Karnataka Pre-Primary:  276 ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯಡಿ  ಪೌಷ್ಟಿಕ ಆಹಾರ ವಿತರಣೆ

Karnataka Pre-Primary:  276 ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯಡಿ  ಪೌಷ್ಟಿಕ ಆಹಾರ ವಿತರಣೆ

Karnataka Pre-Primary: ಮೇಲೆ ಓದಲಾದ ಕ್ರಮಾಂಕ (1)ರ ಸರ್ಕಾರದ ಆದೇಶದಲ್ಲಿ 276 ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳ ಪೂರ್ವ ಪ್ರಾಥಮಿಕ (Karnataka Pre-Primary) ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗುತ್ತಿರುವ ಆಹಾರದ ಪ್ರಮಾಣ ಮತ್ತು ಘಟಕ ವೆಚ್ಚಕ್ಕನುಗುಣವಾಗಿ 2019-20ನೇ ಸಾಲಿನಿಂದ ಮಧ್ಯಾಹ್ನ ಉಪಹಾರ ಯೋಜನೆಯಡಿ ಬೆಳಗಿನ ಉಪಹಾರ, ಬಿಸಿಹಾಲು ಮತ್ತು ಮಧ್ಯಾಹ್ನ ಬಿಸಿಯೂಟ ಒದಗಿಸಲು ಅನುಮೋದನೆ ನೀಡಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (2)ರ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯ ಮಾರ್ಗಸೂಚಿಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳನ್ನು ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯ ಫಲಾನುಭವಿಗಳೆಂದು ಪರಿಗಣಿಸಲಾಗಿದೆ.

ಮೇಲೆ ಓದಲಾದ ಕ್ರಮಾಂಕ (3)ರ 2025-26ನೇ ಸಾಲಿನ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿರುವ ಯೋಜನಾ ಅನುಮೋದನಾ ಮಂಡಳಿ(PAB)ಯ ಸಭಾ ನಡವಳಿಯಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಅಂದರೆ ಬಾಲವಾಟಿಕಾಗಳಲ್ಲಿನ 1,98,270 ಮಕ್ಕಳಿಗೆ ಮಧ್ಯಾಹ್ನ ಉಪಹಾರ ನೀಡಲು ರೂ.2215.41 ಲಕ್ಷಗಳ ಕೇಂದ್ರದ ಪಾಲಿನ ಅನುದಾನಕ್ಕೆ ಅನುಮೋದನೆ ನೀಡಲಾಗಿದ್ದು ವಿವರಗಳು ಕೆಳಕಂಡಂತಿದೆ. ಸದರಿ ಪಿ.ಎ.ಬಿ ಸಭಾ ನಡವಳಿಯಲ್ಲಿ ಪೂರ್ವಪ್ರಾಥಮಿಕ ತರಗತಿಗಳಿಗೆ ಅಗತ್ಯವಿರುವ ಅಡುಗೆ ಸಹಾಯಕರ ಸಂಭಾವನೆ ಮೊತ್ತವನ್ನು ಪ್ರಾಥಮಿಕ ತರಗತಿಗಳಿಗೆ (1-5) ಅನುಮೋದನೆ ನೀಡಲಾಗಿರುವ ಅಡುಗೆ ಸಹಾಯಕರ ಸಂಭಾವನೆ ಮೊತ್ತದಲ್ಲಿ ಸೇರಿಸಲಾಗಿದೆ.

Karnataka Pre-Primary



ಮೇಲೆ ಓದಲಾದ ಕ್ರಮಾಂಕ (4)ರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರ ಏಕ ಕಡತದಲ್ಲಿ ವಿವಿಧ ಯೋಜನೆಗಳಡಿ ಅಂದರೆ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ವತಿಯಿಂದ. ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ, ಪಿ.ಎಂ ಶ್ರೀ ಯೋಜನೆಯಡಿ ಮತ್ತು ಕಲ್ಯಾಣ ಕರ್ನಾಟಕ ಭಾಗ ಜಿಲ್ಲೆಗಳಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಲಿಯ ವತಿಯಿಂದ ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು 2025-26ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ/ಬಾಳೆಹಣ್ಣನ್ನು ನೀಡುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಅನುಮೋದನೆ ಕೋರಲಾಗಿದೆ.

