Honorarium Grant for Guest Teachers: ಸರ್ಕಾರಿ ಶಾಲೆಗಳ ಅತಿಥಿ ಶಿಕ್ಷಕರ ಗೌರವಧನ ಪಾವತಿಗೆ ಸರ್ಕಾರದಿಂದ ಅನುದಾನ ಬಿಡುಗಡೆ-2026

Honorarium Grant for Guest Teachers: ಸರ್ಕಾರಿ ಶಾಲೆಗಳ ಅತಿಥಿ ಶಿಕ್ಷಕರ ಗೌರವಧನ ಪಾವತಿಗೆ ಸರ್ಕಾರದಿಂದ ಅನುದಾನ ಬಿಡುಗಡೆ-2026

Honorarium Grant for Guest Teachers: ರಾಜ್ಯದ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ತೆರವಾಗಿರುವ ಶಿಕ್ಷಕರ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ನವೆಂಬರ್-2025 ರಿಂದ ಮಾರ್ಚ್-2026ರವರೆಗೆ (5 ತಿಂಗಳು) ಗೌರವಧನ ಪಾವತಿಸಲು ರೂ.20331.60ಲಕ್ಷಗಳನ್ನು ಲೆಕ್ಕ ಶೀರ್ಷಿಕೆ: 2202-00-101-0-61-324ರಡಿ ಲಭ್ಯವಿರುವ ಅನುದಾನದಿಂದ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದ್ದು, ಸದರಿ ಅನುದನವನ್ನು ಸಂಬಂಧಪಟ್ಟ ತಾಲ್ಲೂಕು ಪಂಚಾಯಿತಿಗಳಿಗೆ ಬಿಡುಗಡೆಗೊಳಿಸಲು ಮೇಲೆ ಓದಲಾದ ಕಡತದಲ್ಲಿ ಪ್ರಸ್ತಾಪಿಸಿದೆ.

ಪ್ರಸ್ತಾವನೆಯನ್ನು ಪರಿಶೀಲಿಸಿ, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಗೌರವಧನ ಪಾವತಿಗಾಗಿ ಅಗತ್ಯವಿರುವ ರೂ.20331,60 ಲಕ್ಷಗಳ ಅನುದಾನವನ್ನು ಲೆಕ್ಕ ಶೀರ್ಷಿಕೆ  2202-01-197-1-01-300(2202-00-101-0-61-324) ರಡಿ ಬಿಡುಗಡೆಗೊಳಿಸಲು ಈ ಕೆಳಕಂಡಂತೆ ಆದೇಶಿಸಲಾಗಿದೆ.

ಸರ್ಕಾರದ ಆದೇಶ ಸಂಖ್ಯೆ: ಆಇ 298 ವೆಚ್ಚ-6/2025ಇ ದಿನಾಂಕ:09ನೇ ಮಾರ್ಚ್ 2026

ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ಕಾಲಂ 3ರ ತಾಲ್ಲೂಕು ಪಂಚಾಯತಿಗಳ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ನವೆಂಬರ್-2025 ರಿಂದ ಮಾರ್ಚ್-2026ರವರೆಗೆ (5 ತಿಂಗಳು) ಗೌರವ ಧನ ಪಾವತಿಸಲು ಲೆಕ್ಕ ಶೀರ್ಷಿಕೆ  2202-01-197-1-01-300)2202-00-101-0-61-324) ರಡಿ ರೂ.20331.60ಲಕ್ಷ (ರೂಪಾಯಿ ಇಪ್ಪತ್ತು ಸಾವಿರದ ಮೂರು ನೂರ ಮೂವತ್ತೊಂದು ಲಕ್ಷದ ಅರವತ್ತು ಸಾವಿರಗಳು ಮಾತ್ರ) ಗಳನ್ನು ಬಿಡುಗಡೆಗೊಳಿಸಿದೆ.

(ಸೂಚನೆ: ಈ ಆದೇಶಕ್ಕೆ ಸಂಬಂಧಿಸಿದ ಎಲ್ಲಾ ಬಿಲ್ಲುಗಳನ್ನು ಖಜಾನೆಗಳಲ್ಲಿ ದಿನಾಂಕ:20.03.2026 ರವರೆಗೆ ಮಾನ್ಯ ಮಾಡಬಹುದಾಗಿದೆ.)

Honorarium

 

CLICK HERE TO DOWNLOAD ORDER

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!