Government Holiday list- 20 general holidays, 21 limited holidays in 2026
Government Holiday list- 20 general holidays, 21 limited holidays in 2026: ಸರ್ಕಾರವು 2026ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಸಾರ್ವಜನಿಕ ಮಾಹಿತಿಗಾಗಿ ಈ ಕೆಳಕಂಡಂತೆ ಪ್ರಕಟಿಸಲಾಗಿದೆ.
ಎಲ್ಲಾ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳು ಹಾಗೂ ಈ ಕೆಳಕಂಡ ದಿನಗಳು.
2026ರ ಸಾರ್ವತ್ರಿಕ ರಜಾ ದಿನಗಳು ಮತ್ತು ಪರಿಮಿತ ರಜಾ ದಿನಗಳ ಪಟ್ಟಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಂದಿನ ವರ್ಷದಲ್ಲಿ 20 ಸಾರ್ವತ್ರಿಕ ಮತ್ತು 21 ಪರಿಮಿತ ರಜಾ ದಿನಗಳು ಇರಲಿವೆ.

ಸೂಚನೆ:
1. ಈ ರಜಾ ಪಟ್ಟಿಯಲ್ಲಿ ಭಾನುವಾರಗಳಂದು ಬರುವ ಮಹಾ ಶಿವರಾತ್ರಿ (15.02.2026), ಮಹರ್ಷಿ ವಾಲ್ಮೀಕಿ ಜಯಂತಿ (25.10.2026), ಕನ್ನಡ ರಾಜ್ಯೋತ್ಸವ (01.11.2026) ಹಾಗೂ ನರಕ ಚತುರ್ದಶಿ (08.11.2026) & ಎರಡನೇ ಶನಿವಾರದಂದು ಬರುವ ಮಹಾಲಯ ಅಮವಾಸ್ಯೆ (10.10.2026) ಈ ರಜೆ ಪಟ್ಟಿಯಲ್ಲಿ ನಮೂದಿಸಿರುವುದಿಲ್ಲ.
2. ಸಾರ್ವತ್ರಿಕ ರಜಾ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಕಛೇರಿಗಳು ಮುಚ್ಚಲ್ಪಡುತ್ತವೆ. ಕಛೇರಿಯ ಜರೂರು ಕೆಲಸವನ್ನು ವಿಲೇವಾರಿ ಮಾಡುವ ಬಗ್ಗೆ, ಇಲಾಖಾ ಮುಖ್ಯಸ್ಥರುಗಳು ಸೂಕ್ತ ವ್ಯವಸ್ಥೆ ಮಾಡತಕ್ಕದ್ದು.
3. ಈ ಪಟ್ಟಿಯಲ್ಲಿ ಸೇರಿಸಲಾಗಿರುವ ಮುಸಲ್ಮಾನ ಬಾಂಧವರ ಹಬ್ಬಗಳು ನಿಗಧಿತ ದಿನಾಂಕದಂದು ಬೀಳದಿದ್ದರೆ ಸರ್ಕಾರಿ ಸೇವೆಯಲ್ಲಿರುವ ಮುಸಲ್ಮಾನ ಬಾಂಧವರಿಗೆ ನಿಗಧಿತ ರಜೆಗೆ ಬದಲಾಗಿ ಹಬ್ಬದ ದಿವಸ ರಜಾ ಮಂಜೂರು ಮಾಡಬಹುದು.
4. ದಿನಾಂಕ:03.09.2026 (ಗುರುವಾರ) ಕ್ರೈಲ್ ಮೂಹೂರ್ತ, ದಿನಾಂಕ:18.10.2026 (ಭಾನುವಾರ) ತುಲಾ ಸಂಕ್ರಮಣ ಹಾಗೂ ದಿನಾಂಕ:26.11.2026 (ಗುರುವಾರ) ಹುತ್ತರಿ ಹಬ್ಬವನ್ನು ಆಚರಿಸಲು ಕೊಡಗು ಜಿಲ್ಲೆಗೆ ಮಾತ್ರ ಅನ್ವಯವಾಗುವಂತೆ ಸ್ಥಳೀಯ ಸಾರ್ವತ್ರಿಕ ರಜೆಯನ್ನು ಘೋಷಿಸಿದೆ.
5. ಶಿಕ್ಷಣ ಇಲಾಖೆಗೆ ಸಂಬಂಧಿಸಿದ ರಜೆಗಳಿಗೆ ಅನ್ವಯಿಸಿದಂತೆ ಪ್ರತ್ಯೇಕ ರಜಾ ದಿನಗಳ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಪ್ರಕಟಿಸುವರು.
6. ಸಾರ್ವತ್ರಿಕ ರಜಾ ದಿನಗಳ ಜೊತೆಗೆ ರಾಜ್ಯ ಸರ್ಕಾರಿ ನೌಕರರು ಎರಡು ದಿವಸಗಳಿಗೆ ಮೀರದಂತೆ 2026ನೇ ವರ್ಷದಲ್ಲಿ ಅಧಿಸೂಚನೆ-1ರ ಅನುಬಂಧದಲ್ಲಿ ತಿಳಿಸಿರುವ ಪರಿಮಿತ ರಜೆಯನ್ನು ಪೂರ್ವಾನುಮತಿ ಪಡೆದು ಉಪಯೋಗಿಸಿಕೊಳ್ಳಬಹುದು. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಅಧಿಕಾರವುಳ್ಳ ಅಧಿಕಾರಿಗಳು ಪ್ರಸ್ತುತ ಅನುಮತಿಗೆ ಮಂಜೂರಾತಿ ನೀಡತಕ್ಕದ್ದು.
1 thought on “Government Holiday list- 20 general holidays, 21 limited holidays in 2026”