ಮೇಲೆ ಓದಲಾದ ಕ್ರಮಾಂಕ (5)ರ ಮಾನ್ಯ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ದಿನಾಂಕ: 17-07-2025 ರಂದು ನಡೆದ ಸಭೆಯ ನಡವಳಿಯಲ್ಲಿ ಕೆಳಕಂಡಂತೆ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಶಾಲಾ ಶಿಕ್ಷಣ ಇಲಾಖೆಯಿಂದ ಪ್ರಾರಂಭಿಸಿರುವ ಪೂರ್ವ ಪ್ರಾಥಮಿಕ ತರಗತಿಗಳನ್ನು ಮುಂದುವರೆಸಲು ತೀರ್ಮಾನಿಸಲಾಯಿತು. 2025-26ನೇ ಸಾಲಿನ ಬಜೆಟ್ ಘೋಷಣೆಯಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ 5000 ಇಸಿಸಿಇ ತರಗತಿಗಳನ್ನು ಪ್ರಾರಂಭಿಸಲು ಕ್ರಮ

ಕೈಗೊಳ್ಳುವುದು. ಸದರಿ 5000 ಇಸಿಸಿಇ ತರಗತಿಗಳನ್ನು ಪ್ರಾರಂಭಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೂರ್ಣ ಸಹಕಾರವಿರುತ್ತದೆ.

ಪ್ರಸ್ತುತ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ 2026-27ನೇ ಸಾಲಿನಿಂದ ಪ್ರಾರಂಭಿಸಲು ಉದ್ದೇಶಿಸಿರುವ ಶಾಲೆಗಳಲ್ಲಿ ಮಾತ್ರ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವುದು. ಉಳಿದಂತೆ ಶಾಲಾ ಆವರಣದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಉದ್ದೇಶಿಸಲಾಗಿರುವ ಪೂರ್ವ ಪ್ರಾಥಮಿಕ ಕೇಂದ್ರಗಳನ್ನು ಪ್ರಾರಂಭಿಸುವುದು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲಾಗಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ನಿಗದಿತ ಪ್ರಮಾಣದ ಪೌಷ್ಟಿಕ ಆಹಾರ, ಆರೋಗ್ಯ ತಪಾಸಣೆ ಮತ್ತು ಮಕ್ಕಳ Growth Monitoring ಅನ್ನು ಅಳೆಯಲು ಸೂಕ್ತ ಕ್ರಮ ಕೈಗೊಳ್ಳುವುದು ಮತ್ತು ಸೂಕ್ತ ಉಪಕರಣಗಳ ಖರೀದಿ ಮತ್ತು ಸಿಬ್ಬಂದಿ ತರಬೇತಿ ಕುರಿತು ಕ್ರಮವಹಿಸುವುದು.

ಮೇಲೆ ಓದಲಾದ ಕ್ರಮಾಂಕ (6)ರ ಸರ್ಕಾರದ ಆದೇಶದಲ್ಲಿ 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ 111(i)ರಲ್ಲಿ ಘೋಷಿಸಿರುವಂತೆ ರಾಜ್ಯದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 1105 ಶಾಲೆಗಳು, 126 ಪಿ.ಎಂ.ಶ್ರೀ ಶಾಲೆಗಳು, ಕೆ.ಕೆ.ಆರ್.ಡಿ.ಬಿ ಯೋಜನೆಯಡಿ 1126 ಶಾಲೆಗಳು ಮತ್ತು 1699 ಮ್ಯಾಗ್ನೆಟ್ ಶಾಲೆಗಳು ಸೇರಿದಂತೆ ಒಟ್ಟಾರೆ 4056 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವ ಸಂಬಂಧ ಪೂರ್ವ ಪ್ರಾಥಮಿಕ ತರಗತಿಗಳನ್ನು (LKG &UKG) ಪ್ರಾರಂಭಿಸಲು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರಿಗೆ ಅನುಮತಿ ನೀಡಿ ಆದೇಶಿಸಲಾಗಿದೆ.

