High school teachers promotion: Video conference meeting procedure-2025

High school teachers promotion: Video conference meeting procedure

High school teachers promotion: Regarding the promotion of high school teachers of the Department of School Education who have obtained a Master’s degree to the post of lecturers of the Department of Pre-University Education.

ಸ್ನಾತಕೋತ್ತರ ಪದವಿ ಪಡೆದಿರುವ ಶಾಲಾ ಶಿಕ್ಷಣ ಇಲಾಖೆಯ ಪ್ರೌಢಶಾಲಾ ಸಹಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ ನೀಡಲು ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಸಹಶಿಕ್ಷಕರ ಒಂದೇ ಜೇಷ್ಠತಾ ಪಟ್ಟಿಯನ್ನು ಸಿದ್ಧಪಡಿಸುವ ಕುರಿತು ದಿನಾಂಕ : 29/03/2025 ರಂದು ನಿರ್ದೇಶಕರು (ಪ್ರೌಢಶಿಕ್ಷಣ] ರವರ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಕಾನ್ಸರೆನ್ಸ್ ಸಭೆಯ ನಡಾವಳಿ

ಹಾಜರಿದ್ದವರ ವಿವರ:-

1. ಶ್ರೀ ಕೃಷ್ಣಾ.ಜಿ.ಎಸ್.ಕರಿಚಣ್ಣನವರ್, ನಿರ್ದೇಶಕರು, ಪ್ರೌಢ ಶಿಕ್ಷಣ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು

2. ವಿಭಾಗೀಯ ಸಹನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ, video conference ಮುಖಾಂತರ

3. ರಾಜ್ಯದ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರು(ಆ) ಶಾ.ಶಿ.ಇ, video conference ಮುಖಾಂತರ

4. ಉಪನಿರ್ದೇಶಕರು, ಪ್ರೌಢ ಶಿಕ್ಷಣ, ಆಯುಕ್ತರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು

ಸಭೆಗೆ ಹಾಜರಿದ್ದ ಎಲ್ಲರನ್ನು ಸ್ವಾಗತಿಸುವುದರೊಂದಿಗೆ ಸಭೆ ಪ್ರಾರಂಭಿಸಲಾಯಿತು. ಸಭೆಯಲ್ಲಿ ಈ ಕೆಳಕಂಡ ಅಂಶಗಳ ಬಗ್ಗೆ ಚರ್ಚಿಸಲಾಯಿತು.

1. ವಿಭಾಗೀಯ ಸಹನಿರ್ದೇಶಕರ ಕಛೇರಿಯಿಂದ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಸಹಶಿಕ್ಷಕರ ವಿವರಗಳನ್ನು ನಿಗದಿತ ನಮೂನೆಯಲ್ಲಿ ಸ್ವೀಕೃತವಾಗಿರುತ್ತದೆ. ಈ ದತ್ತಾಂಶವನ್ನು ಕ್ರೋಡೀಕರಿಸಿ ಒಂದೇ ಜೇಷ್ಠತಾ ಪಟ್ಟಿಯನ್ನು ಸಿದ್ಧಪಡಿಸಲು ಕ್ರಮವಹಿಸಲಾಗುತ್ತದೆ.

2. ಈ ಪ್ರಕ್ರಿಯೆಯಲ್ಲಿ ಹೆಚ್ಚಿನ ನಿಖರತೆಗೆ ಈಗಾಗಲೇ ಸಲ್ಲಿಸಿರುವ ಮಾಹಿತಿಯೊಂದಿಗೆ ಈ ಕೆಳಕಂಡ ವಿವರಗಳ ಅಗತ್ಯವಿರುತ್ತದೆ.

1) IF PROMOTED PROMOTION ORDER DATE

2) IF PROMOTED SL NO IN PROMOTION ORDER

3) IF PROMOTED % IN PRIMARY CADRE SELECTION (ENTER ALL DIGITS NOT TO BE ROUNDED OFF)

4) IF DR SELECTION ORDER DATE

5) IF DR SL.NO IN SELECTION LIST

6) IF DR % IN SELECTION ORDER (ENTER ALL DIGITS NOT TO BE ROUNDED OFF)

ಸದರಿ ವಿವರಗಳನ್ನು ಈಗಾಗಲೇ ಸಿದ್ಧಪಡಿಸಿರುವ ನಮೂನೆಯಲ್ಲಿ Column No 11,12,13, 15,16,17 ರಲ್ಲಿ ಈ ಹಿಂದೆ ಸಲ್ಲಿಸಿರುವ ವಿವರಗಳೊಂದಿಗೆ ಭರ್ತಿ ಮಾಡಲು ತಿಳಿಸಿದೆ.

3. ಈಗಾಗಲೇ ನಮೂನೆಯಲ್ಲಿ ಸಲ್ಲಿಸಿರುವ ಮಾಹಿತಿಯನ್ನು ಪುನರ್ ಪರಿಶೀಲಿಸಿ ತಪ್ಪುಗಳಿದ್ದಲ್ಲಿ ಸರಿಪಡಿಸಿ ಸಲ್ಲಿಸುವುದು.

4. ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ತುರ್ತಾಗಿ ಸರ್ಕಾರಕ್ಕೆ ಸಲ್ಲಿಸಬೇಕಾಗಿದ್ದು, ದಿನಾಂಕ : 05.04.2025 ರ ಒಳಗೆ ವಿಭಾಗೀಯ ಸಹನಿರ್ದೇಶಕರು ಈ ಕಛೇರಿಗೆ ಸಲ್ಲಿಸಲು ತಿಳಿಸಿದೆ. ಇದಕ್ಕೆ ಎಲ್ಲಾ ವಿಭಾಗೀಯ ಸಹನಿರ್ದೇಶಕರು ಸಹಮತಿಸಿದರು.

ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರು(ಆ) ರವರು ಈ ಕುರಿತು ಕೂಡಲೇ ಕ್ರಮವಹಿಸಿ ನಿಖರವಾದ ಮಾಹಿತಿ ಸಿದ್ಧಪಡಿಸಿ ವಿಭಾಗೀಯ ಸಹನಿರ್ದೇಶಕರಿಗೆ ಸಕಾಲದಲ್ಲಿ ಸಲ್ಲಿಸಲು ತಿಳಿಸುವುದರೊಂದಿಗೆ ಸಭೆಯನ್ನು ಮುಕ್ತಾಯಗೊಳಿಸಲಾಯಿತು.

 

CLICK HERE TO DOWNLOAD

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!