KSET EXAM-2025 Official Provisional Key Answers Released.
KSET EXAM-2025 Official Provisional Key Answers Released: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್)-2025ರ ಕೀ ಉತ್ತರಗಳನ್ನು ಪ್ರಕಟಿಸುವ ಬಗ್ಗೆ.
ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್)-2025ರ ಪರೀಕ್ಷೆಗೆ ಸಂಬಂಧಿಸಿದಂತೆ, ದಿನಾಂಕ:02.11.2025 ರಂದು ನಡೆಸಲಾಗಿದ್ದು, ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ದಿನಾಂಕ:04.11.2025 ರಂದು ಪ್ರಕಟಿಸಲಾಗಿರುತ್ತದೆ.
ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಆನ್‌ಲೈನ್ ಪೋರ್ಟಲ್ https://cetonline.karnataka.gov.in/keaobjections/forms/login.aspx ಲಿಂಕ್ ಮೂಲಕ ಮಾತ್ರವೇ ದಿನಾಂಕ:06.11.2025 ಸಂಜೆ 3.00 ಗಂಟೆಯೊಳಗೆ ಸಲ್ಲಿಸಬಹುದಾಗಿರುತ್ತದೆ.

ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ವಿಷಯ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು. ಸಲ್ಲಿಸಲಾಗುವ ಪ್ರತಿ ಆಕ್ಷೇಪಣೆಗೆ ರೂ.50/-ನ್ನು ಪಾವತಿಸತಕ್ಕದ್ದು ಹಾಗೂ ಆಕ್ಷೇಪಣೆ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೇ ಇರುವ, ಅಪೂರ್ಣ/ಆಧಾರರಹಿತವಾಗಿರುವ ಅಥವಾ ಶುಲ್ಕ ಪಾವತಿಸದೇ ಇರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
ವಿಷಯ ತಜ್ಞರ ಸಮಿತಿಯು ಪರಿಶೀಲಿಸಿ ತೀರ್ಮಾನಿಸುವ ಕೀ ಉತ್ತರಗಳು ಅಂತಿಮವಾಗಿರುತ್ತವೆ. ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಷಯವಾರು ತಾತ್ಕಾಲಿಕ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
CLICK HERE TO DOWNLOAD KEY ANSWERS