ಈ ಪ್ರಸ್ತಾವನೆಯಲ್ಲಿ ವಿವರಿಸಲಾದ ಮೇಲ್ಕಂಡ ಅಂಶಗಳನ್ನು ಸರ್ಕಾರವು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರದ ಆದೇಶ ಸಂಖ್ಯೆ: ಇಪಿ 86 ಎಂಎಂಎಸ್ 2025, ಬೆಂಗಳೂರು ದಿನಾಂಕ :29.11.2025

ರಾಜ್ಯದಲ್ಲಿ ವಿವಿಧ ಯೋಜನೆಗಳಡಿ (ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ, ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ (ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ವತಿಯಿಂದ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ಶಾಲೆಗಳನ್ನು ಒಳಗೊಂಡಂತೆ, ಪಿ.ಎಂ ಶ್ರೀ ಯೋಜನೆಯಡಿ, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಲಿಯ ವತಿಯಿಂದ ಮತ್ತು ಮ್ಯಾಗ್ನೆಟ್ ಶಾಲೆಗಳು ಸೇರಿದಂತೆ) ಈಗಾಗಲೇ 2018-19ನೇ ಸಾಲಿನಿಂದ 2024-25ನೇ ಸಾಲಿನವರೆಗೆ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ: 111(i) ರಂತೆ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದಿನಾಂಕ:01-12-2025 ರಿಂದ ಅನ್ವಯವಾಗುವಂತೆ, ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ/ಬಾಳೆಹಣ್ಣನ್ನು ನೀಡುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರಿಗೆ ಅನುಮತಿ ನೀಡಿ ಆದೇಶಿಸಿದೆ.

ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು, ನಿರ್ದೇಶಕರು ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ, ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉಪ ನಿರ್ದೇಶಕರು (ಆಡಳಿತ), ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪಾಲಿಸಬೇಕಾಗಿರುವ ಷರತ್ತುಗಳು:-

1) ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ/ಬಾಳೆಹಣ್ಣನ್ನು ನೀಡುವ ಕಾರ್ಯಕ್ರಮವನ್ನು ಕೆಳಕಂಡ ದಿನಗಳಲ್ಲಿ ಅನುಷ್ಠಾನ ಮಾಡತಕ್ಕದ್ದು ಹಾಗೂ ಸಂಬಂಧಿಸಿದ ವೆಚ್ಚವನ್ನು ಕೆಳಕಂಡ ಲೆಕ್ಕ ಶೀರ್ಷಿಕೆಗಳಡಿ ನಿಗದಿಯಾಗಿರುವ ಅನುದಾನದಿಂದ, ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭರಿಸತಕ್ಕದ್ದು.


2) ಅಜೀಂ ಪ್ರೇಮ್ ಫೌಂಡೇಶನ್ ಈ ಸಂಸ್ಥೆಯೊಂದಿಗೆ ಈಗಾಗಲೇ ಮಾಡಿಕೊಳ್ಳಲಾಗಿರುವ ಒಡಂಬಡಿಕೆಯಂತೆ ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರದಲ್ಲಿ ಉಳಿದ 04 ದಿನಗಳಿಗೆ ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ/ಬಾಳೆಹಣ್ಣನ್ನು ವಿತರಿಸಲು ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಇವರು ಕ್ರಮವಹಿಸತಕ್ಕದ್ದು ಹಾಗೂ ಈ ಸಂಬಂಧದ ವೆಚ್ಚಗಳನ್ನು ಅಜೀಂ ಪ್ರೇಮ್ ಫೌಂಡೇಶನ್ ಸಂಸ್ಥೆಯಿಂದ ನೀಡಲಾಗಿರುವ ಅನುದಾನದಿಂದ ಭರಿಸತಕ್ಕದ್ದು.

3) ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ/ಬಾಳೆಹಣ್ಣನ್ನು ನೀಡುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡುವ ಸಂಬಂಧ ಶಾಲಾ ಹಂತದಲ್ಲಿ ಅಗತ್ಯವಿರುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಲು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ರಮವಹಿಸತಕ್ಕದ್ದು.

4) ಆಯುಕ್ತರು ಶಾಲಾ ಶಿಕ್ಷಣ ಇಲಾಖೆ, ರಾಜ್ಯ ಯೋಜನಾ ನಿರ್ದೇಶಕರು ಸಮಗ್ರ ಶಿಕ್ಷಣ ಕರ್ನಾಟಕ, ನಿರ್ದೇಶಕರು ಪ್ರಧಾನ ಮಂತ್ರಿ ಪೋಷಣೆ ಶಕ್ತಿ ನಿರ್ಮಾಣ ಯೋಜನೆ ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ, ಶುಚಿಯಾಗಿ ಮತ್ತು ಆರೋಗ್ಯಕರವಾದ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಟಿಕ ಆಹಾರ ಶಾಲಾ ಹಂತದಲ್ಲಿ ಲಭ್ಯವಾಗುವಂತೆ ಕ್ರಮಕೈಗೊಳ್ಳತಕ್ಕದ್ದು ಹಾಗೂ ಕಾಲಕಾಲಕ್ಕೆ ಮೇಲ್ವಿಚಾರಣೆಯನ್ನು ಮಾಡತಕ್ಕದ್ದು.

5) ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳ ಮಾಹಿತಿಗಳನ್ನು ಕಡ್ಡಾಯವಾಗಿ SATS ತಂತ್ರಾಂಶದಲ್ಲಿ ಇಂದೀಕರಣವಾಗಿರುವ ಬಗ್ಗೆ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಇವರು ಖಚಿತಪಡಿಸಿಕೊಳ್ಳತಕ್ಕದ್ದು ಹಾಗೂ ಇಂದೀಕರಣಗೊಳ್ಳದ ವಿದ್ಯಾರ್ಥಿಗಳನ್ನು ಕೂಡಲೇ ಇಂದೀಕರಿಸಲು ಕ್ರಮವಹಿಸತಕ್ಕದ್ದು.

6) ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರು, ಪ್ರತಿ ದಿನ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ಹಾಜರಾಗುವ ವಿದ್ಯಾರ್ಥಿಗಳನ್ನು ಒಳಗೊಂಡಂತೆ ಶಾಲೆಗೆ ಹಾಜರಾದ ಎಲ್ಲಾ ಮಕ್ಕಳ ಹಾಜರಾತಿ ಮಾಹಿತಿಯನ್ನು ಪಡೆದು SATS ತಂತ್ರಾಂಶದಲ್ಲಿ ಅಪರಾಹ್ನದೊಳಗಾಗಿ ದಾಖಲಿಸಿ ದೃಢೀಕರಿಸಬೇಕು ಮತ್ತು ನಿರ್ದೇಶಕರು, ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಇವರು ಎಲ್ಲಾ ಶಾಲೆಗಳು ಹಾಜರಾತಿಯನ್ನು SATS ತಂತ್ರಾಂಶದಲ್ಲಿ ದೃಢೀಕರಿಸಿರುವ ಬಗ್ಗೆ ಶೇ100 ರಷ್ಟು ಅನುಸರಣೆಯನ್ನು ಖಚಿತಪಡಿಸಿಕೊಳ್ಳಬೇಕು.

7) SATS ತಂತ್ರಾಂಶದಲ್ಲಿ ಶಾಲಾ ಮುಖ್ಯ ಶಿಕ್ಷಕರಿಂದ ದೃಢೀಕರಿಸಲಾದ ಹಾಜರಾತಿ ಮಾಹಿತಿಯನ್ನು ಎಲ್ಲಾ ಮಧ್ಯಾಹ್ನ ಉಪಹಾರ ಮತ್ತು ಕ್ಷೀರಭಾಗ್ಯ ಯೋಜನೆಗಳಿಗೆ ಹಾಗೂ ಭಾರತ ಸರ್ಕಾರದ ಸ್ವಯಂಚಾಲಿತ ಮೇಲ್ವಿಚಾರಣಾ ವ್ಯವಸ್ಥೆಗೆ (Automated Monitoring System) ಮಾಹಿತಿಗಳನ್ನು ಇಂಧೀಕರಿಸಲು ಪರಿಗಣಿಸತಕ್ಕದ್ದು.

8) ಭಾರತ ಸರ್ಕಾರದ ಸ್ವಯಂಚಾಲಿತ ಮೇಲ್ವಿಚಾರಣಾ ವ್ಯವಸ್ಥೆಗೆ (Automated Monitoring System) ಮಾಹಿತಿಗಳನ್ನು ಇಂಧೀಕರಿಸುವಾಗ ಕಡ್ಡಾಯವಾಗಿ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ಹಾಜರಾಗುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಪರಿಗಣಿಸತಕ್ಕದ್ದು.

