KREIS & EMRS 2026 ಪರೀಕ್ಷೆ – ತಾತ್ಕಾಲಿಕ ಉತ್ತರ ಕೀ ಪ್ರಕಟ, ಆಕ್ಷೇಪಣೆ ಸಲ್ಲಿಸಲು ಅವಕಾಶ

KREIS & EMRS 2026 ಪರೀಕ್ಷೆ – ತಾತ್ಕಾಲಿಕ ಉತ್ತರ ಕೀ ಪ್ರಕಟ, ಆಕ್ಷೇಪಣೆ ಸಲ್ಲಿಸಲು ಅವಕಾಶ

KREIS & EMRS 2026 ಪರೀಕ್ಷೆ – ತಾತ್ಕಾಲಿಕ ಉತ್ತರ ಕೀ ಪ್ರಕಟ, ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.


KREIS / EMRS 2026 ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳು ಪ್ರಕಟವಾಗಿವೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಉತ್ತರ ಕೀ ಡೌನ್‌ಲೋಡ್ ಮಾಡಿ ತಮ್ಮ ಉತ್ತರಗಳನ್ನು ಪರಿಶೀಲಿಸಬಹುದು. ಆಕ್ಷೇಪಣೆ ಸಲ್ಲಿಸುವ ವಿಧಾನ ಹಾಗೂ ಪ್ರಮುಖ ದಿನಾಂಕಗಳ ಸಂಪೂರ್ಣ ಮಾಹಿತಿ ಇಲ್ಲಿ ಲಭ್ಯ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ / ಶ್ರೀಮತಿ ಇಂದಿರಾ ಗಾಂಧಿ / ಡಾ। ಬಿ.ಆರ್.ಅಂಬೇಡ್ಕರ್ / ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ / ಕವಿ ರನ್ನ / ಗಾಂಧಿ ತತ್ವ / ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 2026ನೇ ಸಾಲಿಗೆ 6ನೇ ತರಗತಿಯ ದಾಖಲಾತಿಗೆ ಸಂಬಂಧಿಸಿದ ಪ್ರವೇಶ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸುವ ಕುರಿತು.

2025-26ನೇ ಸಾಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ / ಶ್ರೀಮತಿ ಇಂದಿರಾ ಗಾಂಧಿ / ಡಾ।। ಬಿ.ಆರ್.ಅಂಬೇಡ್ಕರ್ /ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ / ಕವಿ ರನ್ನ / ಗಾಂಧಿ ತತ್ವ / ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 2026ನೇ ಸಾಲಿಗೆ 6ನೇ ತರಗತಿಯ ದಾಖಲಾತಿಗೆ ಸಂಬಂಧಿಸಿದ ಪ್ರವೇಶ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ.

ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಆನ್‌ಲೈನ್  ಪೋರ್ಟಲ್ https://cetonline.karnataka.gov.in/kea/ ಮೂಲಕ ಮಾತ್ರವೇ ದಿನಾಂಕ:07.03.2026 ಮಧ್ಯಾಹ್ನ 12:00 ಘಂಟೆಯೊಳಗೆ ಸಲ್ಲಿಸಬಹುದಾಗಿರುತ್ತದೆ.

ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು. ನಿಗದಿತ ಅವಧಿಯೊಳಗೆ ಮೇಲ್ಕಂಡ ಮಾಹಿತಿಗಳನ್ನು ಸಲ್ಲಿಸದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.

ವಿಷಯ ತಜ್ಞರ ಸಮಿತಿಯು ಪರಿಶೀಲಿಸಿ ತೀರ್ಮಾನಿಸುವ ಕೀ ಉತ್ತರಗಳು ಅಂತಿಮವಾಗಿರುತ್ತವೆ.

KREIS

 

CLICK HERE TO DOWNLOAD KEY ANSWERS

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!