Major Update in Karnataka Education Sector: ಏಕರೂಪತೆ ಮತ್ತು ಜಾತ್ಯತೀತತೆಗೆ ಒತ್ತು | ರಾಜ್ಯ ಸರ್ಕಾರದ ಹೊಸ ನಿರ್ದೇಶನಗಳು
Major Update in Karnataka Education Sector:ಕರ್ನಾಟಕ ಶಿಕ್ಷಣ ಕಾಯ್ದೆ, 1983 ಅನ್ನು ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಆಡಳಿತ, ಶಿಸ್ತು ಮತ್ತು ನಿಯಂತ್ರಣವನ್ನು ಕಾಯ್ದುಕೊಳ್ಳಲು ಜಾರಿಗೆ ತರಲಾಗಿದೆ. ಶಿಕ್ಷಣವು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ, ಮಾನಸಿಕ ಒತ್ತಡ ನಿವಾರಣೆಗೆ, ಸಾಂವಿಧಾನಿಕ ಮೌಲ್ಯಗಳ ವೃದ್ಧಿಗೆ ಹಾಗೂ ವೈಜ್ಞಾನಿಕ, ಜಾತ್ಯತೀತ ಮತ್ತು ಎಲ್ಲರನ್ನೂ ಒಳಗೊಳ್ಳುವ ದೃಷ್ಟಿಕೋನವನ್ನು ಬೆಳೆಸಲು ಪ್ರಮುಖ ಸಾಧನವಾಗಿದೆ.
ಶಿಕ್ಷಣ ಸಂಸ್ಥೆಗಳು ಕೇವಲ ಶೈಕ್ಷಣಿಕ ಬೋಧನಾ ಕೇಂದ್ರಗಳಲ್ಲ. ಬದಲಾಗಿ ವಿದ್ಯಾರ್ಥಿಗಳು ವೈಜ್ಞಾನಿಕತೆ, ವೈಚಾರಿಕತೆ, ಸಮಾನತೆ, ಘನತೆ, ಭಾತೃತ್ವ, ಶಿಸ್ತು, ಪರಸ್ಪರ ಗೌರವ, ಸಾಮಾಜಿಕ ಸಾಮರಸ್ಯ ಮತ್ತು ಜವಾಬ್ದಾರಿಯುತ ನಮ್ಮ ಸಾಂವಿಧಾನಿಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಲಿಯುವ ಸಾಂವಿಧಾನಿಕ ಕೇಂದ್ರಗಳಾಗಿವೆ. ಕರ್ನಾಟಕ ಶಿಕ್ಷಣ ಕಾಯ್ದೆ, 1983ರ ಸೆಕ್ಷನ್ 7 ರನ್ವಯ, ಶಿಕ್ಷಣದ ಸಮರ್ಪಕ ನಿಯಂತ್ರಣಕ್ಕಾಗಿ ಅಗತ್ಯವಿರುವ ವಿಷಯಗಳನ್ನು ನಿರ್ದಿಷ್ಟಪಡಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿದೆ.
ಸೆಕ್ಷನ್ 133(2) ರನ್ವಯ ಈ ಕಾಯ್ದೆ ಮತ್ತು ನಿಯಮಗಳ ಉದ್ದೇಶಗಳನ್ನು ಜಾರಿಗೊಳಿಸಲು ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶನ ನೀಡುವ ಅಧಿಕಾರವೂ ಸರ್ಕಾರಕ್ಕಿದೆ.
ಮೇಲೆ ಓದಲಾದ (4) ರ ಆದೇಶವನ್ನು, ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಮತ್ತು ಉಡುಪು ಸಂಹಿತೆಗೆ ಸಂಬಂಧಿಸಿದಂತೆ ಉಂಟಾಗಿದ್ದ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ಹೊರಡಿಸಲಾಗಿತ್ತು. ಸರ್ಕಾರಿ, ಖಾಸಗಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಸಂಬಂಧಿತ ಪ್ರಾಧಿಕಾರವು ನಿಗದಿಪಡಿಸಿದ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು ಹಾಗೂ ಸಮವಸ್ತ್ರ ನಿಗದಿಪಡಿಸದಿದ್ದಲ್ಲಿ ಏಕತೆ, ಸಮಾನತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಹೊಂದುವಂತಹ ಉಡುಪನ್ನು ಧರಿಸಬೇಕು ಎಂದು ಸದರಿ ಆದೇಶದಲ್ಲಿ ತಿಳಿಸಲಾಗಿತ್ತು.
