Guest Teacher-2026-27: ಖಾಲಿ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕ ಅತಿಥಿ ಶಿಕ್ಷಕರ ನೇಮಕ

Guest Teacher-2026-27: ಖಾಲಿ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕ ಅತಿಥಿ ಶಿಕ್ಷಕರ ನೇಮಕ

Guest Teacher-2026-27: 2025-26ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಒಟ್ಟು 51,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (2) ರ ಏಕ ಕಡತದಲ್ಲಿ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು, ಇವರು 2026-27ನೇ ಶೈಕ್ಷಣಿಕ ವರ್ಷದ ಏಕ ರೂಪದ ಮಾರ್ಗಸೂಚಿಯನ್ನು ನಿಗದಿಪಡಿಸಿ 2026, ಮೇ ತಿಂಗಳಿನಲ್ಲಿಯೇ ಶಾಲೆಗಳು ಪ್ರಾರಂಭವಾಗಲಿದ್ದು, ಅದರಂತೆ 2026-27ನೇ ಸಾಲಿನಲ್ಲಿ ಪೂರ್ವ ನಿಗದಿಯಂತೆ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಿ ನಿರ್ವಹಣೆ ಮಾಡಬೇಕಾಗಿದ್ದು, ಶಾಲಾ ಪ್ರಾರಂಭದ ದಿನವೇ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೊ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಅನಿವಾರ್ಯತೆ ಇದ್ದು,

ಸರ್ಕಾರಿ ಪ್ರಾಥಮಿಕ / ಪ್ರೌಢ ಶಾಲೆಗಳನ್ನು ಪ್ರಾರಂಭಿಸಿ, ಶೈಕ್ಷಣಿಕ ಚಟುವಟಿಕೆ ನಿರ್ವಹಣೆ ಮಾಡಬೇಕಾಗಿರುತ್ತದೆ ಎಂದು ವರದಿ ಮಾಡುತ್ತಾ, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲೇ ಅತಿಥಿ ಶಿಕ್ಷಕರನ್ನು ಶಾಲೆಗಳಿಗೆ ಲಭ್ಯಪಡಿಸಿದ್ದಲ್ಲಿ, ವಿದ್ಯಾರ್ಥಿಗಳ ಶೈಕ್ಷಣಿಕ ಬೋಧಕ ಪ್ರಕ್ರಿಯೆಗೆ ಅನುಕೂಲವಾಗುತ್ತದೆಂಬ ಅಂಶದೊಂದಿಗೆ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ನೇಮಕ ಮಾಡಿದಂತೆಯೇ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅವಶ್ಯವಿರುವ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಕೋರಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.

ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2026-27ನೇ ಶೈಕ್ಷಣಿಕ ಸಾಲಿಗೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಯಿತು.

ಅದರಂತೆ ಈ ಕೆಳಕಂಡ ಆದೇಶ.

ಸರ್ಕಾರದ ಆದೇಶ ಸಂಖ್ಯೆ: ಇಪಿ 160 ಎಸ್‌ಇಎಸ್ 2026,ಬೆಂಗಳೂರು ದಿನಾಂಕ:22-05-2026

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಪ್ರಸ್ತುತ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಖಾಯಂ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು, ಈ ಕೆಳಕಂಡಂತೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಿದೆ.

 

ಕ್ರ.ಸಂ. ಶಾಲೆಗಳ ವಿವರ ನೇಮಕಾತಿಗೆ ಸಹಮತಿಸಿರುವ ಅತಿಥಿ ಶಿಕ್ಷಕರುಗಳ ಸಂಖ್ಯೆ
01 ಪ್ರಾಥಮಿಕ ಶಾಲೆಗಳು 40,000
02 ಪ್ರೌಢಶಾಲೆಗಳು 11,000
ಒಟ್ಟು 51,000

 

ಮುಂದುವರೆದು, 2026-27 ನೇ ಶೈಕ್ಷಣಿಕ ಸಾಲಿಗೆ ನೇಮಕಾತಿ ಮಾಡಿಕೊಳ್ಳಲಾಗುವ ಒಟ್ಟು 51,000 ಅತಿಥಿ ಶಿಕ್ಷಕರ ಗೌರವಧನ ಪಾವತಿಗಾಗಿ ಅವಶ್ಯವಿರುವ ಅನುದಾನದ ವಿವರ ಹಾಗೂ ಅತಿಥಿ ಶಿಕ್ಷಕರು ಜಿಲ್ಲಾ/ತಾಲ್ಲೂಕುವಾರು ವಿವರಗಳೊಂದಿಗೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿದೆ.

ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: ಆಇ 371 ವೆಚ್ಚ-8/2026, ದಿನಾಂಕ: 20.05.2026ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಲಾಗಿದೆ.

Guest Teacher

CLICK HERE TO DOWNLOAD ORDER 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!