High School Teachers Promotion-2025|ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರ ರಾಜ್ಯ ಮಟ್ಟದ ಒಂದೇ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟಿಸುವ ಕುರಿತು.

High School Teachers Promotion-2025|ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರ ರಾಜ್ಯ ಮಟ್ಟದ ಒಂದೇ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟಿಸುವ ಕುರಿತು.

 

High School Teachers Promotion-2025:

ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, 18ನೇ ಅಡ್ಡರಸ್ತೆ, ಮಲ್ಲೇಶ್ವರ, ಬೆಂಗಳೂರು, ಇವರ ಪತ್ರದಲ್ಲಿ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕರು ಗ್ರೇಡ್-2 ವೃಂದದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ಶಾಲಾ ಶಿಕ್ಷಣ ಇಲಾಖೆಯ ನಾಲ್ಕೂ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಪ್ರೌಢಶಾಲಾ ಸಹಶಿಕ್ಷಕರುಗಳ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸಿ ಸಲ್ಲಿಸಲು ಕೋರಿರುತ್ತಾರೆ.

ಪ್ರಸ್ತುತ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-2 ರವರ ಜೇಷ್ಠತಾ ಪಟ್ಟಿಯನ್ನು ವಿಭಾಗವಾರು ಸಿದ್ಧಪಡಿಸಲಾಗುತ್ತಿದೆ. ಆದ್ದರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕೋರಿಕೆಯಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ಸಂಬಂಧ ಸ್ನಾತಕೋತ್ತರ ಪದವಿ ಪಡೆದಿರುವ ಪ್ರೌಢಶಾಲಾ ಸಹಶಿಕ್ಷಕರು ಗ್ರೇಡ್-2 ರವರ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ಸಿದ್ಧಪಡಿಸುವ ಸಂಬಂಧ ದಿನಾಂಕ : 01.06.2024 ರ ಈ ಕಛೇರಿಯ ಪತ್ರದಲ್ಲಿ ಸರ್ಕಾರಕ್ಕೆ ಮಾರ್ಗದರ್ಶನ ಕೋರಲಾಗಿರುತ್ತದೆ.

ದಿನಾಂಕ : 23.10.2024 ರ ಸರ್ಕಾರದ ಪತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪ್ರೌಢಶಾಲಾ ಸಹಶಿಕ್ಷಕರುಗಳ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು (inter se ) ಸಿದ್ಧಪಡಿಸುವ ಕುರಿತು ನಿರ್ದೇಶನ ನೀಡಲಾಗಿರುತ್ತದೆ.

ಸರ್ಕಾರದಿಂದ ನೀಡಿದ ನಿರ್ದೇಶನಗಳಿಗೆ ಕೆಲವು ಸ್ಪಷ್ಟನೆಗಳ ಅಗತ್ಯ ಕಂಡು ಬಂದಿದ್ದರಿಂದ 24.02.2025 ರ ಪತ್ರದಲ್ಲಿ ಮತ್ತೊಮ್ಮೆ ಸರ್ಕಾರಕ್ಕೆ ಮಾರ್ಗದರ್ಶನ ಕೋರಿದ್ದು, ಉಲ್ಲೇಖ -8 ರ ಪತ್ರಗಳಲ್ಲಿ ಮಾರ್ಗದರ್ಶನ ಸ್ವೀಕರಿಸಲಾಗಿದೆ.

9. ವೇಳಾಪಟ್ಟಿಯಂತೆ ನಿಗದಿತ ಸಮಯದೊಳಗೆ ಸಂಬಂಧಿತ ಪ್ರಾಧಿಕಾರದ ಮೂಲಕ ಸಲ್ಲಿಸಿದ ಆಕ್ಷೇಪಣೆಗಳನ್ನು ಮಾತ್ರ ಪರಿಗಣಿಸಲಾಗುವುದು. ನಂತರದ ದಿನಾಂಕ ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಅಂತಿಮ ಪಟ್ಟಿ ಪ್ರಕಟವಾದ ನಂತರ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.

 

CLICK HERE TO DOWNLOAD ORDER

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!