Govt school teacher transfer 2024-25 Guidelines Released. Soon
Govt school teacher transfer 2024-25
Govt school teacher transfer 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ ದತ್ತಾಂಶಗಳ ಇಂದೀಕರಣ, ಶಿಕ್ಷಕರ ವೇಟೆಡ್ ಅಂಕಗಳ ಪ್ರಕಟಣೆ, ಆಕ್ಷೇಪಣೆ ಸ್ವೀಕಾರ, ಸದರಿ ಆಕ್ಷೇಪಣೆಗಳನ್ನು ಡಿ.ಡಿ.ಒ ರವರು ದಾಖಲೆಗಳೊಂದಿಗೆ ಪರಿಶೀಲನೆ ಮತ್ತು ಸರಿಯಾದ ಮಾಹಿತಿಯನ್ನು ತಂತ್ರಾಂಶದಲ್ಲಿ ಇಂದೀಕರಣ ಮಾಡಬೇಕಾಗಿರುತ್ತದೆ. ತದನಂತರ ದತ್ತಾಂಶಗಳನ್ನು ಸ್ಥಿರೀಕರಿಸಿ ಮುಂದಿನ ಚಟುವಟಿಕೆಗಳಾದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಒಳಬರುವವರಿಗೆ ಆಯ್ಕೆ ಪ್ರಕ್ರಿಯೆ, ಹುದ್ದೆಗಳ ಸರ್ಮಪಕ ಮರುಹಂಚಿಕೆ(Rationalisation), ತದನಂತರ ಸಾಮಾನ್ಯ ವರ್ಗಾವಣೆಗೆ ವೇಳಾಪಟ್ಟಿ ಬಿಡುಗಡೆ ಮಾಡಬೇಕಾಗಿದೆ ಎಂದು ಇಲಾಖೆ ತಿಳಿಸಿದೆ. ಶಿಕ್ಷಕರ ಸಾಮಾನ್ಯ ವರ್ಗಾವಣೆ ಮಾರ್ಗಸೂಚಿ 20-03-2025 ನಂತರ ಬಿಡುಗಡೆಯಾಗುವ ಸಾಧ್ಯತೆ ಇದೆ.
ಸೇವಾ ಅಂಕಗಳ ತಿದ್ದುಪಡಿಗೆ ದಿನಾಂಕ : 20-03-2025ರ ವರೆಗೆ ತಂತ್ರಾಂಶದಲ್ಲಿ ಕಾಲಾವಕಾಶ ಕಲ್ಪಿಸಲಾಗಿದ್ದು, ತದನಂತರ ತಂತ್ರಾಂಶದಲ್ಲಿ ಯಾವುದೇ ಬದಲಾವಣೆಗೆ ಅವಕಾಶವಿರುವುದಿಲ್ಲ ಅಂತಾ ಜ್ಞಾಪನದಲ್ಲಿ ತಿಳಿಸಲಾಗಿದೆ.
▪️ಪ್ರಕಟಿತ ಸೇವಾ ಅಂಕಗಳನ್ನು (weighted score), ಪರಿಶೀಲಿಸಿಕೊಳ್ಳಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
https://tinyurl.com/weighted-score