Government Employees: ರಾಜ್ಯ ಸರ್ಕಾರಿ ನೌಕರರಿಗೆ ಉಚಿತವಾಗಿ 1 ಕೋಟಿ ಅಪಘಾತ ವಿಮೆ ಸೌಲಭ್ಯ,ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದನೆ

Government Employees:1 ಕೋಟಿ ಉಚಿತ ಅಪಘಾತ ವಿಮೆ ಸೌಲಭ್ಯ.

Government employees: ರಾಜ್ಯ ಸರ್ಕಾರಿ ನೌಕರರು ಪ್ರಮುಖ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಮಗ್ರ ಸಂಬಳ ಪ್ಯಾಕೇಜ್ ಖಾತೆ ತೆರೆಯುವುದು ಕಡ್ಡಾಯಗೊಳಿಸಿರುವುದು ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ಉಚಿತ ವಾಗಿ 1 ಕೋಟಿ ಅಪಘಾತ ವಿಮೆ ಸೌಲಭ್ಯ ಸೇರಿ ಖಾತೆ ದಾರ ಬ್ಯಾಂಕ್ ಗಳಿಗೆ ಇತರೆ ಸೇವೆಗಳನ್ನು ಉಚಿತ ವಾಗಿ ನೀಡುವುದು ಸೇರಿದಂತೆ ಸರ್ಕಾರಿ ನೌಕರರ ಪರವಾದ ಹಲವು ನಿರ್ಣಯಗಳಿಗೆ ರಾಜ್ಯ ಸಚಿವ ಸಂಪು ಟದಲ್ಲಿ ಅನುಮೋದನೆ ದೊರೆತಿರು ವುದಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ, ವಿವಿಧ ಬ್ಯಾಂಕ್‌ಗಳು ಒದಗಿಸುವ ಸಂಬಳ ಪ್ಯಾಕೇಜ್‌ಗಳ ಅಡಿಯಲ್ಲಿ ಖಾತೆಗಳನ್ನು ತೆರೆಯುವುದು/ಆಯ್ಕೆ ಮಾಡಿಕೊಳ್ಳುವುದನ್ನು ಎಲ್ಲ ಅಧಿಕಾರಿಗಳು ಮತ್ತು ನೌಕರರಿಗೆ ಕಡ್ಡಾಯಗೊಳಿಸುವ ನಿರ್ಣಯವನ್ನು ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಇಡೀ ಸರ್ಕಾರಿ ನೌಕರರ ಪರವಾಗಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದ್ದಾರೆ. ಸ್ವಯಂ ಪ್ರೇರಿತ ಆಧಾರದ ಮೇಲೆ ವೈಯಕ್ತಿಕ ಅಪಘಾತ ವಿಮಾರಕ್ಷಣೆಯನ್ನು ಪಡೆಯಲು ಅಧಿಕಾರಿ ಮತ್ತು ನೌಕರರ ಪ್ರೋತ್ಸಾಹಕ್ಕೆ ಅನುಮೋದನೆ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಒಂದು ವಾರದೊಳಗೆ ಸರ್ಕಾರಿ ಆದೇಶ ಹೊರಬೀಳಲಿದೆ ಎಂದು ತಿಳಿಸಿದ್ದಾರೆ.

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!