9) ಪ್ರತಿ ದಿನ ಶಾಲಾ ಮುಖ್ಯ ಶಿಕ್ಷಕರು SATS ತಂತ್ರಾಂಶದಲ್ಲಿ ನಮೂದಿಸಿ ದೃಢೀಕರಿಸುವ ವಿದ್ಯಾರ್ಥಿಗಳ ಸಂಖ್ಯೆಯ ವಿವರಗಳು ಪುನರಾವರ್ತನೆಯಾಗದಂತೆ ಮತ್ತು ಅಧಿಕ ವರದಿಯಾಗದಂತೆ (Over Reporting) ಪರಿಶೀಲಿಸಿ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ, ರಾಜ್ಯ ಯೋಜನಾ ನಿರ್ದೇಶಕರು ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ನಿರ್ದೇಶಕರು ಪ್ರಧಾನ ಮಂತ್ರಿ ಪೋಷಣೆ ಶಕ್ತಿ ನಿರ್ಮಾಣ ಯೋಜನೆ ಇವರುಗಳು ಖಾತ್ರಿ ಪಡಿಸಿಕೊಳ್ಳತಕ್ಕದ್ದು.

10)ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳ ಆಧಾರ್ ಸಂಖ್ಯೆಯನ್ನು SATS ತಂತ್ರಾಂಶದಲ್ಲಿ ಜೋಡನೆ ಮಾಡುವ ಹಾಗೂ ಸದರಿ ವಿದ್ಯಾರ್ಥಿಗಳ APAAR ID ಸೃಜಿಸುವ ಕಾರ್ಯವನ್ನು ದಿನಾಂಕ: 31.12.2025ರೊಳಗಾಗಿ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ. ರಾಜ್ಯ ಯೋಜನಾ ನಿರ್ದೇಶಕರು ಸಮಗ್ರ ಶಿಕ್ಷಣ ಕರ್ನಾಟಕ, ನಿರ್ದೇಶಕರು ಪ್ರಧಾನ ಮಂತ್ರಿ ಪೋಷನ್ ಶಕ್ತಿ ನಿರ್ಮಾಣ ಯೋಜನೆ ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪೂರ್ಣಗೊಳಿಸತಕ್ಕದ್ದು.

11) ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿನ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದಿನಾಂಕ:01.12.2025 ರಿಂದ ಅನ್ವಯವಾಗುವಂತೆ ಬೆಳಗಿನ ಉಪಹಾರವನ್ನು ರದ್ದು ಪಡಿಸಿ ಈ ಆದೇಶದಂತೆ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ/ಬಾಳೆಹಣ್ಣನ್ನು ಮಾತ್ರ ನೀಡಲು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ರಮವಹಿಸತಕ್ಕದ್ದು.

12) ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ/ಬಾಳೆಹಣ್ಣನ್ನು ನೀಡುವ ಸಂಬಂಧ ಹೆಚ್ಚುವರಿ ಸಹಾಯಕ ಅಡುಗೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವಾಗ ಶಾಲೆಯಲ್ಲಿನ ಎಲ್ಲಾ ತರಗತಿಗಳ ಒಟ್ಟಾರೆ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸರ್ಕಾರದ ಆದೇಶ ಸಂಖ್ಯೆ: ಇಪಿ 96 ಎಂಎಂಎಸ್ 2009 ದಿನಾಂಕ: 10.11.2010 ರಲ್ಲಿ ನೀಡಲಾಗುವ ಮಾರ್ಗಸೂಚಿಯಂತೆ ಅಗತ್ಯ ಸಂಖ್ಯೆಯಲ್ಲಿ ಮಾತ್ರ ಸಹಾಯಕ ಅಡುಗೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಶಾಲಾ ಹಂತದಲ್ಲಿ ಕ್ರಮವಹಿಸತಕ್ಕದ್ದು ಹಾಗೂ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಅಡುಗೆ ಸಿಬ್ಬಂದಿಗಳನ್ನು ನೇಮಿಸಿರುವ ಬಗ್ಗೆ ಮಧ್ಯಾಹ್ನ ಉಪಹಾರ ಯೋಜನೆಯ ಶಿಕ್ಷಣಾಧಿಕಾರಿಗಳು ಮತ್ತು ಸಹಾಯಕ ನಿರ್ದೇಶಕರು ಖಚಿತಪಡಿಸಿಕೊಂಡ ನಂತರವೇ ಹೆಚ್ಚುವರಿ ಸಹಾಯಕ ಅಡುಗೆ ಸಿಬ್ಬಂದಿಗಳ ಗೌರವ ಸಂಭಾವನೆಯನ್ನು ಪಾವತಿಸಲು ನಿಯಮಾನುಸಾರ ಕ್ರಮವಹಿಸತಕ್ಕದ್ದು ಹಾಗೂ ಹೆಚ್ಚುವರಿ ಸಹಾಯಕ ಅಡುಗೆ ಸಿಬ್ಬಂದಿಗಳಿಗೆ ಕೆಳಕಂಡಂತೆ ಮಾಸಿಕ ಸಂಭಾವನೆಯನ್ನು ಪಾವತಿಸತಕ್ಕದ್ದು.



