Government Employees: ಸರ್ಕಾರಿ ನೌಕರರ ಆಸ್ತಿ ಮತ್ತು ಹೊಣೆಗಾರಿಕೆ ವಿವರಗಳನ್ನು ಕರ್ನಾಟಕ ಲೋಕಾಯುಕ್ತದ ಅಧಿಕಾರಿಗಳು ಕೋರಿದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸೂಚನೆಗಳು.

Government Employees: ಸರ್ಕಾರಿ ನೌಕರರ ಆಸ್ತಿ ಮತ್ತು ಹೊಣೆಗಾರಿಕ ವಿವರಗಳನ್ನು ಕರ್ನಾಟಕ ಲೋಕಾಯುಕ್ತದ ಅಧಿಕಾರಿಗಳು ಕೋರಿದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸೂಚನೆಗಳು.

Government Employees:

ಲೋಕಾಯುಕ್ತ ಕಾಯ್ದೆ 1984 ಹಾಗೂ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988 ರಡಿ ಪ್ರಾಧಿಕರಿಸಲ್ಪಟ್ಟ ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳು ಸರ್ಕಾರಿ ನೌಕರರ ಹಾಗೂ ಅವರ ಕುಟುಂಬದ ಸದಸ್ಯರ ಚರಾಸ್ತಿ/ಸ್ಮಿರಾಸ್ತಿಗಳ ಮಾಹಿತಿ ಹಾಗೂ ವಿವರಗಳನ್ನು ಕೋರಿದ ಸಂದರ್ಭದಲ್ಲಿ ಅವುಗಳನ್ನು ಕೆಲವು ಇಲಾಖಾ ಅಧಿಕಾರಿಗಳು ಮತ್ತು ಸಕ್ರಮ ಪ್ರಾಧಿಕಾರಿಗಳು ಒದಗಿಸದಿರುವ ಬಗ್ಗೆ ಉಲ್ಲೇಖ (1) ರ ಅರೆ ಸರ್ಕಾರದ ಪತ್ರದಲ್ಲಿ ನಿಬಂಧಕರು ಕರ್ನಾಟಕ ಲೋಕಾಯುಕ್ತ ಇವರು ಸರ್ಕಾರದ ಗಮನ ಸೆಳೆದಿದ್ದು. ಇಂತಹ ಮಾಹಿತಿಯನ್ನು (ಅವುಗಳ ಅರಸಿಕೆಗೆ (access) ಕೆಲವು ಸುರಕ್ಷತೆ ಮತ್ತು ಇತಿಮಿತಿಗಳನ್ನು ನಿಗದಿಪಡಿಸುವುದಕ್ಕೆ ಒಳಪಟ್ಟು) ಜಾಲತಾಣದಲ್ಲಿ ಪ್ರಕಟಿಸಿದಲ್ಲಿ (web host) ಅದು ಲೋಕಾಯುಕ್ತ ಸಂಸ್ಥೆಗೂ ಲಭ್ಯವಾಗುತ್ತದೆಯೆಂದು ಅಭಿಪ್ರಾಯ ಪಡುತ್ತಾ. ಇಂತಹ ಮಾಹಿತಿಯನ್ನು ಜಾಲತಾಣದಲ್ಲಿ ಪ್ರಕಟಪಡಿಸುವ ಸಂಬಂಧ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಕೋರಿರುತ್ತಾರೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ನಿಯಮ 24ರಂತೆ ಪ್ರತಿಯೊಬ್ಬ ಸರ್ಕಾರಿ ನೌಕರನು ಸರ್ಕಾರಿ ಸೇವೆಗೆ ಸೇರುವಾಗ ಹಾಗೂ ತರುವಾಯ ಪ್ರತಿ ವರ್ಷ ಆತನ ಹಾಗೂ ಆತನ ಕುಟುಂಬದ ಸದಸ್ಯರ ಆಸ್ತಿ ಹೊಣೆಗಾರಿಕೆ ಪಟ್ಟಿಯನ್ನು ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಲೋಕಾಯುಕ್ತ ಸಂಸ್ಥೆ ಅಸ್ತಿತ್ವಕ್ಕೆ ಬರುವ ಪೂರ್ವದಲ್ಲಿ ರಾಜ್ಯದಲ್ಲಿದ್ದ Vigilance Commission ಕೈಗೊಳ್ಳುವ ಇಲಾಖಾ ವಿಚಾರಣೆಗಳಲ್ಲಿ ತನಿಖಾ ಸಂಸ್ಥೆಯು ಕೋರುವ ಮಾಹಿತಿ/ದಾಖಲೆಗಳನ್ನು ವಿಳಂಬವಿಲ್ಲದೆ ಅವರಿಗೆ ಒದಗಿಸುವಂತೆ ಉಲ್ಲೇಖ(2) ಮತ್ತು (3)ರ ಸುತ್ತೋಲೆಗಳಲ್ಲಿ ಕೆಲವು ಸೂಚನೆಗಳನ್ನು ನೀಡಲಾಗಿದೆ. ಈ ಸೂಚನೆಗಳು ಲೋಕಾಯುಕ್ತದ ಪ್ರಕರಣಗಳಿಗೂ ಅನ್ವಯವಾಗುತ್ತವೆ ಎಂಬ ಅಂಶವನ್ನು ಪುನರುಚ್ಛರಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಹಾಗೂ ಅವರ ಕುಟುಂಬದ ಸದಸ್ಯರ ಆಸ್ತಿ-ಹೊಣೆಗಾರಿಕೆಗೆ ಸಂಬಂಧಿಸಿದ ಮಾಹಿತಿ ವಿವರಗಳನ್ನು ಲೋಕಾಯುಕ್ತದ ಸಕ್ಷಮ ಅಧಿಕಾರಿಗಳು ಕೋರಿದ ಸಂದರ್ಭದಲ್ಲಿ ಅವುಗಳನ್ನು ಯಾವುದೇ ವಿಳಂಬವಿಲ್ಲದೇ ಅವರಿಗೆ ಒದಗಿಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಮರಿಗೆ ಹಾಗೂ ಸಕ್ಷಮ ಪ್ರಾಧಿಕಾರಗಳಿಗೆ ಕಟ್ಟು ನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಈ ಸೂಚನೆಗಳನ್ನು ಪಾಲಿಸಲು ವಿಫಲರಾದ ಇಲಾಖಾ ಮುಖ್ಯಸ್ಥರು ಹಾಗೂ ಸಕ್ಷಮ ಪ್ರಾಧಿಕಾರಗಳನ್ನು ನೇರ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

CLICK HERE TO DOWNLOAD

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!