KREIS- Cadre and Recruitment

 

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತು.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2011 ರಲ್ಲಿ ರಚಿಸಲಾಗಿರುತ್ತದೆ. 2011 ರ ನಂತರ ಸರ್ಕಾರದ ಆದೇಶಗಳಲ್ಲಿ ಕಾಲಕಾಲಕ್ಕೆ ಸಂಘದ ವಸತಿ ಶಾಲೆ/ಕಾಲೇಜುಗಳ ಬೋಧಕ/ಬೋಧಕೇತರ ನೇಮಕಾತಿ, ವಿದ್ಯಾರ್ಹತೆ, ಮುಂಬಡ್ತಿ ಹೀಗೆ ಹಲವಾರು ನಿಯಮಗಳಿಗೆ ತಿದ್ದುಪಡಿ ಮಾಡಿ ಸರ್ಕಾರದ ಆದೇಶಗಳನ್ನು ಹೊರಡಿಸಲಾಗಿರುವ ಬಗ್ಗೆ, ಹಾಗೂ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2011 ರ ನಿಯಮಗಳು ರಚನೆಯಾದ ನಂತರ ಸರ್ಕಾರದ ಆದೇಶಗಳಲ್ಲಿ ಮಾಡಿರುವ ನೇಮಕಾತಿ ನಿಯಮಗಳ ತಿದ್ದುಪಡಿಗಳು ಹಾಗೂ ಸರ್ಕಾರದ ಆದೇಶಗಳಲ್ಲಿ ಸಂಘದ ಕೇಂದ್ರ ಕಛೇರಿಗೆ ಹಾಗೂ ವಸತಿ ಶಾಲೆಗಳಿಗೆ ಹಲವು ಹುದ್ದೆಗಳು ಮಂಜೂರಾಗಿರುವ ಹುದ್ದೆಗಳನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ:ಸಕಇ 210 ಎಂಡಿಎಸ್ 2021, ದಿನಾಂಕ:14.10.2022 ರಲ್ಲಿ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿಗಳು 2021 ರಲ್ಲಿ ಸೇರ್ಪಡೆ ಮಾಡಿ ಪರಿಷ್ಕರಿಸಿ ಆದೇಶಿಸಲಾಗಿರುತ್ತದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿಗಳು 2021 ರನ್ನಯ ಸರ್ಕಾರದ ಆದೇಶ ಸಂಖ್ಯೆ:ಸಕಇ 32 ಮೊದೇಶಾ 2019(1), ದಿನಾಂಕ:08.02.2019 ರಲ್ಲಿ ಭಾರತ ಸಂವಿಧಾನ ಅನುಚ್ಛೇಧ 371(ಜೆ)ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಹೊರಡಿಸಿರುವ ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದ್ರಾಬಾದ್-ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ 2013 ರನ್ನಯ ಕರ್ನಾಟಕ ವಸತಿ ಸಂಸ್ಥೆಗಳ ಸಂಘದ ಕೇಂದ್ರ ಕಛೇರಿ ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ / ಶ್ರೀಮತಿ ಇಂದಿರಾಗಾಂದಿ/ ಡಾ||ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ/ಕಾಲೇಜುಗಳಿಗೆ ಮಂಜೂರಾಗಿರುವ ಹುದ್ದೆಗಳಲ್ಲಿ ಹೈದ್ರಾಬಾದ್ ಕರ್ನಾಟಕ ವ್ಯಾಪ್ತಿಯ ಸ್ಥಳೀಯ ವ್ಯಕ್ತಿಗಳಿಗೆ ರಾಜ್ಯ ಮಟ್ಟದ

ಸ್ಥಳೀಯ ಮತ್ತು ವೃಂದ ಪ್ರಾದೇಶಿಕ ಶೇಕಡಾವಾರು ಹುದ್ದೆಗಳನ್ನು ಮೀಸಲಿರಿಸಿ ಸ್ಥಳೀಯ ವೃಂದಗಳನ್ನು ರಚಿಸಿ ಅಧಿಸೂಚಿಸಲಾಗಿರುತ್ತದೆ. ಅದರಂತೆ 2:22.03.2022 ಪತ್ರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಮಾಡಲು ದಿನಾಂಕ:07.09.2022 ರ ಪತ್ರದಲ್ಲಿ ಕಲ್ಯಾಣ ಕರ್ನಾಟಕ ವೃಂದದ ನೇಮಕಾತಿಗೆ ಕ್ರಮ ಕೈಗೊಂಡು, ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಮೋದನೆಗಾಗಿ ಸಲ್ಲಿಸುವಂತೆ ಸೂಚಿಸಲಾಗಿರುತ್ತದೆ. ಅದರಂತೆ ಮೀಸಲಾತಿವಾರು ಹುದ್ದೆಗಳನ್ನು ನಿಗದಿಪಡಿಸಿ ಮೀಸಲಾತಿಗೆ ಸಂಬಂಧಿಸಿದಂತೆ ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ ಇವರಿಂದ ಧೃಡೀಕರಣ ಪಡೆಯಲು ಕ್ರಮವಹಿಸಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿಗಳು 2021 ಹಾಗೂ ಹೈದ್ರಾಬಾದ್ ಕರ್ನಾಟಕ ಮೀಸಲಾತಿ ಅಧಿಸೂಚನೆಯಂತೆ ಸಂಘದ ಅಧೀನದ ವಸತಿ ಶಾಲೆಗಳಲ್ಲಿ ಈಗಾಗಲೇ ಮಂಜೂರಾಗಿ ಖಾಲಿ ಇರುವ ಹಾಗೂ ಕರ್ನಾಟಕ ಲೋಕಾಸೇವಾ ಆಯೋಗದಿಂದ ಹೆಚ್ಚುವರಿ ಆಯ್ಕೆ ಪಟ್ಟಿಗೆ ಸಲ್ಲಿಸಿರುವ ಪ್ರಮಾಣವನ್ನು ಹೊರತುಪಡಿಸಿ, ಉಳಿದ ಈ ಕೆಳಕಂಡ “ಸಿ” ವೃಂದದ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ವಿವರ ಈ ಕೆಳಕಂಡಂತಿದೆ.