13)2025-26ನೇ ಸಾಲಿನ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯ ಯೋಜನಾ ಅನುಮೋದನಾ ಮಂಡಳಿ(PAB)ಯ ಸಭಾ ನಡವಳಿಯಲ್ಲಿ ಅನುಮೋದನೆ ನೀಡಲಾಗಿರುವ ಒಟ್ಟಾರೆ ಅಡುಗೆ ಸಿಬ್ಬಂದಿಗಳ ಸಂಖ್ಯೆಯ ಮಿತಿಯೊಳಗೆ ಪೂರ್ವ ಪ್ರಾಥಮಿಕ ತರಗತಿಗಳಿಗೆ ಅಗತ್ಯವಿರುವ ಹೆಚ್ಚುವರಿ ಸಹಾಯಕ ಅಡುಗೆ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳತಕ್ಕದ್ದು.

14)ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಸಂಬಂಧ ಇತ್ತೀಚಿಗೆ ಸರ್ಕಾರದ ಆದೇಶ ಸಂಖ್ಯೆ: ಇಪಿ 120 ಎಂಎಂಎಸ್ 2024 ದಿನಾಂಕ: 20.08.2025ರಲ್ಲಿ ಪರಿಷ್ಕರಿಸಲಾಗಿರುವ ಅಡುಗೆ ತಯಾರಿಕಾ ವೆಚ್ಚದ ದರದಂತೆ ಒಂದು ದಿನಕಕ್ಕೆ ಒಬ್ಬ ವಿದ್ಯಾರ್ಥಿಗೆ ಕೆಳಕಂಡಂತೆ ಅಡುಗೆ ತಯಾರಿಕಾ ವೆಚ್ಚವನ್ನು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭರಿಸತಕ್ಕದ್ದು.

15)ಮಧ್ಯಾಹ್ನ ಉಪಹಾರ ಯೋಜನೆಗೆ ಅಗತ್ಯವಿರುವ ಆಹಾರ ದಾನ್ಯಗಳು, ತೊಗರಿಬೇಳೆ, ಅಡುಗೆ ಎಣ್ಣೆ. ಕ್ಷೀರಭಾಗ್ಯ ಯೋಜನೆಯಡಿ ಹಾಲಿನ ಪುಡಿನ ಹಾಗೂ ಸಾಯಿ ಶೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯ ಬೇಡಿಕೆಗಳ ನಿರ್ವಹಣೆಗಾಗಿ SATS ತಂತ್ರಾಂಶದಲ್ಲಿ Indent Monitoring System ವ್ಯವಸ್ಥೆಯನ್ನು ಕಲ್ಪಿಸಿ ಶಾಲಾ ಹಂತದಲ್ಲಿ ಮಾಹಿತಿಗಳನ್ನು ಸಂಗ್ರಹಿಸಿ ನಿಖರವಾಗಿ ಸದರಿ ಸಾಮಗ್ರಿಗಳ ಬೇಡಿಕೆ ಸಲ್ಲಿಸಲು ಅನುವಾಗುವಂತೆ, ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರು ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು.

16)ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ/ಬಾಳೆಹಣ್ಣನ್ನು ನೀಡುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡುವ ಬಗ್ಗೆ ಜಿಲ್ಲಾ, ತಾಲ್ಲೂಕು ಮತ್ತು ಶಾಲಾ ಹಂತದಲ್ಲಿ ಮೇಲ್ವಿಚಾರಣೆ ಮಾಡುವ ಬಗ್ಗೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರು ಸಮಗ್ರವಾದ ಸುತ್ತೋಲೆಯನ್ನು ಹೊರಡಿಸಿ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ, ಉಪ ನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ, ಮಧ್ಯಾಹ್ನ ಉಪಹಾರ ಯೋಜನೆಯ ಶಿಕ್ಷಣಾಧಿಕಾರಿಗಳಿಗೆ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಮಧ್ಯಾಹ್ನ ಉಪಹಾರ ಯೋಜನೆಯ ಸಹಾಯಕ ನಿರ್ದೇಶಕರಿಗೆ ಮಾರ್ಗದರ್ಶನವನ್ನು ನೀಡತಕ್ಕದ್ದು.