ಆದರೆ, ಸಮವಸ್ತ್ರ ನಿಯಮಗಳನ್ನು ಜಾರಿಗೊಳಿಸುವಾಗ, ವಿವಿಧ ಧರ್ಮ ಮತ್ತು ಸಂಪ್ರದಾಯಗಳ ವಿದ್ಯಾರ್ಥಿಗಳು ಧರಿಸುವ ಸಾಂಪ್ರದಾಯಿಕ ಮತ್ತು ನಂಬಿಕೆ ಆಧಾರಿತವಾದ ಕೆಲವು ಸೀಮಿತ ಗುರುತುಗಳ ಕುರಿತಾದ ವಿಷಯಗಳು ಸರ್ಕಾರದ ಗಮನಕ್ಕೆ ಬಂದಿವೆ. ಈ ವಿಷಯವನ್ನು ಮರು ಪರಿಶೀಲಿಸಿದ ಸರ್ಕಾರವು, ವಿದ್ಯಾರ್ಥಿಗಳು ಸಾಮಾನ್ಯವಾಗಿ ಧರಿಸುವ ಇಂತಹ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳನ್ನು ನಿರ್ಬಂಧಿಸದೆಯೇ ಸಂಸ್ಥೆಯ ಶಿಸ್ತು ಮತ್ತು ಸುವ್ಯವಸ್ಥೆಯನ್ನು ಕಾಪಾಡಬಹುದು ಎಂದು ಅಭಿಪ್ರಾಯಪಟ್ಟಿದೆ.
ಆದರೆ, ಸಾಂಪ್ರದಾಯಿಕ ಹಾಗೂ ಪದ್ಮತಿ ಆಧಾರಿತವಾದ ಸಂಕೇತಗಳನ್ನು ನಿಗದಿತ ಸಮವಸ್ತ್ರಕ್ಕೆ ಅಡ್ಡಿಯಾಗಬಾರದು ವಿದ್ಯಾರ್ಥಿಗಳ ಗುರುತಿಸುವಿಕೆಗೆ ತೊಂದರೆಯಾಗಬಾರದು ಹಾಗೂ ಶಿಸ್ತು, ಸುರಕ್ಷತೆ, ಬೋಧನೆ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರಬಾರದು ಎಂಬುದನ್ನು ಸರ್ಕಾರವು ಗಂಭೀರವಾಗಿ ಗಣನೆಗೆ ತೆಗೆದುಕೊಂಡಿದೆ ಹಾಗೂ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಕೇಂದ್ರೀಯ ವಿದ್ಯಾಲಯಗಳಲ್ಲಿ ಅಳವಡಿಸಿಕೊಂಡಿರುವ ವಸ್ತ್ರ, ಸಂಹಿತೆಯ ನಿಯಮಗಳನ್ನೂ ಸಹ ಸರ್ಕಾರವು ಪರಿಶೀಲಿಸಿದೆ.
