Guest Teacher: ಅತಿಥಿ ಶಿಕ್ಷಕರ/ ಉಪನ್ಯಾಸಕರ ವೇತನ ಪರಿಷ್ಕರಣೆ ಮಾಡುವ ಕುರಿತು ದಿ:09-12-2024

Guest Teacher: ಅತಿಥಿ ಶಿಕ್ಷಕರ/ ಉಪನ್ಯಾಸಕರ ವೇತನ ಪರಿಷ್ಕರಣೆ ಮಾಡುವ ಕುರಿತು ದಿ:09-12-2024.

ಅತಿಥಿ ಶಿಕ್ಷಕರ/ ಉಪನ್ಯಾಸಕರ ವೇತನ ಪರಿಷ್ಕರಣೆ ಮಾಡುವ ಕುರಿತಾಗಿ ಸದನದಲ್ಲಿ ಕೇಳಿದ ಪ್ರಶ್ನೆಗೆ ಮಾನ್ಯ ಶಿಕ್ಷಣ ಸಚಿವರು ನೀಡಿದ ಉತ್ತರ.

ಪ್ರಶ್ನೆ. ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ/ಉಪನ್ಯಾಸಕರ ಸಂಖ್ಯೆ ಎಷ್ಟು (ಜಿಲ್ಲಾವಾರು ವಿವರ ನೀಡುವುದು)

ಉತ್ತರ: ರಾಜ್ಯದ ಸರ್ಕಾರಿ ಪ್ರಾಥಮಿಕ ಪ್ರೌಢಶಾಲೆ/ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2024- 25ನೇ ಸಾಲಿನ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ಈ ಕೆಳಕಂಡಂತೆ ಅತಿಥಿ ಶಿಕ್ಷಕರು/ ಉಪನ್ಯಾಸಕರನ್ನು ನೇಮಿಸಲಾಗಿದೆ.

  • ಪ್ರಾಥಮಿಕ: 35,000
  • ಪ್ರೌಢ: 8.968
  • ಪದವಿಪೂರ್ವ: 4,689

(ಜಿಲ್ಲಾವಾರು ವಿವರ ಅನುಬಂಧದಲ್ಲಿ ಒದಗಿಸಿದೆ- CLICK HERE)

ಪ್ರಶ್ನೆ : ಈ ಅತಿಥಿ ಶಿಕ್ಷಕರಿಗೆ/ಉಪನ್ಯಾಸಕರಿಗೆ ಸರ್ಕಾರ ನೀಡುತ್ತಿರುವ ವೇತನ ಎಷ್ಟು ವೇತನದ ಜೊತೆಗೆ ನೀಡುತ್ತಿರುವ ಇನ್ನಿತರೆ ಸೌಲಭ್ಯಗಳೇನು;

ಉತ್ತರ: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆ/ಪ್ರೌಢಶಾಲೆ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ/ಉಪನ್ಯಾಸಕರಿಗೆ ಈ ಕೆಳ ಕಂಡಂತೆ ಗೌರವ ಸಂಭಾವನೆ ಪಾವತಿಸಲಾಗುತ್ತಿದೆ.

  • ಪ್ರಾಥಮಿಕ: ರೂ.10,000/-
  • ಪ್ರೌಢ: ರೂ.10,500/-
  • ಪದವಿಪೂರ್ವ:ರೂ.12,000

ಗೌರವ ಸಂಭಾವನೆ ಜೊತೆಗೆ ಬೇರೆ ಯಾವುದೇ ಸೌಲಭ್ಯಗಳನ್ನು ನೀಡಲಾಗುತ್ತಿಲ್ಲ.

ಪ್ರಶ್ನೆ : ಅತಿಥಿ ಶಿಕ್ಷಕರ/ಉಪನ್ಯಾಸಕರ ವೇತನ ಹೆಚ್ಚಳ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿದೆಯೇ, ಹಾಗಿದ್ದರೇ ಯಾವಾಗ ಹೆಚ್ಚಳ ಮಾಡಲಾಗುವುದು: (ವಿವರ | ಒದಗಿಸುವುದು

ಉತ್ತರ: ರಾಜ್ಯದ ಸರ್ಕಾರಿ ಪ್ರಾಥಮಿಕ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ನೇಮಕ ಮಾಡುವ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆಯನ್ನು ಅನುಕ್ರಮವಾಗಿ ರೂ.15000/- ಹಾಗೂ ರೂ.16000/- ಪರಿಷ್ಕರಿಸಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಆರ್ಥಿಕ  ಇಲಾಖೆಯು ದಿನಾಂಕ:13.06.2022ರಲ್ಲಿ ಪರಿಷ್ಕರಿಸಲು ಸಹಮತಿ ನೀಡಿರುವುದರಿಂದ ಗೌರವ ಸಂಭಾವನೆಯನ್ನು ಪರಿಷ್ಕರಿಸಲು ಸಾಧ್ಯವಿಲ್ಲವೆಂದು ದಿನಾಂಕ:25.03.2024 ಹಿಂಬರಹ ನೀಡಿದೆ.

ಪ್ರಶ್ನೆ: ಸದರಿ ಶಿಕ್ಷಕರ/ಉಪನ್ಯಾಸಕರ ಬದಲಾಗಿ ಅರೆಕಾಲಿಕಾ ಶಿಕ್ಷಕರಾಗಿ ನೇಮಕ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿದೆಯೇ ಕಾರಣಗಳೇನು?

ಉತ್ತರ: ಅತಿಥಿ ಶಿಕ್ಷಕರು/ಉಪನ್ಯಾಸಕರ ಬದಲಾಗಿ ಅರೆಕಾಲಿಕ ಶಿಕ್ಷಕರಾಗಿ ನೇಮಕ ಮಾಡುವ ಪ್ರಸ್ತಾವನೆ ಇರುವುದಿಲ್ಲ.

 

Leave a Comment