್ನೆಗಳಿಗೆ ಪರೀಕ್ಷೆ ನಡೆಯಲಿದ್ದು, ಎರಡು ಗಂಟೆಗಳ ಕಾಲಾವಕಾಶ ಇರಲಿದೆ. ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಳೆಯಲಾಗುತ್ತದೆ.

ಪರೀಕ್ಷಾ ಕೇಂದ್ರದ ಮಾಹಿತಿ:

ದೇಶದ ಪ್ರಮುಖ ನಗರಗಳಲ್ಲಿ ಪರೀಕ್ಷಾ ಕೇಂದ್ರಗಳು ಇರಲಿದ್ದು,  ರಾಜ್ಯದಲ್ಲಿ ಬೆಂಗಳೂರು ಪರೀಕ್ಷಾ ಕೇಂದ್ರವಾಗಿದೆ.

ಇತ್ತ ಗಮನಿಸಿ…..

▪️ಅರ್ಜಿ ಸಲ್ಲಿಸಲು ಜೂನ್ 5 ಕೊನೆಯ ದಿನ

▪️ಸಿಬಿಟಿ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ

▪️ರಾಜ್ಯದಲ್ಲಿ ಬೆಂಗಳೂರು ಪರೀಕ್ಷಾ ಕೇಂದ್ರ

▪️ಹೆಚ್ಚಿನ ವಿವರಗಳಿಗೆ: www.ecil. co.inin

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!