ಶಿಕ್ಷಣ ಸಂಸ್ಥೆಗಳು ವೈಚಾರಿಕತೆ, ವೈಜ್ಞಾನಿಕತೆ, ಸಮಾನತೆ, ಭ್ರಾತೃತ್ವ, ಘನತೆ, ಪರಸ್ಪರ ಗೌರವ ಮತ್ತು ಜಾತ್ಯತೀತ ದೃಷ್ಟಿಕೋನವನ್ನು ಉತ್ತೇಜಿಸಬೇಕು. ಸಾಂವಿಧಾನಿಕ ಅರ್ಥದಲ್ಲಿ ಜಾತ್ಯತೀತತೆ ಎಂದರೆ ವೈಯಕ್ತಿಕ ನಂಬಿಕೆಗಳ ವಿರೋಧವಲ್ಲ. ಬದಲಾಗಿ, ಎಲ್ಲರಿಗೂ ಸಮಾನ ಗೌರವ ನೀಡುವಿಕೆ, ಸಾಂಸ್ಥಿಕ ನಿಷ್ಪಕ್ಷಪಾತತೆ ಮತ್ತು ತಾರತಮ್ಯರಹಿತ ವರ್ತನೆಯಾಗಿದೆ. ಸರ್ಕಾರವು ಸಾಂವಿಧಾನಿಕ ತತ್ವಗಳಿಗೆ ಅನುಗುಣವಾಗಿ ಎಲ್ಲಾ ಧರ್ಮ ಮತ್ತು ಸಂಪ್ರದಾಯಗಳ ಬಗ್ಗೆ ತಟಸ್ಥ ಮತ್ತು ಸಮಾನ ನಿಲುವು ಹೊಂದಿರಬೇಕು.
ಅದೇ ರೀತಿ, ಯಾರಿಗೂ ತೊಂದರೆಯಾಗದಂತಹ ಸೀಮಿತ ಸಾಂಪ್ರದಾಯಿಕ ಅಥವಾ ನಂಬಿಕೆ ಆಧಾರಿತ ಆಚರಣೆಗಳಿಂದಾಗಿ ಯಾವುದೇ ವಿದ್ಯಾರ್ಥಿಗೆ ಶಿಕ್ಷಣದ ಹಕ್ಕು ನಿರಾಕರಣೆ ಆಗದಂತೆ ನೋಡಿಕೊಳ್ಳಬೇಕಾಗಿದೆ. ಸಂಸ್ಥೆಯ ಶಿಸ್ತು ಹಾಗೂ ಸಮಾನತೆ, ಘನತೆ ಮತ್ತು ಶಿಕ್ಷಣದ ಹಕ್ಕಿನಂತಹ ಸಾಂವಿಧಾನಿಕ ಮೌಲ್ಯಗಳ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಅತ್ಯಗತ್ಯವಾಗಿದೆ.
ಆದ್ದರಿಂದ, ನಿಗದಿತ ಸಮವಸ್ತ್ರಕ್ಕೆ ಪೂರಕವಾಗಿ ಮತ್ತು ಅದಕ್ಕೆ ಹೊಂದಿಕೊಳ್ಳುವಂತೆ ಸೀಮಿತ ಸಾಂಪ್ರದಾಯಿಕ ಅಥವಾ ನಂಬಿಕೆ ಆಧಾರಿತ ಗುರುತುಗಳನ್ನು ಧರಿಸಲು ಅವಕಾಶ ನೀಡುವ, ಆದರೆ ಸಂಸ್ಥೆಯ ಶಿಸ್ತು ಸಾರ್ವಜನಿಕ ಸುವ್ಯವಸ್ಥೆ, ಸುರಕ್ಷತೆ, ತರಗತಿಯ ವಾತಾವರಣ ಮತ್ತು ಶಿಕ್ಷಣ ಸಂಸ್ಥೆಗಳ ಜಾತ್ಯತೀತ ಸ್ವರೂಪಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳುವ ವ್ಯವಸ್ಥೆಯನ್ನು ರೂಪಿಸುವುದು ಸೂಕ್ತವೆಂದು ಸರ್ಕಾರ ಭಾವಿಸಿದೆ.