17)ಈ ಆದೇಶವನ್ನು ಹಾಗೂ ECCE ಗೆ ಸಂಬಂಧಿಸಿದ ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆ ಕಾರ್ಯಕ್ರಮದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾಲಕಾಲಕ್ಕೆ ಹೊರಡಿಸಲಾಗುವ ಎಲ್ಲಾ ಆದೇಶಗಳನ್ನು ಹಾಗೂ ಆರ್ಥಿಕ ಮತ್ತು ಭೌತಿಕ ಪ್ರಗತಿ ವರದಿಗಳನ್ನು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು, ರಾಜ್ಯ ಯೋಜನಾ ನಿರ್ದೇಶಕರು ಸಮಗ್ರ ಶಿಕ್ಷಣ ಕರ್ನಾಟಕ, ನಿರ್ದೇಶಕರು, ಪ್ರಧಾನ ಮಂತ್ರಿ ಪೋಷಣೆ ಶಕ್ತಿ ನಿರ್ಮಾಣ ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸತಕ್ಕದ್ದು.

18)ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ/ಬಾಳೆಹಣ್ಣನ್ನು ನೀಡುವ ಕಾರ್ಯಕ್ರಮವನ್ನು ಕಡ್ಡಾಯವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾರ್ಗಸೂಚಿಯಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ಅನುಷ್ಠಾನ ಮಾಡತಕ್ಕದ್ದು.

19)ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ/ಬಾಳೆಹಣ್ಣನ್ನು ನೀಡುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡುವ ಸಂದರ್ಭದಲ್ಲಿ ಎಲ್ಲಾ ಸರಕು ಮತ್ತು ಸೇವೆಗಳ ಖರೀದಿ ಪ್ರಕ್ರಿಯೆಗಳನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರನ್ವಯ ಪಾರದರ್ಶಕವಾಗಿ ನಿರ್ವಹಿಸತಕ್ಕದ್ದು.

20) ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ/ಬಾಳೆಹಣ್ಣನ್ನು ನೀಡುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡುವಲ್ಲಿ ಯಾವುದೇ ಲೋಪವಾಗದಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉಪನಿರ್ದೇಶಕರು (ಆಡಳಿತ). ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಡ್ಡಾಯವಾಗಿ ಕ್ರಮವಹಿಸತಕ್ಕದ್ದು.

21) ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಟಿಕ ಆಹಾರವಾದ ಮೊಟ್ಟೆ/ಬಾಳೆಹಣ್ಣನ್ನು ನೀಡುವ ಕಾರ್ಯಕ್ರಮದ ವೆಚ್ಚಗಳಿಗೆ ಸಂಬಂಧಿಸಿದಂತೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನಿಯಮಾನುಸಾರ ಸೂಕ್ತ ಲೆಕ್ಕ ಪತ್ರವನ್ನು ಇಡತಕ್ಕದ್ದು.

22) ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆರ್ಥಿಕ ಮತ್ತು ಭೌತಿಕ ಗುರಿಗಳನ್ನು ಅಂದರೆ Key Performance Indicator ಗಳನ್ನು ಅವಲೋಕನ (New Decision Support System) ತಂತ್ರಾಂಶದಲ್ಲಿ ನಿಗದಿಪಡಿಸತಕ್ಕದ್ದು.


ಈ ಆದೇಶವನ್ನು ಆರ್ಥಿಕ ಇಲಾಖೆ ಟಿಪ್ಪಣಿ ಸಂಖ್ಯೆ: ಆಇ 776 ವೆಚ್ಚ-8/2024 ದಿನಾಂಕ: 14.07.2025 ಮತ್ತು 08.09.2025ರಲ್ಲಿ ನೀಡಿರುವ ಸಹಮತದನ್ವಯ ಮತ್ತು ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ 03 ಟಿಎಫ್‌ಪಿ 2025 ದಿನಾಂಕ: 24.09.2025 ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಪ್ರತ್ಯಾಯೋಜಿಸಿರುವ ಅಧಿಕಾರದನ್ವಯ ಹೊರಡಿಸಿದೆ.

CLICK HERE TO DOWNLOAD ORDER

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!