KREIS EXAM-2025 Revised Key Answers Released
KREIS EXAM-2025 : ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ
ಏಕಲವ್ಯ ಮಾದರಿ ವಸತಿ ಶಾಲೆ
ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ
ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ
ಡಾ ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ
ಮಾಸ್ತಿ ವೆಂಕಟೇಶ ಅಯ್ಯಂಗಾರ್ ವಸತಿ ಶಾಲೆ
ಸಂಗೊಳ್ಳಿ ರಾಯಣ್ಣ ವಸತಿ ಶಾಲೆ
ಕವಿರನ್ನ ವಸತಿ ಶಾಲೆ
ಗಾಂಧಿತತ್ವ ವಸತಿ ಶಾಲೆ
ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳು
ಈ ಮೇಲಿನ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ತೆಗೆದುಕೊಳ್ಳಲಾಗಿತ್ತು.
ಇದೀಗ ಪರಿಷ್ಕೃತ ಕೀ-ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟ ಮಾಡಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ (KREIS) ರಡಿಯಲ್ಲಿನ ವಸತಿ ಶಾಲೆಗಳಿಗೆ ಪ್ರವೇಶ ಪರೀಕ್ಷೆ-2025ರ ಕೀ-ಉತ್ತರಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ದಿನಾಂಕ: 18-02-2025 ರಂದು ಪ್ರಕಟಿಸಿ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ:24-02-2025ರ ಮಧ್ಯಾಹ್ನ 12.00 ಗಂಟೆಯ ಒಳಗಾಗಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು.
ಅದರಂತೆ, ನಿಗದಿತ ಸಮಯದೊಳಗೆ ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಸಮಿತಿಯ ಶಿಫಾರಸ್ಸಿನಂತೆ ಪರಿಷ್ಕೃತಗೊಂಡಿರುವ ಕೀ-ಉತ್ತರದ ವಿವರ ಈ ಕೆಳಕಂಡಂತಿದೆ.
ಸೂಚನೆ : ಎಲ್ಲಾ ಆಕ್ಷೇಪಿತ ಪ್ರಶ್ನೆಗಳನ್ನು ವಿಷಯ ತಜ್ಞರಿಂದ ಪರಿಶೀಲಿಸಿ ಮೇಲ್ಕಂಡ ಪಟ್ಟಿಯಲ್ಲಿರುವ ಪ್ರಶ್ನೆಯ ಪರಿಷ್ಕೃತ ಕೀ-ಉತ್ತರವನ್ನು ಪ್ರಕಟಿಸಲಾಗಿದೆ. ಉಳಿದ ಆಕ್ಷೇಪಿತ ಪ್ರಶ್ನೆಗಳ ಕೀ-ಉತ್ತರಗಳಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು KEA ತಿಳಿಸಿದೆ.
ಪರಿಷ್ಕೃತ ಕೀ-ಉತ್ತರಗಳನ್ನು ಡೌನ್ಲೋಡ್ ಮಾಡಲು- CLICK HERE