KREIS-2025 6th Standard Admission
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ [KREIS ]ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2025ನೇ ಶೈಕ್ಷಣಿಕ ಸಾಲಿನ 6ನೇ ತರಗತಿಗೆ ಪ್ರವೇಶಾತಿಗೆ ಅರ್ಜಿ ಸರ್ಕಾರದ ಆದೇಶ ಸಂಖ್ಯೆ ಸಕಇ 94 ಮೊದೇಶಾ 2020 ಬೆಂಗಳೂರು ದಿನಾಂಕ 19-06-2021 ಮತ್ತು 12-11-2021 ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇವರ ದಿನಾಂಕ 08-01-2025 ರ ಪತ್ರದ ಅನ್ವಯ, 2025-26ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್‌ಲೈನ್ ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುವುದು.
5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು, ದಿನಾಂಕ 11-01-2025 ರ ಸಂಜೆ 4.00 ರಿಂದ ದಿನಾಂಕ: 25-01-2025 5 11.59 ರ ವರೆಗೆ KREIS ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ / ಕಾಲೇಜುಗಳ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ 15-02-2025 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪರೀಕ್ಷೆ ನಡೆಸಲಿದೆ. ಅರ್ಜಿ ಸಲ್ಲಿಸಲು ವರ್ಗಾವಾರು ವಾರ್ಷಿಕ ಆದಾಯದ ಮಿತಿ ಕೆಳಕಂಡಂತಿದೆ.

ಅರ್ಜಿ ಸಲ್ಲಿಸುವ ವಿಧಾನ, ಹಾಗೂ “ಮಾಹಿತಿ ಪುಸ್ತಕ-2025” ವನ್ನು ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ನಲ್ಲಿ ಮತ್ತು ವಸತಿ ಶಿಕ್ಷಣ ಸಂಸ್ಥೆಗಳ ವೆಬ್ ಸೈಟ್ http://kreis.kar.nic.in ನಲ್ಲಿ ಪ್ರಚುರ ಪಡಿಸಲಾಗಿದೆ. ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ದಿನಾಂಕ 06-02-2025 ರಿಂದ ಈ ಮೇಲ್ಕಂಡ ವೆಬ್‌ಸೈಟ್ ಗಳಿಂದ ಆಯಾ ವಸತಿ ಶಾಲೆಯಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು.
ಗಮನಿಸಿ: ಅಭ್ಯರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ, ಇತ್ತೀಚಿನ ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಅಥವಾ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿಸಿದ ವಸತಿ ಶಾಲೆ / ಕಾಲೇಜಿನ ಮುಖ್ಯಸ್ಥರನ್ನು ಸಂಪರ್ಕಿಸಬೇಕು.
ಪ್ರವೇಶ ಪರೀಕ್ಷೆ – 2025ರ ವೇಳಾಪಟ್ಟಿ:

ವಸತಿ ಶಾಲೆಗಳ ಆಯ್ಕೆಯ ಆದ್ಯತಾ ಕ್ರಮದಲ್ಲಿ ನಮೂದಿಸುವ ಕುರಿತು:
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಯಾವ ಶಾಲೆಗಳಲ್ಲಿ ದಾಖಲಾತಿ ಬಯಸುತ್ತಾರೋ, ಅಂತಹ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಆದ್ಯತಾ ಕ್ರಮದಲ್ಲಿ ದಾಖಲಿಸುವ ಶಾಲೆಗಳನ್ನು ಮಾತ್ರ ಹಂಚಿಕೆಗೆ ಪರಿಗಣಿಸಲಾಗುವುದು. ಅಭ್ಯರ್ಥಿಗಳು ತಮ್ಮ ಸೀಟು ಹಂಚಿಕೆ ಅವಕಾಶವನ್ನು ಹೆಚ್ಚಿಸಿಕೊಳ್ಳಲು ತಮ್ಮ ಜಿಲ್ಲೆಯಲ್ಲಿರುವ KREIS ನ ಎಲ್ಲಾ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ನಮೂದಿಸತಕ್ಕದು. ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಮೆರಿಟ್, ಮೀಸಲಾತಿ ಹಾಗೂ ಅಭ್ಯರ್ಥಿಗಳು ಪ್ರವೇಶಾತಿಗಾಗಿ ನಮೂದಿಸಿರುವ ಶಾಲೆಗಳ ಆದ್ಯತಾ ಕ್ರಮದ ಆಧಾರದ ಮೇಲೆ Computerized Auto Selection ಮೂಲಕ ಸೀಟು ಹಂಚಿಕೆಯನ್ನು ಮಾಡಲಾಗುವುದು.
CLICK HERE TO DOWNLOAD INFORMATION BULLETIN
CLICK HERE TO DOWNLOAD NOTIFICATION
CLICK HERE TO ONLINE APPLICATION
Morarji application for 6th standard