KEA:Important Instructions for Candidates Appearing for PSI and VAO Recruitment Exam

PSI and VAO Recruitment Exam

 

ದಿನಾಂಕ: 03-10-2024 ರ ಪಿಎಸ್‌ಐ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗೆ ಮತ್ತು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ 29-09-2024 ರಂದು ನಡೆಯುವ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆಗೆ ವಸ್ತಸಂಹಿತೆ ಹಾಗು ವಿಶೇಷ ಸೂಚನೆಗಳು.

ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ:

ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‌ ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಸಾದ್ಯವಾದಷ್ಟು ಕಾಲರ್‌ರಹಿತ ಶರ್ಟ್ ಧರಿಸಲು ಆದ್ಯತೆ ನೀಡುವುದು.

ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ / ಕಮ್ಮಿ ಜೇಬುಗಳಿರುವ ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.

ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟಗಳು ಇರಬಾರದು.

ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ

ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ.

ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ

ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು / ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.

ಎತ್ತರವಾದ ಹಿಮ್ಮಡಿಯ ಶೂಗಳನ್ನು/ ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.

ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ. (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ).

ನಿಷೇಧಿತ ವಸ್ತುಗಳ ಪಟ್ಟಿ ಈ ಕೆಳಗೆ ವೀಕ್ಷಸಿ:

ಡ್ರೆಸ್ ಕೋಡ್ ಅನ್ನು ಅನುಸರಿಸುವುದರ ಜೊತೆಗೆ, ಕೆಳಗೆ ಪಟ್ಟಿ ಮಾಡಲಾದ ಪರೀಕ್ಷಾ ಕೇಂದ್ರಕ್ಕೆ ಯಾವುದೇ ನಿಷೇಧಿತ ವಸ್ತುಗಳನ್ನು ತೆಗೆದುಕೊಂಡು ಹೋಗದಂತೆ, ಅಭ್ಯರ್ಥಿಗಳು ಖಚಿತಪಡಿಸಿಕೊಳ್ಳಬೇಕು.

ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್‌ಗಳು, ಪೆನ್ ಡ್ರೈವ್‌ಗಳು, ಇಯ‌ರ್ ಫೋನ್‌ಗಳು, ಮೈಕ್ರೋಫೋನ್‌ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.

ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗು ತಿನ್ನುವುದನ್ನು ನಿಷೇಧಿಸಲಾಗಿದೆ, ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ.

ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು.

ಪೆನ್ಸಿಲ್, ಪೇಪರ್, ಎರೇಸರ್, ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ.

ತಲೆಯ ಮೇಲೆ ಟೋಪಿ/ HAT ಧರಿಸಿಬಾರದು.

ಯಾವುದೇ ರೀತಿಯ ಮಾಸ್ಕ್ ಅನ್ನು ಧರಿಸುವಂತಿಲ್ಲ.

 

ಪರೀಕ್ಷೆಯ ದಿನದಂದು ಈ ಕೆಳಗಿನ ವಸ್ತುಗಳನ್ನು ಮಾತ್ರ ತರಲು ಅನುಮತಿಸಲಾಗಿದೆ.

ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ತರುವುದು.

ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದು ಕಡ್ಡಾಯಗೊಳಿಸಲಾಗಿದೆ. (ಪಾಸ್‌ಪೋರ್ಟ್, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ರಾಜ್ಯ ಸರ್ಕಾರ / ಕೇಂದ್ರ ಸರ್ಕಾರ / ಸಾರ್ವಜನಿಕ ಸ್ವಾಮ್ಯದ ಅಥವಾ ಸರ್ಕಾರದ ಅಧೀನಕ್ಕೊಳಪಟ್ಟ ಖಾಸಗೀ ಕಂಪನಿಗಳು ವಿತರಿಸಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ, ಸಾರ್ವಜನಿಕ ಬ್ಯಾಂಕುಗಳು / ಅಂಚೆ ಕಚೇರಿಗಳು ವಿತರಿಸಿರುವ ಭಾವಚಿತ್ರವಿರುವ ಪಾಸ್ ಪುಸ್ತಕ, ಭಾವಚಿತ್ರ ಸಮೇತ ನೋಂದಣಿಯಾಗಿರುವ ಸ್ವತ್ತಿನ ದಾಖಲೆಪತ್ರ ಅಥವಾ ಪಟ್ಟಾ ಪುಸ್ತಕ, ಭಾವಚಿತ್ರ ಸಮೇತ ಸಂಬಂಧಪಟ್ಟ ಪ್ರಾಧಿಕಾರಿಯವರು ವಿತರಿಸಿರುವ ಜಾತಿ ಪ್ರಮಾಣ ಪತ್ರ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಿತರಿಸಿರುವ ಪಿಂಚಣಿ ಪುಸ್ತಕ / ಪಿಂಚನಿ ಮಂಜೂರಾತಿ ಆಗಿರುವ ಆದೇಶ, ಎನ್‌ಆರ್‌ಇಜಿಎಸ್ ಯಿಂದ ನೀಡಿದ ಭಾವಚಿತ್ರವಿರುವ ಉದ್ಯೋಗ ಚೀಟಿ, ಎಲೆಕ್ಟೋರಲ್ ಪೋಟೋ ಗುರುತಿನ ಚೀಟಿ, ಭಾರತೀಯ ಗುರುತು ಪ್ರಾಧಿಕಾರದಿಂದ ನೀಡಲಾಗಿರುವ ಆಧಾರ್ ಕಾರ್ಡ್)

ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.

ಮೇಲೆ ಹೇಳಲಾಗಿರುವ ಕೆ.ಇ.ಎ ನಿಯಮಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು, ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕಠಿಣ ಕ್ರಮವನ್ನು ಜರುಗಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

 

CLICK HERE MORE INFORMATION

Leave a Comment