KSET EXAM-2024 RESULT RELEASED.
KSET EXAM RESULT-2024 ದಿನಾಂಕ: 24.11.2024 ರಂದು ಪ್ರಾಧಿಕಾರದಿಂದ ನಡೆಸಿದ ಕೆಸೆಟ್-2024 ಪರೀಕ್ಷೆಗೆ ಸಂಬಂಧಿಸಿದಂತೆ, ಒಟ್ಟು 41 ವಿಷಯಗಳ ಕೀ ಉತ್ತರಗಳನ್ನು ಪ್ರಕಟಿಸಿ ದಿನಾಂಕ 29.11.2024 ರವರೆಗೆ ಅಭ್ಯರ್ಥಿಗಳಿಂದ ಆಕ್ಷೇಪಣೆಗಳನ್ನು ಅಹ್ವಾನಿಸಲಾಗಿತ್ತು.
ಪ್ರಕಟಿತ ಕೀ ಉತ್ತರಗಳಿಗೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಶಿಫಾರಸ್ಸಿನಂತೆ ಅಂತಿಮ ಕೀ ಉತ್ತರಗಳನ್ನು ದಿನಾಂಕ 13.12.2024 ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಅಂತಿಮ ಕೀ ಉತ್ತರಗಳನ್ವಯ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ಸದರಿ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಲಿಂಕ್ ಮೂಲಕ ದಿನಾಂಕ: 19.12.2024 ಮಧ್ಯಾಹ್ನ 12.30 ರೊಳಗೆ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.
ಪೂರಕ ದಾಖಲೆಗಳಿಲ್ಲದೆ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು kea ತಿಳಿಸಿದೆ.
CLICK HERE TO CHECK SUBJECT WISE RESULT