Guest teacher/Guest lecturer honorarium: ಅತಿಥಿ ಶಿಕ್ಷಕ/ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ ಮಾಡಿ ಸರ್ಕಾರದ ಮಹತ್ವದ ಆದೇಶ
Guest teacher/Guest lecturer honorarium:
Guest teacher/Guest lecturer honorarium: ಅತಿಥಿ ಶಿಕ್ಷಕ/ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ ಮಾಡಿ ಸರ್ಕಾರದ ಮಹತ್ವದ ಆದೇಶ
ಪ್ರಸ್ತಾವನೆ:-ಮೇಲೆ ಓದಲಾದ ಕ್ರಮ ಸಂಖ್ಯೆ (1) ರ ಸರ್ಕಾರದ ಆದೇಶದಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ನೇಮಕ ಮಾಡಿಕೊಂಡು ಕಾರ್ಯ ನಿರ್ವಹಿಸಲಾದ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಅನುಕ್ರಮವಾಗಿ ರೂ.7500/- ಮತ್ತು ರೂ.8000/- ಗಳಿಗೆ ನಿಗಧಿಪಡಿಸಿ ಆದೇಶಿಸಲಾಗಿತ್ತು.
ಮೇಲೆ ಓದಲಾದ ಕ್ರಮ ಸಂಖ್ಯೆ (2) ರ ಸರ್ಕಾರದ ಆದೇಶದಲ್ಲಿ ಸದರಿ ಗೌರವ ಸಂಭಾವನೆಯನ್ನು ಪರಿಷ್ಕರಿಸಿ ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರುಗಳಿಗೆ ರೂ.10000/-ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಅತಿಥಿ ಶಿಕ್ಷಕರುಗಳಿಗೆ ರೂ.10,500/- ಗಳ ಗೌರವ ಸಂಭಾವನೆಯನ್ನು ನಿಗಧಿಪಡಿಸಿ ಆದೇಶಿಸಲಾಗಿತ್ತು.
ಮೇಲೆ ಓದಲಾದ ಕ್ರಮ ಸಂಖ್ಯೆ (3)ರ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ ದಿನಾಂಕ:10.10.2023 ರ ಪತ್ರದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವ ಅತಿಥಿ ಶಿಕ್ಷಕರುಗಳಿಗೆ ವಸ್ತುತ ನೀಡಲಾಗುತ್ತಿರುವ ಗೌರವ ಸಂಭಾವನೆಯನ್ನು ಹೆಚ್ಚಳ ಮಾಡಿ ಪರಿಷ್ಕರಿಸುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.
2025-26 ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ಅತಿಥಿ ಶಿಕ್ಷಕರು /ಅತಿಥಿ ಉಪನ್ಯಾಸಕರುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ ರೂ.2000/- (ಎರಡು ಸಾವಿರ ರೂಪಾಯಿಗಳು ಮಾತ್ರ) ಹೆಚ್ಚಿಸಲು ಮೇಲೆ (4) ರಲ್ಲಿ ಓದಲಾದ Budget Advice ನಲ್ಲಿ ಆರ್ಥಿಕ ಇಲಾಖೆಯ ಅನುಷ್ಠಾನಗೊಳಿಸಲು ತಿಳಿಸಲಾಗಿರುತ್ತದೆ. ಅದರಂತೆ ಈ ಕೆಳಕಂಡ ಆದೇಶ.
ಸರ್ಕಾರದ ಆದೇಶ ಸಂಖ್ಯೆ: ಇಪಿ 137 ಎಸ್ಇಎಸ್ 2025, ಬೆಂಗಳೂರು ದಿನಾಂಕ:15.05.2025
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ / ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಬೋಧಕ ಹುದ್ದೆಗಳ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇಮಕಾತಿ ಮಾಡಿಕೊಳ್ಳಲಾಗುತ್ತಿರುವ ಅತಿಥಿ ಶಿಕ್ಷಕರು / ಅತಿಥಿ ಉಪನ್ಯಾಸಕರುಗಳ ಗೌರವ ಸಂಭಾವನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡಂತೆ ಪರಿಷ್ಕರಿಸಿ ಆದೇಶಿಲಾಗಿದೆ.

ಈ ಆದೇಶವನ್ನು ಅರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ ಆಇ 351 ವೆಚ್ಚ 8/2025 ದಿನಾಂಕ: 28.04.2025 ರಲ್ಲಿ ನೀಡಿರುವ ಸಹಮತಿಯೊಂದಿಗೆ ಹೊರಡಿಸಲಾಗಿದೆ.
CLICK HERE TO DOWNLOAD ORDER