KEA VAO EXAM-2024:ಕಡ್ಡಾಯ ಕನ್ನಡ ತಾತ್ಕಾಲಿಕ ಅಂಕ ಪಟ್ಟಿ ಪ್ರಕಟ.

KEO VAO Exam-2024: ಕಡ್ಡಾಯ ಕನ್ನಡ ತಾತ್ಕಾಲಿಕ ಅಂಕ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ,

ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಮತ್ತು ಜಿಟಿಟಿಸಿ ಸಂಸ್ಥೆಯಲ್ಲಿನ ವಿವಿಧ ವೃಂದದ ಹುದ್ದೆಗಳಿಗೆ, ಸರ್ಕಾರದ ಆದೇಶದಂತೆ ವಯೋಮಿತಿ ಸಡಿಲಿಕೆಯಿಂದ ಹೊಸದಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 26.10.2024 ರಂದು ಕಡ್ಡಾಯ ಕನ್ನಡ ಪರೀಕ್ಷೆಯನ್ನು ನಡೆಸಲಾಗಿದ್ದು, ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ದಿನಾಂಕ 28.10.2024 ರಂದು ಪ್ರಕಟಿಸಿ ದಿನಾಂಕ 29.10.2024 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ.

ಪ್ರಕಟಿತ ತಾತ್ಕಾಲಿಕ ಕೀ ಉತ್ತರಗಳಿಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಶಿಫಾರಸ್ಸಿನಂತೆ ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.

ಅಂತಿಮ ಕೀ ಉತ್ತರಗಳನ್ವಯ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ದಿನಾಂಕ 15.11.2024 ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದ್ದು, ಪ್ರಕಟಿತ ಅಂಕಗಳಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 18.10.2024 ಸಂಜೆ 5.00 ರೊಳಗೆ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಲಿಂಕ್ ಮೂಲಕ ಆಕ್ಷೇಪಣೆಯನ್ನು ಸಲ್ಲಿಸುವಂತೆ ಈ ಮೂಲಕ ತಿಳಿಸಿದೆ.

ತಾತ್ಕಾಲಿಕ ಅಂಕಗಳ ಹೊರತುಪಡಿಸಿ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಮತ್ತು ಪೂರಕ ದಾಖಲೆಗಳಿಲ್ಲದ ಆಕ್ಷೇಪಣೆಗಳನ್ನು ಪುರಸ್ಕರಿಸಲಾಗುವುದಿಲ್ಲ.

VAO/GTTC COMPULSORY KANNADA ADDITIONAL PROVISIONAL RESULT

CLICK HERE TO MORE INFORMATIONINFORMATION

VAO- COMPULSORY KANNADA(26/10/2024) PROVISIONAL SCORE OBJECTION LINK

Leave a Comment