Morarji Desai Residential Schools Admission 2026–27:ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ

Morarji Desai Residential Schools Admission 2026–27:ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ

Morarji Desai Residential Schools Admission 2026–27: 2026–27ನೇ ಸಾಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ. ಅರ್ಹತೆ, ಅರ್ಜಿ ವಿಧಾನ ಮತ್ತು ಕೊನೆಯ ದಿನಾಂಕದ ಸಂಪೂರ್ಣ ಮಾಹಿತಿ ಇಲ್ಲಿ ಪಡೆಯಿರಿ.


2026–27ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಪ್ರವೇಶ

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳು ಹಾಗೂ ಮುಸ್ಲಿಂ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

1. ವಿದ್ಯಾರ್ಥಿಯ SATS ಐಡಿ ಸಂಖ್ಯೆ

2. ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣಪತ್ರದ RD ಸಂಖ್ಯೆ

3. ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ

4. ವಿಶೇಷ ವರ್ಗಗಳ ಮೀಸಲಾತಿ ಬಯಸುವ ವಿದ್ಯಾರ್ಥಿಗಳು ಸಂಬಂಧಿತ ಪ್ರಮಾಣಪತ್ರಗಳು


ಅರ್ಜಿ ಸಲ್ಲಿಸುವ ವೆಬ್‌ಸೈಟ್: https://sevasindhuservices.karnataka.gov.in

ವಿವರವಾದ ಪ್ರವೇಶ ಅಧಿಸೂಚನೆ ಹಾಗೂ ಶಾಲೆಗಳ ಪಟ್ಟಿಗಾಗಿ: 👉 https://dom.karnataka.gov.in

ಇನ್ನೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸಂಬಂಧಿತ ಅಲ್ಪಸಂಖ್ಯಾತರ ವಸತಿ ಶಾಲೆಗಳು, ಹಾಗೂ ಸಮೀಪದ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು.
ಅಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸುವ ವ್ಯವಸ್ಥೆ ಲಭ್ಯವಿರುತ್ತದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಮತ್ತು ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಸೇರಿದಂತೆ ಒಟ್ಟು 173 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ 2026-27ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ.

2026-27ನೇ ಸಾಲಿನಲ್ಲಿ ಪ್ರವೇಶ ಪ್ರಕ್ರಿಯೆಗಾಗಿ ಅರ್ಹವಿರುವ ವಿದ್ಯಾರ್ಥಿಗಳು ಆನ್‌ಲೈನಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅಲ್ಪಸಂಖ್ಯಾತರ ನಿರ್ದೇಶನಾಲಯದ ವಿವಿಧ ಮಾದರಿಯ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಎಲ್ಲಾ ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಇವರು ತಮ್ಮ ಅಧೀನದ ವಿವಿಧ ಮಾದರಿಯ ವಸತಿ ಶಾಲೆಗಳಲ್ಲಿ ಶೇ.100 ರಷ್ಟು ದಾಖಲಾತಿಯನ್ನು ಹೊಂದಲು ಜಿಲ್ಲಾ ಹಂತದಲ್ಲಿಯೇ ಪ್ರತ್ಯೇಕ ಪ್ರವೇಶಾತಿ ಅಧಿಸೂಚನೆ ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳುವುದು. ಸದರಿ ಅಧಿಸೂಚನೆಯ ಪತ್ರಿಕಾ ಪ್ರಕಟಣೆ ಹೊರಡಿಸಿ, ವ್ಯಾಪಕ ಪ್ರಚಾರ ಕೈಗೊಳ್ಳುವುದು. ನಿಯಾಮಾನುಸಾರ ಮೆರಿಟ್ ಹಾಗೂ ರೋಸ್ಟರ್ ಪದ್ಧತಿ ಪ್ರಕಾರ 6ನೇ ತರಗತಿಗೆ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ತಮ್ಮ ಅಧೀನದ ಅಧಿಕಾರಿ/ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡಿ ದಾಖಲಾತಿ ಪ್ರಕ್ರಿಯೆಯನ್ನು ಯಶಸ್ವಿಗೊಳಿಸುವುದು.

ಮುಂದುವರೆದು, ಅರ್ಜಿ ಸಲ್ಲಿಸುವ ವಿಧಾನ, ಪ್ರವೇಶ ಪರೀಕ್ಷೆಯ ಪ್ರಕ್ರಿಯೆ, ಮೀಸಲಾತಿ ವಿವರ, ವೇಳಾಪಟ್ಟಿ ಮತ್ತು ದಾಖಲಾತಿಗೆ ಸಂಬಂಧಿಸಿದ ಇತರೆ ವಿವರಗಳ ಸಂಪೂರ್ಣ ಮಾರ್ಗಸೂಚಿಗಳನ್ನು ಸದರಿ ಅಧಿಸೂಚನೆಯೊಂದಿಗೆ ಲಗತ್ತಿಸಲಾಗಿದ್ದು ಅದರಂತೆ ನಿಯಮಾನುಸಾರ ಸೂಕ್ತ ಕ್ರಮ ಕೈಗೊಂಡು ಶೇ.100 ರಷ್ಟು ದಾಖಲಾತಿಯನ್ನು ಸಾಧಿಸಲು ಸೂಚಿಸಿದೆ.

ಎಲ್ಲಾ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೇರವಾಗಿ ಅರ್ಜಿಗಳನ್ನು ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು, ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳು ಮತ್ತು ಜಿಲ್ಲಾ ಅಲ್ಪ ಸಂಖ್ಯಾತರ ಅಧಿಕಾರಿ ಕಛೇರಿಗಳಲ್ಲಿಯೂ ಕೂಡ ಉಚಿತವಾಗಿ ಸಲ್ಲಿಸಬಹುದಾಗಿರುತ್ತದೆ.

ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಪೋರ್ಟಲ್ ವಿಳಾಸ ಈ ಕೆಳಕಂಡಂತಿದೆ,

Website: https://sevasindhuservices.karnataka.gov.in

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05.01.2026.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.02.2026.

CLICK HERE TO DOWNLOAD NOTIFICATION

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!