Important draft rule notification regarding Computer Literacy Test published

Computer Literacy Test Draft Notification 

CLT EXAM:Computer Literacy Test: ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಕರಡು ನಿಯಮ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

 

ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ (14) 8ನೇ ಪ್ರಕರಣದೊಂದಿಗೆ ಓದಲಾದಂತೆ, 3ನೇ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಿರುವ ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ನಿಯಮಗಳ ಕರಡನ್ನು, ಸದರಿ ಅಧಿನಿಯಮದ 3ನೇ ಪ್ರಕರಣದ (2)ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಇದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ, ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ.

ಸದರಿ ಕರಡು ನಿಯಮಗಳಿಗೆ ಸಂಬಂಧಪಟ್ಟಂತೆ ಮೇಲೆ ಗೊತ್ತುಪಡಿಸಿದ ಅವಧಿ ಕೊನೆಗೊಳ್ಳುವ ಮುಂಚೆ ಯಾರೇ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಿಧಾನಸೌಧ, ಬೆಂಗಳೂರು-560001 ಇವರಿಗೆ ಸಲ್ಲಿಸತಕ್ಕದ್ದು.

ಕರಡು ನಿಯಮಗಳು

1.ಶೀರ್ಷಿಕೆ ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) (ತಿದ್ದುಪಡಿ) ನಿಯಮಗಳು, 2025 ಎಂದು ಕರೆಯತಕ್ಕದ್ದು.

(2) ಈ ನಿಯಮಗಳು ಅಧಿಕೃತ ರಾಜ್ಯ ಪತ್ರದಲ್ಲಿ ಅಂತಿಮವಾಗಿ ಪ್ರಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2.ನಿಯಮ 2ಕ್ಕೆ ತಿದ್ದುಪಡಿ:- ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರ (ಇದರಲ್ಲಿ ಇನ್ನು ಮುಂದೆ ಸದರಿ ನಿಯಮಗಳೆಂದು ಉಲ್ಲೇಖಿಸಲಾಗಿದೆ) ನಿಯಮ 2ರಲ್ಲಿ “ದಿನಾಂಕ:31.12.2024 ರೊಳಗೆ” ಎ೦ಬ ಪದ ಮತ್ತು ಅಂಕಿಗಳ ಬದಲಿಗೆ “ದಿನಾಂಕ: 31.12.2025 ರೊಳಗೆ” ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು.

3.ನಿಯಮ 3ಕ್ಕೆ ತಿದ್ದುಪಡಿ :- ಸದರಿ ನಿಯಮಗಳ ನಿಯಮ 3ರಲ್ಲಿ,-

(ಎ) ಉಪ ನಿಯಮ (1)ರಲ್ಲಿ “ದಿನಾಂಕ: 31.12.2024 ರೊಳಗೆ”, ಎಂಬ ಪದ ಮತ್ತು ಅಂಕಿಗಳ ಬದಲಿಗೆ “ದಿನಾಂಕ:31.12.2025 ರೊಳಗೆ“, ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು ಮತ್ತು

(ಬಿ) ಉಪ ನಿಯಮ (2)ರಲ್ಲಿ “ದಿನಾಂಕ: 31.12.2024ರೊಳಗೆ“, ಎಂಬ ಪದ ಮತ್ತು ಅಂಕಿಗಳ ಬದಲಿಗೆ “ದಿನಾಂಕ: 31.12.2025ರೊಳಗೆ“, ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 

CLICK HERE TO DOWNLOAD DRAFT NOTIFICATION

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!