Education: ತಾಲ್ಲೂಕು ಮಟ್ಟದಲ್ಲಿ ಶಿಕ್ಷಣ ಸುಧಾರಣಾ ಸಮಿತಿ ರಚಿಸುವ ಕುರಿತು.
Education: ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ (1)ರ ಸರ್ಕಾರದ ಆದೇಶದಂತೆ ತಾಲ್ಲೂಕು ಮಟ್ಟದಲ್ಲಿ ಶಿಕ್ಷಣ ಸುಧಾರಣಾ ಸಮಿತಿ ರಚಿಸುವ ಕುರಿತು ಆದೇಶವಾಗಿದೆ. ಸದರಿ ಸಮಿತಿಯನ್ನು ಎಲ್ಲಾ ಬ್ಲಾಕ್‌ಗಳಲ್ಲಿ ಆಯಾ ವ್ಯಾಪ್ತಿಯ ವಿಧಾನ ಸಭಾ ಕ್ಷೇತ್ರದ ಶಾಸಕರನ್ನು ಮತ್ತು ಆಯಾ ಕ್ಷೇತ್ರದ ಉಸ್ತುವಾರಿ ಸಚಿವರನ್ನು ಸಂಪರ್ಕಿಸಿ ತಾಲ್ಲೂಕು ಮಟ್ಟದಲ್ಲಿ ಶಿಕ್ಷಣ ಸುಧಾರಣಾ ಸಮಿತಿಯನ್ನು ರಚಿಸಲು ಕ್ರಮವಹಿಸುವುದು ಎಂದು ತಿಳಿಸಲಾಗಿತ್ತು.
ಅದರಂತೆ ಸದರಿ ಸಮಿತಿಗಳನ್ನು ರಚಿಸಲು ದಿನಾಂಕ: 22.01.2025ರಂದು ರಾಜ್ಯದ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರು (ಆಡಳಿತ) ಮತ್ತು ಎಲ್ಲಾ ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭೆಯಲ್ಲಿ ನೀಡಿದ ತಾಲ್ಲೂಕು ಮಟ್ಟದ ಶಿಕ್ಷಣ ಸುಧಾರಣ ಸಮಿತಿಗಳ ಬದಲಾಗಿ ಆಯಾ ವಿಧಾನ ಸಭಾ ಮತಕ್ಷೇತ್ರ ಮಟ್ಟದ ಶಿಕ್ಷಣ ಸುಧಾರಣ ಸಮಿತಿ ರಚಿಸುವುದು ಉತ್ತಮ ಎಂದು ನೀಡಿದ ಸಲಹೆಗಳಂತೆ ಸರ್ಕಾರಕ್ಕೆ ವಿಧಾನ ಸಭಾ ಮತ ಕ್ಷೇತ್ರ ಮಟ್ಟದ ಶಿಕ್ಷಣ ಸುಧಾರಣಾ ಸಮಿತಿ ರಚಿಸಲು ಕೋರಿ ಮರು ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಉಲ್ಲೇಖ (2) ರ ಸರ್ಕಾರದ ಆದೇಶ ಸಂಖ್ಯೆ: ಇಪಿ 11 ಎಸ್.ಎಲ್.ಬಿ 2025, ಬೆಂಗಳೂರು ದಿನಾಂಕ: 21.02.2025 ರಂತೆ ವಿಧಾನ ಸಭಾ ಮತ ಕ್ಷೇತ್ರ ಮಟ್ಟದ ಶಿಕ್ಷಣ ಸುಧಾರಣ ಸಮಿತಿ ರಚನೆ ಕುರಿತು ಆದೇಶ ನೀಡಲಾಗಿದೆ. (ಪ್ರತಿ ಲಗತ್ತಿಸಿದೆ).
ಮುಂದುವರೆದು, ಉಲ್ಲೇಖ (3) ರ ಪತ್ರದಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಮಾನ್ಯ ಶಾಸಕರ ಅಧ್ಯಕ್ಷತೆಯಲ್ಲಿ ಸದರಿ ಸಮಿತಿಗಳನ್ನು ರಚಿಸಿ, ಜಿಲ್ಲಾ ಉಸ್ತುವಾರಿ ಸಚಿವರಿಂದ ಅನುಮೋದನೆ ಪಡೆದು ದಿನಾಂಕ: 10.03.2025ರೊಳಗೆ ಮಾನ್ಯ ಸಚಿವರಿಗೆ ವರದಿ ಸಲ್ಲಿಸುವಂತೆ ನಿರ್ದೇಶನವಿರುತ್ತದೆ. (
ಆದ್ದರಿಂದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಂಬಂಧಿಸಿದ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರುಗಳನ್ನು ಸಂಪರ್ಕಿಸಿ ಸದರಿಯವರ ಅಧ್ಯಕ್ಷತೆಯಲ್ಲಿ ಸದರಿ ಸಮಿತಿಗಳನ್ನು ರಚಿಸಿ, ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಇವರಿಗೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರ ಅನುಮೋದನೆ ಪಡೆಯಲು ಸಲ್ಲಿಸುವುದು. ಜಿಲ್ಲಾ ಉಪನಿರ್ದೇಶಕರು (ಆಡಳಿತ) ಇವರು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ಅನುಮೋದನೆ ಪಡದು ಈ ಕಛೇರಿಗೆ ದಿ: 07.03.2025ರೊಳಗೆ ವರದಿಯನ್ನು ಸಲ್ಲಿಸಲು ತಿಳಿಸಿದೆ.
(ಮಾನ್ಯ ಆಯುಕ್ತರ ಆದೇಶದ ಮೇರೆಗೆ)
ನಿರ್ದೇಶಕರು (ಪ್ರೌಢ ಶಿಕ್ಷಣ)
CLICK HERE TO DOWNLOAD MEMORANDUM