ಈ ಹಿನ್ನೆಲೆಯಲ್ಲಿ ಸಮವಸ್ತ್ರ ಮತ್ತು ಶಿಸ್ತನ್ನು ಕಾಪಾಡುವ ಜೊತೆಗೆ, ತಾರತಮ್ಯವಿಲ್ಲದ ಮತ್ತು ಸಾಂವಿಧಾನಿಕವಾಗಿ ಸಮತೋಲಿತವಾದ ರೀತಿಯಲ್ಲಿ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳನ್ನು ಧರಿಸಲು ಅನುಮತಿಸುವ ಉದ್ಧೇಶದಿಂದ, ಮೇಲೆ ಓದಲಾದ (4) ರ ಆದೇಶವನ್ನು ಹಿಂಪಡೆದು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಹೊಸ ನಿರ್ದೇಶನಗಳನ್ನು ನೀಡುವುದು ಅಗತ್ಯವೆಂದು ಸರ್ಕಾರವು ತೀರ್ಮಾನಿಸಿದೆ. ಅದರಂತೆ, ಕೆಳಕಂಡ ಆದೇಶ:
ಸರ್ಕಾರದ ಆದೇಶ ಸಂಖ್ಯೆ: ಇಪಿ 14 ಎಸ್ ಹೆಚ್ ಹೆಚ್ 2022, ಬೆಂಗಳೂರು ದಿನಾಂಕ: 13.05.2026
ಪ್ರಸ್ತಾವನೆಯಲ್ಲಿ ವಿವರಿಸಲಾದ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ಶಿಕ್ಷಣ ಕಾಯ್ದೆ 1983 ರ ಸೆಕ್ಷನ್ 7 ಮತ್ತು 133(2) ರನ್ನಯ ಹಾಗೂ ಕರ್ನಾಟಕ ಶಿಕ್ಷಣ ಸಂಸ್ಥೆಗಳು (ವರ್ಗೀಕರಣ. ನಿಯಂತ್ರಣ ಮತ್ತು ಪಠ್ಯಕ್ರಮಗಳ ನಿರ್ಧಾರ ಇತ್ಯಾದಿ) ನಿಯಮಗಳು, 1995 ರ ನಿಯಮ 11 ರೊಂದಿಗೆ ಓದಿಕೊಂಡು, ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ:
1. ಮೇಲೆ ಓದಲಾದ (4) ರ ಸರ್ಕಾರದ ಆದೇಶ ಸಂಖ್ಯೆ: ಇಪಿ 14 ಎಸ್ಹೆಚ್ಹೆಚ್ 2022, ದಿನಾಂಕ: 05.02.2022 ಅನ್ನು ಈ ಮೂಲಕ ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ.
2. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಪದವಿಪೂರ್ವ ಕಾಲೇಜುಗಳು, ಸಂಸ್ಥೆಯ ಅಗತ್ಯಗಳು ಮತ್ತು ಮಾರ್ಪಡಿಸುವ ಅಥವಾ ಅದರ ಮೂಲ ಉದ್ದೇಶವನ್ನು, ವಿಫಲಗೊಳಿಸುವಂತಿರಬಾರದು.
4. ಇಂತಹ ಅನುಮತಿಸಬಹುದಾದ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳು ವಿದ್ಯಾರ್ಥಿಗಳು ಸಾಮಾನ್ಯವಾಗಿ ಧರಿಸುವ ಪೇಟ/ಟರ್ಬನ್, ಜನಿವಾರ/ಪವಿತ್ರ ದಾರ, ಶಿವದಾರ, ರುದ್ರಾಕ್ಷಿ, ತಲೆವಸ್ತ್ರ/ಹಿಜಾಬ್ (Headscarf) ಅಥವಾ ಇತರೆ ಯಾವುದೇ ಸಮಾನ ಸ್ವರೂಪದ ಸಾಂಪ್ರದಾಯಿಕ ಹಾಗೂ ಪದ್ಮತಿ ಆಧಾರಿತವಾದ ಸಂಕೇತಗಳು ಸೇರಿರಬಹುದು. ಆದರೆ, ಇವು ಶಿಸ್ತು, ಸುರಕ್ಷತೆ ಮತ್ತು ವಿದ್ಯಾರ್ಥಿಯ ಗುರುತಿಸುವಿಕೆಗೆ ಅಡ್ಡಿಯಾಗಬಾರದು.
5. ನಿಗದಿತ ಸಮವಸ್ತ್ರದೊಂದಿಗೆ ಇಂತಹ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳು ಧರಿಸಿರುವ ಕಾರಣಕ್ಕಾಗಿ ಯಾವುದೇ ವಿದ್ಯಾರ್ಥಿಗೆ ಶಿಕ್ಷಣ ಸಂಸ್ಥೆ, ತರಗತಿ, ಪರೀಕ್ಷಾ ಕೊಠಡಿ ಅಥವಾ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರವೇಶವನ್ನು ನಿರಾಕರಿಸುವಂತಿಲ್ಲ.
