KSET EXAM-2024: Final Key answers
KSET EXAM-2024: ದಿನಾಂಕ:24.11.2024 ರಂದು ನಡೆಸಿದ ಪರೀಕ್ಷೆಗಳಾದ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆ-ಸೆಟ್)-2024 ಮತ್ತು ರಾಯಚೂರು ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕರ ನೇಮಕಾತಿ-2024 ಇವುಗಳಿಗೆ ಸಂಬಂಧಿಸಿದಂತೆ ಪತ್ರಿಕೆ-1 ಮತ್ತು ಪತ್ರಿಕೆ-2ರ ಒಟ್ಟು 47 ವಿಷಯಗಳಿಗೆ ಕೀ-ಉತ್ತರಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ ದಿನಾಂಕ:26-11-2024ರಂದು ಪ್ರಕಟಿಸಿ ಕೀ-ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ:29-11-2024ರ ಸಂಜೆ 5.00 ಗಂಟೆಯವರೆಗೆ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು.
ಆದರಂತೆ, 16 ವಿಷಯಗಳಿಗೆ ಅಭ್ಯರ್ಥಿಗಳಿಂದ ಯಾವುದೇ ಆಕ್ಷೇಪಣೆಗಳು ಸ್ವೀಕೃತವಾಗಿರುವುದಿಲ್ಲ. ಉಳಿದ 31 ವಿಷಯಗಳ ಬಗ್ಗೆ ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯು ಪರಿಶೀಲಿಸಿದ್ದು, ವಿಷಯ ತಜ್ಞರ ಸಮಿತಿಯ ಶಿಫಾರಸ್ಸಿನಂತೆ ಒಟ್ಟು 28 ವಿಷಯಗಳ ಕೆಲವು ಕೀ-ಉತ್ತರಗಳನ್ನು ತಿದ್ದುಪಡಿ ಮಾಡಿ ಪ್ರಕಟಿಸಲಾಗಿರುತ್ತದೆ.
ಸದರಿ 28 ವಿಷಯಗಳ ಪರಿಷ್ಕೃತ ಕೀ-ಉತ್ತರಗಳನ್ನು ಈ ಕೆಳಕಂಡಂತೆ ಪ್ರಕಟಿಸಲಾಗಿದೆ.
1 thought on “KSET EXAM-2024: Final Key answers Released”