Helpline Programme for SSLC 2025 Exam-1 Students: SSLC ವಿದ್ಯಾರ್ಥಿಗಳಿಗೆ ಸಹಾಯವಾಣಿ ಕೌನ್ಸಿಲಿಂಗ್ ಕಾರ್ಯಕ್ರಮ,ಕರೆ ಮಾಡಿ

Helpline Programme: SSLC ವಿದ್ಯಾರ್ಥಿಗಳಿಗೆ ಸಹಾಯವಾಣಿ ಕೌನ್ಸಿಲಿಂಗ್ ಕಾರ್ಯಕ್ರಮ.

Helpline Programme: SSLC EXAM-2025: ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಮಕ್ಕಳು ಗಳಿಸಬೇಕೆಂದು ಪೋಷಕರ ಅಭಿಲಾಷೆಯಾಗಿರುತ್ತದೆ.

ವಿದ್ಯಾರ್ಥಿಗಳ ಸಾಮರ್ಥ್ಯ, ಬುದ್ದಿಶಕ್ತಿ, ಆಸಕ್ತಿ, ಕ್ರಿಯಾಶೀಲತೆ, ಕಠಿಣ ಪರಿಶ್ರಮ ಇವುಗಳನ್ನು ಗಣನೆಗೆ ತೆಗೆದುಕೊಳ್ಳದೆ ಹೆಚ್ಚು ಅಂಕಗಳನ್ನು ಗಳಿಸಿ ಎಂದು ಅವರ ಮೇಲೆ ಒತ್ತಡವನ್ನು ಪೋಷಕರು/ಶಿಕ್ಷಕರು ಹಾಕುತ್ತಿರುವುದು ಇತ್ತೀಚಿನ ಸಮಸ್ಯೆಯಾಗಿದೆ. ಇದರಿಂದ ವಿದ್ಯಾರ್ಥಿಗಳು ಅಧ್ಯಯನದ ಕಡೆ ಗಮನಹರಿಸಲಾಗದಿರುವುದು, ಏಕಾಗ್ರತೆಯನ್ನು ಕಳೆದುಕೊಳ್ಳುತ್ತಿರುವುದು ಕಂಡು ಬಂದಿದ್ದು, ಈ ಸಮಸ್ಯೆ ನಿವಾರಣೆಯಾಗದೆ ವಿದ್ಯಾರ್ಥಿ ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸಾಧ್ಯವಾಗುವುದಿಲ್ಲ. ಈ ಸಮಸ್ಯೆಗಳ ನಿವಾರಣೆ ಮಾಡಿ, ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸ್ಪೂರ್ತಿ ನೀಡಬೇಕಾದ ಅವಶ್ಯಕತೆ ಇದೆ.

ಈ ರೀತಿಯ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಂಡು ಹಿಡಿಯುವ ಹಾಗೂ ಭಯರಹಿತವಾಗಿ ಪರೀಕ್ಷೆ ಬರೆಯಲು ಅತ್ಮಸ್ಥೆರ್ಯ (confidence) ತುಂಬುವ ಸದುದ್ದೇಶದಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಹಿಂದಿನ ವರ್ಷಗಳಂತೆ ಈ ವರ್ಷವೂ ‘ಸಹಾಯವಾಣಿ’ (Helpline) ಕೌನ್ಸಿಲಿಂಗ್ (counseling) ಕಾರ್ಯಕ್ರಮವನ್ನು ದಿನಾಂಕ:10.03.2025 ಸೋಮವಾರ ಅಪರಾಹ್ನ 02.30 ಗಂಟೆಗೆ ಪ್ರಾರಂಭಿಸಲಾಗುವುದು. ಇದಕ್ಕಾಗಿ ಈ ಕೆಳಗಿನ ಎರಡು ದೂರವಾಣಿ ಸಂಖ್ಯೆಗಳನ್ನು ಮೀಸಲಿಡಲಾಗಿದೆ.

 

ಈ “ಸಹಾಯವಾಣಿ”ಯು ದಿನಾಂಕ:10.03.2025 ರಿಂದ 19.03.2025ರವರೆಗೆ ಪ್ರತಿ ದಿನ ಅಪರಾಹ್ನ 02.30 ರಿಂದ ಸಂಜೆ 6.30 ಗಂಟೆಯವರೆಗೆ ಹಾಗೂ 16.03.2025ರಂದು ಬೆಳಿಗ್ಗೆ 11.00 ಗಂಟೆಯಿಂದ ಸಂಜೆ 5.00 ರವರೆಗೆ ಕಾರ್ಯನಿರ್ವಹಿಸಲಾಗುತ್ತದೆ. ದಿನಾಂಕ:21.03.2025 ರಿಂದ 04.04.2025 ರವರೆಗೆ ನಿಯಂತ್ರಣ ಕೊಠಡಿಯಾಗಿ ಬೆಳಿಗ್ಗೆ 10.00 ರಿಂದ ಮದ್ಯಾಹ್ನ 2.00 ಗಂಟೆಯವರೆಗೆ ಪರೀಕ್ಷಾ ದಿನಗಳಂದು ಮಾತ್ರ ಕಾರ್ಯನಿರ್ವಹಿಸಲಾಗುತ್ತದೆ.

ಪೋಷಕರು, ವಿದ್ಯಾರ್ಥಿಗಳು ಮೇಲೆ ತಿಳಿಸಿರುವ ದೂರವಾಣಿ ಸಂಖ್ಯೆಗೆ ಕರೆಮಾಡಿ ತಮ್ಮ ಸಮಸ್ಯೆಗಳಿಗೆ, ಸಂದೇಹಗಳಿಗೆ ಪರಿಹಾರ ಪಡೆದುಕೊಳ್ಳಬಹುದು. ಹೆಚ್ಚಿನ ರೀತಿಯಲ್ಲಿ ವಿದ್ಯಾರ್ಥಿಗಳು, ಪೋಷಕರು ಸದರಿ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

 

ಹೆಚ್ಚಿನ ಮಾಹಿತಿಗಾಗಿ – CLICK HERE

ಇದನ್ನೂ ನೋಡಿ..….2025-26 ನೇ ಸಾಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ವಿವಿಧ ವಸತಿ ಶಾಲೆಗಳ ಎಲ್ಲಾ ಜಿಲ್ಲೆಗಳ ಮೆರಿಟ್ ಪಟ್ಟಿ ಪ್ರಕಟ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!