ಮೇಲ್ಕಂಡ ವಸತಿ ಶಾಲೆಗಳಿಗೆ ಮಂಜೂರಾಗಿರುವ ಹುದ್ದೆಗಳನ್ನು ನೇಮಕಾತಿಯಡಿ ಭರ್ತಿ ಮಾಡಲು ಭರಿಸಬೇಕಾದ ವೆಚ್ಚವನ್ನು ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಶೀರ್ಷಿಕೆ:2225-01-277-0-65 (ರಾಜ್ಯವಲಯ-ಯೋಜನೆ) ಮತ್ತು ಪರಿಶಿಷ್ಟ ವರ್ಗದ ವಸತಿ ಶಾಲೆಗಳಿಗೆ ಭರಿಸಬೇಕಾದ ಹೆಚ್ಚುವರಿ ವೆಚ್ಚವನ್ನು ಲೆಕ್ಕಶೀರ್ಷಿಕೆ:2225-02-277-0-37 (ರಾಜ್ಯವಲಯ-ಯೋಜನೆ) ರಡಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಲೆಕ್ಕಶೀರ್ಷಿಕ:2225-03-277-2-62 (ರಾಜ್ಯವಲಯ-ಯೋಜನೆ) ರಡಿ ಭರಿಸಲಾಗುವುದು.

ಈ ಅಂಶಗಳ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ ಏಕಲವ್ಯ/ಶ್ರೀಮತಿ ಇಂದಿರಾಗಾಂದಿ/ಡಾ|| ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ ಮಂಜೂರಾಗಿರುವ ಗ್ರೂಪ್-ಸಿ ವೃಂದದ ಬೋಧಕ/ಬೋಧಕೇತರ ಹುದ್ದೆಗಳನ್ನು ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977 ರ ನಿಯಮಗಳು ಹಾಗೂ ಸಂಘದ ವೃಂದ ಮತ್ತು ನೇಮಕಾತಿ ತಿದ್ದುಪಡಿ ನಿಯಮಗಳು 2021 ರನ್ನಯ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇರ ನೇಮಕಾತಿಯಡಿ ಭರ್ತಿ ಮಾಡಿಕೊಳ್ಳಲು ನೇಮಕಾತಿ ಪ್ರಾಧಿಕಾರವನ್ನು ನಿಗದಿಪಡಿಸಿ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲು ಅನುಮೋದನೆಯೊಂದಿಗೆ ಆದೇಶ ಹೊರಡಿಸುವಂತೆ ಕೋರಿರುತ್ತಾರೆ.

ಮೇಲಿನ ಅಂಶಗಳನ್ನು ಸರ್ಕಾರವು ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸಮಾಜ ಕಲ್ಯಾಣ ಇಲಾಖೆ/ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆ/ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಬರುವ ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ / ಅಟಲ್ ಬಿಹಾರಿ ವಾಜಪೇಯಿ/ ಏಕಲವ್ಯ ಮಾದರಿ/ ಶ್ರೀಮತಿ ಇಂದಿರಾಗಾಂಧಿ/ ಡಾ|| ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಈ ಕೆಳಕಂಡ 875 ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮಗಳನ್ನಯ ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಈ ಕೆಳಕಂಡ ಷರತ್ತಿಗೊಳಪಟ್ಟು ಅನುಮೋದನೆ ನೀಡಿ ಆದೇಶಿಸಿದೆ.

ಷರತ್ತು:

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಕ್ಕೆ ಮಂಜೂರಾದ ಬೋಧಕ ಹುದ್ದೆಗಳ ಕನಿಷ್ಠ ಶೇ. 20 ರಷ್ಟು ಹುದ್ದೆಗಳನ್ನು ಶಿಕ್ಷಣ ಇಲಾಖೆಯಿಂದ ನಿಯೋಜನೆ ಮೂಲಕ ಭರ್ತಿ ಮಾಡಲು ಅನುಕೂಲವಾಗುವಂತೆ ಸಂಸ್ಥೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಮಾರ್ಪಡಿಸಿಕೊಳ್ಳತಕ್ಕದ್ದು,

ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ:ಆಇ 125 ಎಫ್‌ಆರ್‌ಸಿ 2023 ದಿನಾಂಕ:14.06.2024 ರಲ್ಲಿ ನೀಡಿರುವ ಸಹಮತಿಯನ್ವಯ ಆದೇಶ ಹೊರಡಿಸಲಾಗಿದೆ.

CLICK HERE TO DOWNLOAD ORDER

3 thoughts on “KREIS- Cadre and Recruitment”

Leave a Comment