Mental Health:ಮಾನಸಿಕ ಆರೋಗ್ಯವರ್ಧನೆಗೆ 12 ಸೂತ್ರಗಳು
Mental Health: STRESS MANAGEMENT & PROMOTION OF MENTAL HEALTH
Minimise your needs. Lead a simple and contentful life.
M– Money management: Be wise in earning and spending money.
ನಿಮ್ಮ ಅಗತ್ಯಗಳನ್ನು ತಗ್ಗಿಸಿ. ಸರಳ ತೃಪ್ತ ಜೀವನ ಮಾಡಿ. ಹಣವನ್ನು ವಿವೇಚನೆಯಿಂದ ಸಂಪಾದಿಸಿ ಮತ್ತು ಬಳಸಿ. ಆದಾಯಕ್ಕಿಂತ ಖರ್ಚು ಹೆಚ್ಚುವುದು ಬೇಡ.
E– Expectations about others: To be reduced. Persuade them to understand and live comfortably with you. Empathise with them.
ಇತರರ ಬಗ್ಗೆ ನಿರೀಕ್ಷೆಗಳನ್ನು ಕಡಿಮೆ ಮಾಡಿ. ಅವರು ನಿಮ್ಮೊಂದಿಗೆ ಹೊಂದಿಕೊಳ್ಳಲು ಅವಕಾಶ ಕೊಡಿ. ಎಲ್ಲರೊಡನೆ ಸ್ನೇಹದಿಂದಿರಿ. ಅವರನ್ನು ಅರ್ಥಮಾಡಿಕೊಳ್ಳಿ.
N– Negative thinking: To be changed to positive thinking.
ನಿರಾಶಾವಾದ ಬೇಡ. ಒಳ್ಳೆಯದಾಗುತ್ತದೆ ಎಂಬ ಭರವಸೆ ಇರಲಿ. ಎಲ್ಲರಲ್ಲಿ ಮತ್ತು ಎಲ್ಲದರಲ್ಲಿ ಒಳ್ಳೆಯದನ್ನು ಕಾಣಿ.
T- Today should get importance, not the past, not the future, Try to be happy today.
ವರ್ತಮಾನ ಮುಖ್ಯ. ನಿನ್ನೆ ಮತ್ತು ನಾಳೆಯ ಬಗ್ಗೆ ಚಿಂತೆ ಬೇಡ.
A- Accept reality: Adapt your self to it. Appreciate yourself and others.
ವಾಸ್ತವಿಕತೆಯನ್ನು ಒಪ್ಪಿಕೊಳ್ಳಿ ಮತ್ತು ಅದಕ್ಕೆ ಹೊಂದಿಕೊಳ್ಳಿ. ನಿಮ್ಮನ್ನು ಇತರರನ್ನು ಶ್ಲಾಘಿಸಿ.
L- Loneliness to be avoided. Get support of others. Develop religious and spiritual activities Join social organisations.
ಒಂಟಿಯಾಗಿರಬೇಡಿ. ಜನರೊಂದಿಗೆ ಬೆರೆಯಿರಿ. ಸಂಘ ಸಂಸ್ಥೆಗಳ ಸದಸ್ಯರಾಗಿ, ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಿ.
H- Hobbies to divert your attention, to relax Music, reading, creative activities, sports, yoga meditation.
ಸೃಜನಶೀಲ ಚಟುವಟಿಕೆಗಳು, ಸಂಗೀತ, ಸಾಹಿತ್ಯ, ಯೋಗ, ಧ್ಯಾನ, ಕ್ರೀಡೆಗಳಿಗೆ ದಿನವೂ ಒಂದು ಗಂಟೆ ಮೀಸಲಿಡಿ.
E– Express your feelings with some one you like/Write diary/ keep good environment.
ನಿಮ್ಮ ಭಾವನೆ ಅನಿಸಿಕೆಗಳನ್ನು ಆತ್ಮೀಯರೊಂದಿಗೆ ಹೇಳಿಕೊಳ್ಳಿ. ನಿಮ್ಮ ಪರಿಸರವನ್ನು ಚೆನ್ನಾಗಿಟ್ಟುಕೊಳ್ಳಿ.
A-Be Active. Enjoy the work you do. Keep yourself busy.
ಸದಾ ಚಟುವಟಿಕೆಯಿಂದಿರಿ. ನೀವು ಮಾಡುವ ಕೆಲಸಗಳಿಂದ ಸಂತೋಷಪಡಿ.
L– Learn skills, improve your knowledge to manage your problems. Prepare & manage life events.
ನಿಮ್ಮ ಜ್ಞಾನ ಕೌಶಲಗಳನ್ನು ಉತ್ತಮಪಡಿಸಿಕೊಳ್ಳಿ. ಜೀವನ ಘಟನೆಗಳಿಗೆ ಪೂರೈಸಿದ್ಧತೆ ಮಾಡಿ, ಸರಿಯಾಗಿ ನಿಭಾಯಿಸಿ.
T– Take things as they come. Tackle one problem at a time. Have relaistic targets.
ಪಾಲಿಗೆ ಬಂದದ್ದನ್ನು ಸ್ವೀಕರಿಸಿ. ಹಲವು ಸಮಸ್ಯೆಗಳಿದ್ದಾಗ, ಒಂದೊಂದು ಸಮಸ್ಯೆಯನ್ನು ಇತರರ ನೆರವಿನೊಂದಿಗೆ ನಿಭಾಯಿಸಿ. ಸಣ್ಣ ಸಾಧಿಸಬಹುದಾದ ಗುರಿಗಳಿರಲಿ.
H– Healthy life style Regular Food – Exercise valking) Good living Environment, Treatment for health problems from family doctor.
ಸೊಪ್ಪು, ತರಕಾರಿ, ಹಾಲು, ಹಣ್ಣು ಇರುವ ಆಹಾರವನ್ನು ಹಿತಮಿತವಾಗಿ, ವೇಳೆ ವೇಳೆಗೆ ಸರಿಯಾಗಿ ಸೇವಿಸಿ. ಸ್ವಚ್ಛತೆ ಬಗ್ಗೆ ಗಮನ ಕೊಡಿ. ನಿತ್ಯ ವ್ಯಾಯಾಮ, ನಡಿಗೆ ಮಾಡಿ. ಒಬ್ಬ ವೈದ್ಯರ ಮಾರ್ಗದರ್ಶನದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಿ.
ಮಾಹಿತಿ ಕೃಪೆ:
ಡಾ| ಸಿ. ಆರ್. ಚಂದ್ರಶೇಖರ್
ಮನೋವೈದ್ಯ, ಪ್ರಾಧ್ಯಾಪಕರು ನಿಮ್ಹಾನ್ಸ್, ಬೆಂಗಳೂರು