KSEAB First Regulations: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಮೊದಲ ನಿಯಮಗಳು (ತಿದ್ದುಪಡಿ) 2025

KSEAB First Regulations: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಮೊದಲ ನಿಯಮಗಳು (ತಿದ್ದುಪಡಿ) 2025

KSEAB First Regulations:

ಅಧಿಸೂಚನೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಾಯ್ದೆ, 1966 (1966ರ ಕರ್ನಾಟಕ ಅಧಿನಿಯಮ ಸಂಖ್ಯೆ 16) ಸೆಕ್ಷನ್ 26 ಮತ್ತು ಸೆಕ್ಷನ್ 27 ರ ಮೂಲಕ ಪದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು, ಕರ್ನಾಟಕ ಸರ್ಕಾರದ ಅನುಮೋದನೆ ಮೇರೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮೊದಲ ನಿಯಮಾವಳಿಗಳು, 1966ಗೆ ಕೆಳಗಿನಂತೆ ಕರಡು ತಿದ್ದುಪಡಿ ನಿಯಮಗಳನ್ನು ಪ್ರಕಟಿಸಲಾಗಿರುತ್ತದೆ. ಇದರಿಂದ ಪರಿಣಾಮ ಬೀರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಮತ್ತು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದ 15 ದಿನಗಳ ಅವಧಿ ಮುಗಿದ ನಂತರ ಸದರಿ ಕರಡು ನಿಯಮಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಸೂಚನೆ ನೀಡಲಾಗಿದೆ.

ಮೇಲೆ ನಿರ್ದಿಷ್ಟ ಪಡಿಸಿದ ಅವಧಿ ಮುಗಿಯುವ ಮೊದಲು ಸದರಿ ಕರಡಿಗೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯಿಂದ ಮಂಡಳಿಗೆ ಸ್ವೀಕೃತವಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ಮಂಡಳಿಯು ಪರಿಗಣಿಸುತ್ತದೆ. ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ, 3 ನೇ ಮಹಡಿ, 6 ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ಸಲ್ಲಿಸಬಹುದು.

ಕರಡು ನಿಯಮಗಳು

  1. ಶೀರ್ಷಿಕೆ ಮತ್ತು ಪ್ರಾರಂಭ. ಈ ನಿಯಮಗಳನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಮೊದಲ ನಿಯಮಗಳು (ತಿದ್ದುಪಡಿ) 2025 ಎಂದು ಕರೆಯತಕ್ಕದ್ದು.
  2. ಅನುಬಂಧ III ರ ತಿದ್ದುಪಡಿ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಮೊದಲ ನಿಯಮಾವಳಿಗಳು, 1966, ಅನುಬಂಧ II ರಲ್ಲಿ,-

(1) ನಿಯಮ 16 ಮತ್ತು ಅದಕ್ಕೆ ಸಂಬಂಧಿಸಿದ ನಮೂದುಗಳಿಗೆ, ಈ ಕೆಳಗಿನಂತೆ ಪ್ರತಿಯೋಜಿಸತಕ್ಕದ್ದು,

*16. ಅಭ್ಯರ್ಥಿಗಳು ಆಂತರಿಕ ಮೌಲ್ಯಮಾಪನ ಮತ್ತು ಬಾಹ್ಯ ಪರೀಕ್ಷೆ ಎರಡೂ ಸೇರಿ ಒಟ್ಟಾರೆ ಸರಾಸರಿ 33% ಅಂಕಗಳನ್ನು ಪಡೆದು, ಒಟ್ಟು 625 ಅಂಕಗಳಿಗೆ ಕನಿಷ್ಠ 206 ಅಂಕಗಳನ್ನು ಗಳಿಸಿದಲ್ಲಿ ಮತ್ತು ಆಯಾ ವಿಷಯದ ಒಟ್ಟು ಅಂಕಗಳಲ್ಲಿ ಕನಿಷ್ಠ 30% ಅಂಕಗಳನ್ನು ಪಡೆದಲ್ಲಿ ಅಂತಹ ಅಭ್ಯರ್ಥಿಯನ್ನು ಉತ್ತೀರ್ಣರೆಂದು ಘೋಷಿಸಲಾಗುತ್ತದೆ.”:

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

(ಎಸ್. ಪ್ರಕಾಶ)

ಸರ್ಕಾರದ ಅಧೀನ ಕಾರ್ಯದರ್ಶಿ (ಪ್ರೌಢ) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

 

CLICK HERE TO DOWNLOAD DRAFT NOTIFICATION 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!