Gruhalakshmi Scheme: 03 ತಿಂಗಳ ಬಾಕಿ ಹಣ ಶೀಘ್ರದಲ್ಲಿ ಬಿಡುಗಡೆ.
Gruhalakshmi: ಕಳೆದ ಮೂರು ತಿಂಗಳಿಂದ ಬಿಡುಗಡೆ ಆಗಬೇಕಾಗಿದ್ದ ಗೃಹಲಕ್ಷ್ಮಿಹಣ ಜಮೆ ಪ್ರಕ್ರಿಯೆಗೆ ಶೀಫ್ರದಲ್ಲಿ ಮರು ಚಾಲನೆ ಸಿಗಲಿದೆ.
“ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ”
ಹಣ ಜಮೆ ಮಾಡುವ ಪ್ರಕ್ರಿಯೆ ಬದಲಾವಣೆ ಮಾಡಿದ ಕಾರಣದಿಂದಾಗಿ ಸ್ವಲ್ಪ ವಿಳಂಬ ಆಗಿತ್ತು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಹೇಳಿಕೊಂಡಿದೆ.
ಗೃಹಲಕ್ಷ್ಮಿ ಯೋಜನೆಗೆ ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ವರ್ಗಾವಣೆ ವಿಳಂಬವಾಗಿದೆ ಎಂದು ತಿಳಿಸಿದ್ದಾರೆ. ಶೀಘ್ರದಲ್ಲಿ ಗೃಹಲಕ್ಷ್ಮಿ ಯೋಜನೆ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗಲಿದೆ.
ಈ ಹಿಂದಿನಂತೆ ಜಿಲ್ಲಾ ಉಪನಿರ್ದೇಶಕರ ಮೂಲಕ ಗೃಹಲಕ್ಷ್ಮಿ ಯೋಜನೆ, ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದೆ. ಉಪನಿರ್ದೇಶಕರ ಮೂಲಕ ಹಣ ಪಾವತಿಸಲಾಗುವುದು. ಆರ್ಥಿಕ ಇಲಾಖೆಯಿಂದ 15 ದಿನಗಳ ಹಿಂದೆಯೇ ಹಣ ಬಂದಿದೆ. ತಾಲೂಕು ಪಂಚಾಯಿತಿ ಕಚೇರಿಗಳಿಂದ ಇಲಾಖೆಗೆ ಹಣ ಬರುವುದು ವಿಳಂಬವಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.