6. ಇಂತಹ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳನ್ನು ಧರಿಸುವಂತೆ ಯಾವುದೇ ವಿದ್ಯಾರ್ಥಿಯನ್ನು ಒತ್ತಾಯಿಸುವಂತಿಲ್ಲ. ಅದೇ ರೀತಿ ಸರ್ಕಾರವು ಅನುಮತಿಸಿರುವ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಮತಿ ಆಧಾರಿತವಾದ ಸಂಕೇತಗಳನ್ನು ಬಲವಂತವಾಗಿ ತೆಗೆಯುವಂತೆಯೂ ಒತ್ತಾಯಿಸುವಂತಿಲ್ಲ. ಆದರೆ, ಪರೀಕ್ಷಾ ಸಂದರ್ಭಗಳಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದ ವಸ್ತ್ರ, ಸಂಹಿತೆಯ ನಿಯಮಗಳನ್ನು ಸಂದರ್ಭೋಚಿತವಾಗಿ ಸಂಬಂಧಿಸಿದ ಪ್ರಾಧಿಕಾರಗಳು ಅಳವಡಿಸಿಕೊಳ್ಳತಕ್ಕದ್ದು.
7. ಈ ಆದೇಶದ ಅನುಷ್ಠಾನವು ಏಕರೂಪವಾಗಿರಬೇಕು. ಧಾರ್ಮಿಕ, ಸಾಂಪ್ರದಾಯಿಕ ನಿಷ್ಪಕ್ಷಪಾತತೆಯಿಂದ ಕೂಡಿರಬೇಕು ಮತ್ತು ತಾರತಮ್ಯರಹಿತವಾಗಿರಬೇಕು.
ಸಮಾನತೆ, ಘನತೆ, ಭ್ರಾತೃತ್ವ, ಜಾತ್ಯತೀತತೆ, ವೈಜ್ಞಾನಿಕತೆ, ವೈಚಾರಿಕತೆ ಮತ್ತು ಶಿಕ್ಷಣದ ಹಕ್ಕು ಎಂಬ ಸಾಂವಿಧಾನಿಕ ಮೌಲ್ಯಗಳಿಗೆ ಅನುಗುಣವಾಗಿರತಕ್ಕದ್ದು.
8. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳು (SDMC), ಕಾಲೇಜು ಅಭಿವೃದ್ಧಿ ಸಮಿತಿಗಳು (CDC), ಆಡಳಿತ ಮಂಡಳಿಗಳು, ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಯಾವುದೇ ವಿದ್ಯಾರ್ಥಿಯನ್ನು ತಾರತಮ್ಮ ಧೋರಣೆಯಿಂದ, ಅವಮಾನಕಾರಿ ವರ್ತನೆಯ ಮೂಲಕ ಬಳಲುವಂತೆ ಮಾಡಬಾರದು. ಈ ಎಲ್ಲ ಸಂಸ್ಥೆಗಳು ಬಸವಣ್ಣನವರು ಹೇಳಿದಂತೆ “ಇವ ನಮ್ಮವ” ಎಂಬ ಉದಾತ್ತವಾದ ಒಳಗೊಳ್ಳುವ ನಿಲುವನ್ನು ಅಳವಡಿಸಿಕೊಳ್ಳಬೇಕು. ಆ ಮೂಲಕ ಯಾವುದೇ ವಿದ್ಯಾರ್ಥಿಯ ಶಿಕ್ಷಣವು ನಿರಾಕರಣೆ ಆಗದ ರೀತಿಯಲ್ಲಿ ಸಂಸ್ಥೆಯು ಶಿಸ್ತು ಕಾಪಾಡಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳತಕ್ಕದ್ದು.
10. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರು ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು, ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಈ ಆದೇಶದ ಅನುಷ್ಠಾನಕ್ಕಾಗಿ ಅಗತ್ಯ ನಿರ್ದೇಶನಗಳನ್ನು ಹೊರಡಿಸತಕ್ಕದ್ದು.
