Important Update for Teachers: ಬಡ್ತಿ ಅರ್ಹತಾ ಪರೀಕ್ಷೆ ಮುಂದೂಡಿಕೆ-2026
Important Update for Teachers:ಜನಗಣತಿ ಕಾರ್ಯದ ಕಾರಣದಿಂದ ಶಿಕ್ಷಕರ ಬಡ್ತಿ ಪರೀಕ್ಷೆ ಮುಂದೂಡಿಕೆ. ಪರಿಷ್ಕೃತ ವೇಳಾಪಟ್ಟಿ ಶೀಘ್ರದಲ್ಲೇ ಪ್ರಕಟಣೆ—ಇಲ್ಲಿ ಸಂಪೂರ್ಣ ಮಾಹಿತಿ ತಿಳಿಯಿರಿ.
ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕ ವೃಂದದಿಂದ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ವೃಂದದ ಹುದ್ದೆಗೆ ಬಡ್ತಿ ನೀಡಲು ಅರ್ಹತಾ ಪರೀಕ್ಷೆಯನ್ನು ದಿನಾಂಕ: 21/04/2026 ರಿಂದ ದಿನಾಂಕ: 24/04/2026ರವರೆಗೆ ರಾಜ್ಯದ ಶೈಕ್ಷಣಿಕ ವಿಭಾಗೀಯ ಕೇಂದ್ರಗಳಲ್ಲಿ ನಡೆಸಲು ಅಧಿಸೂಚನೆಯನ್ನು ಹೊರಡಿಸಲಾಗಿತ್ತು.
ಆದರೆ, ಪ್ರಸ್ತುತ ನಡೆಸಲಾಗುತ್ತಿರುವ 2027ರ ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ಬಹುತೇಕ ಶಿಕ್ಷಕರನ್ನು ನಿಯೋಜಿಸಲಾಗಿದ್ದು, ಈ ಕರ್ತವ್ಯದಲ್ಲಿ ತೊಡಗಿರುತ್ತಾರೆ. ಆದುದರಿಂದ ಶಿಕ್ಷಕರ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್ಗೆ ಸೇರಿ.