NMMS Examination 2024-25 States Wise Result Released.

NMMS Examination 2024-25 States Wise Result Released.

 

NMMS Examination 2024-25:2024-25ನೇ ಸಾಲಿನ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿವೇತನ (National Means-cum- Merit Scholarship- NMMS) ಪರೀಕ್ಷೆ ಫಲಿತಾಂಶ ಶೀಘ್ರದಲ್ಲಿ ಪ್ರಕಟವಾಗಲಿದೆ.

2024-25ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿವೇತನ (National Means-cum-Merit Scholarship- NMMS) ಪರೀಕ್ಷೆಯನ್ನು ನವದೆಹಲಿ ರವರ ಮಾರ್ಗಸೂಚಿಯಂತೆ ನಡೆಸಲು Online ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು, ಅಚ್ಚುಕಟ್ಟಾಗಿ ಪರೀಕ್ಷೆ ನೆರವೇರಿ ಇದೀಗ ಶೀಘ್ರದಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಸದರಿ ಪರೀಕ್ಷೆಯನ್ನು 2024-25ನೇ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ (Local body schools) ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಮೂಲಕ ತೆಗೆದುಕೊಳ್ಳಲಾಯಿತು.

ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ (Local body schools) ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವುದು, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ಮಾಧ್ಯಮಿಕ ಶಾಲಾ ಹಂತದಲ್ಲಿ ಶಾಲೆಯಿಂದ ಹೊರಗುಳಿಯದಂತೆ ತಡೆಯುವುದು ಮತ್ತು ಅವರ ವಿದ್ಯಾಭ್ಯಾಸದ ಮುಂದುವರಿಕೆಗೆ ಪ್ರೇರೇಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಸದರಿ ಪರೀಕ್ಷೆಯನ್ನು ಕನ್ನಡ, ಇಂಗ್ಲೀಷ್, ಉರ್ದು, ಮರಾಠಿ ಮತ್ತು ತೆಲುಗು ಮಾಧ್ಯಮಗಳಲ್ಲಿ ನಡೆಸುತ್ತಿದ್ದು, ಈ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ತಾಲ್ಲೂಕು ಕೇಂದ್ರಗಳಲ್ಲಿ ನಡೆಸಲಾಗುತ್ತದೆ.

ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ (Local body schools) ಶಾಲೆಗಳಲ್ಲಿ 2024-25ನೇ ಸಾಲಿನಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ NMMS ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಈ ಪರೀಕ್ಷೆಯು ಎರಡು ಪ್ರಶ್ನೆಪತ್ರಿಕೆಗಳನ್ನು ಒಳಗೊಂಡಿದ್ದು, ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಎರಡೂ ಪತ್ರಿಕೆಗಳಲ್ಲಿ ಸರಾಸರಿ ಕನಿಷ್ಠ ಶೇ.40 ರಷ್ಟು ಅಂಕಗಳನ್ನು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಎರಡೂ ಪತ್ರಿಕೆಗಳಲ್ಲಿ ಸರಾಸರಿ ಕನಿಷ್ಠ ಶೇ.32 ರಷ್ಟು ಅಂಕಗಳನ್ನು ಪಡೆಯಬೇಕು.

ಪ್ರತಿ ಜಿಲ್ಲೆಯಲ್ಲಿ ಪರೀಕ್ಷೆ ಬರೆದ ಒಟ್ಟು ವಿದ್ಯಾರ್ಥಿಗಳಲ್ಲಿ ವಿವಿಧ ಜಾತಿ/ವರ್ಗಗಳ ವಿದ್ಯಾರ್ಥಿಗಳನ್ನು ಚಾಲ್ತಿಯಲ್ಲಿರುವ ಮೀಸಲಾತಿ ಹಾಗೂ ಅರ್ಹತಾ ನಿಯಮಗಳ ಅನುಸಾರ Rank ಆಧರಿಸಿ DSERT ವತಿಯಿಂದ ಆಯ್ಕೆ ಮಾಡಲಾಗುವುದು.

 

CLICK HERE TO CHECK RESULT

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!