KEA Civil Police Constable 2026: ಅಧಿಕೃತ ಕೀ ಉತ್ತರ ಪ್ರಕಟ – PDF ಡೌನ್ಲೋಡ್ & ಆಕ್ಷೇಪಣೆ ಸಲ್ಲಿಸುವ ವಿಧಾನ
KEA Civil Police Constable 2026:
ಉಳಿಕೆ ಮೂಲ ವೃಂದದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ 2026 ಸ್ಪರ್ಧಾತ್ಮಕ ಪರೀಕ್ಷೆಯ ಅಧಿಕೃತ ಕೀ ಉತ್ತರಗಳು ಪ್ರಕಟಗೊಂಡಿವೆ. ವಿಷಯವಾರು ಉತ್ತರ ಕೀ ಪರಿಶೀಲಿಸಿ, ಆಕ್ಷೇಪಣೆ ಸಲ್ಲಿಕೆ ಮಾಹಿತಿ ಹಾಗೂ PDF ಡೌನ್ಲೋಡ್ ಲಿಂಕ್ ಪಡೆಯಿರಿ.
ಉಳಿಕೆ ಮೂಲ ವೃಂದದ ಮತ್ತು ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸುವ ಬಗ್ಗೆ.
ವಿಷಯ : ಸಾಮಾನ್ಯ ಜ್ಞಾನ
ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ:02.08.2026 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿದ್ದು, ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ದಿನಾಂಕ: 03.08.2026 ರಂದು ಪ್ರಕಟಿಸಲಾಗಿರುತ್ತದೆ.
https://cetonline.karnataka.gov.in/kea/ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಒದಗಿಸಲಾದ ಆನ್ಲೈನ್ ಪೋರ್ಟಲ್ https://cetonline.karnataka.gov.in/kea/ ಮೂಲಕ ದಿನಾಂಕ:06.08.2026 ರ ಬೆಳಿಗ್ಗೆ 10:30 ಘಂಟೆಯೊಳಗೆ ಸಲ್ಲಿಸಬಹುದಾಗಿರುತ್ತದೆ.
ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು. ಸಲ್ಲಿಸಲಾಗುವ ಪ್ರತಿ ಆಕ್ಷೇಪಣೆಗೆ ರೂ.25/-ನ್ನು ಪಾವತಿಸತಕ್ಕದ್ದು ಹಾಗೂ ಆಕ್ಷೇಪಣಾ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ. ಪ್ರಶ್ನೆ ಸಂಖ್ಯೆ, ವರ್ಷನ್ ಕೋಡ್ ನಮೂದಿಸದೇ ಇರುವ ಅಥವಾ ಅಪೂರ್ಣ/ಆಧಾರರಹಿತವಾಗಿರುವ ಹಾಗೂ ಶುಲ್ಕ ಪಾವತಿಸದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
ವಿಷಯ ತಜ್ಞರ ಸಮಿತಿಯು ಆಕ್ಷೇಪಣೆಗಳನ್ನು ಪರಿಶೀಲಿಸಿ, ತೀರ್ಮಾನಿಸುವ ಕೀ ಉತ್ತರಗಳು ಅಂತಿಮವಾಗಿರುತ್ತದೆ.

| Title | Link |
|---|---|
| KEY ANSWER FOR POLICE CONSTABLE (CIVIL) RECRUITMENT EXAM – RPC | CLICK HERE |
| CPC-RPC-2026 CIVIL POLICE CONSTABLE – KEY ANSWER – OBJECTION SUBMISSION LINK | CLICK HERE |
| KEY ANSWER FOR POLICE CONSTABLE (CIVIL) RECRUITMENT EXAM – KK | CLICK HERE |
| CPC-KK-2026 CIVIL POLICE CONSTABLE – KEY ANSWER – OBJECTION SUBMISSION LINK | CLICK HERE |