NPS TO OPS: NPS ರದ್ದುಪಡಿಸಿ ಹಳೇ ಪಿಂಚಣಿ (OPS) ಯೋಜನೆ ಮರು ಜಾರಿಗೊಳಿಸುವ ಕುರಿತು ಸದನದಲ್ಲಿ ಕೇಳಿದ ಪ್ರಶ್ನೆಗೆ ಉತ್ತರ-2025
NPS TO OPS:NPS ರದ್ದುಪಡಿಸಿ ಹಳೇ ಪಿಂಚಣಿ (OPS) ಯೋಜನೆ ಮರು ಜಾರಿಗೊಳಿಸುವ ಬಗ್ಗೆ ಸದನದಲ್ಲಿ ಕೇಳಿದ ಪ್ರಶ್ನೆಗೆ ಉತ್ತರಗಳನ್ನು ನೀಡಲಾಯಿತು. ಪ್ರಶ್ನೆಗೆ ಉತ್ತರ ಈ ಕೆಳಗೆ ನೀಡಲಾಗಿದೆ.
ಪ್ರಶ್ನೆ: ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಒಟ್ಟು ಸಂಖ್ಯೆ ಎಷ್ಟು ಅದರಲ್ಲಿ ಹಳೇ ಪಿಂಚಣಿ (OPS) & ಹೊಸ ಪಿಂಚಣಿ (NPS) ಯೋಜನೆಗೊಳಪಡುವ ನೌಕರರ ಸಂಖ್ಯೆಗಳೆಷ್ಟು; (ಇಲಾಖಾವಾರು ವಿವರ ಒದಗಿಸುವುದು.)
ಉತ್ತರ:
▪️ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಒಟ್ಟು ಸಂಖ್ಯೆ-5,01,034. (ದಿ:04.08.20250 HRMS ನಲ್ಲಿ ಇದ್ದಂತೆ) ಹಳೆ ಪಿಂಚಣಿ ಯೋಜನೆಗೆ ಒಳಪಡುವ ನೌಕರರ ಸಂಖ್ಯೆ-2,14,434 (ಇಲಾಖಾವಾರು ಮಾಹಿತಿಯನ್ನು ಅನುಬಂಧ-1ರಲ್ಲಿರಿಸಿದೆ)
▪️ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ನೌಕರರ ಸಂಖ್ಯೆ-2,86,600 (ಇಲಾಖಾವಾರು ಮಾಹಿತಿಯನ್ನು ಅನುಬಂಧ-2ರಲ್ಲಿರಿಸಿದೆ)
ಪ್ರಶ್ನೆ: 01.04.2006 ರಿಂದ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ಮತ್ತು ಅನುದಾನಿತ & ನಿಗಮ ಮಂಡಳಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸುವ ಕುರಿತಂತೆ ಸರ್ಕಾರವು ರಚನೆ ಮಾಡಿರುವ ಸಮಿತಿಯು ಈವರೆಗೆ ಎಷ್ಟು ಸಭೆಗಳನ್ನು ನಡೆಸಿದ; ಸದರಿ ಸಮಿತಿಯು ಯಾವ ಯಾವ | ರಾಜ್ಯಗಳಿಗೆ ಭೇಟಿ ನೀಡಿದೆ; ಸದರಿ ಸಮಿತಿಯು ಸಭೆಗಳನ್ನು ನಡೆಸಿ ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ನೀಡಿದೆಯೇ?;
▪️ಸದರಿ ಸಮಿತಿಗೆ ವರದಿಯನ್ನು ನೀಡಲು ಸರ್ಕಾರ ಕಾಲಮಿತಿಯನ್ನು ನಿಗದಿಪಡಿಸಿದೆಯೇ;?
▪️NPS ರದ್ದುಪಡಿಸಿ ಹಳೇ ಪಿಂಚಣಿ (OPS) ಯೋಜನೆ ಮರು ಜಾರಿಗೊಳಿಸುವ ಕುರಿತು ಸರ್ಕಾರದ ನಿಲುವೇನು?
ಉತ್ತರ : ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಸೂಕ್ತ ಬದಲಾವಣೆ / ಮಾರ್ಪಾಡು ಮಾಡಲು ಸಮಗ್ರವಾಗಿ ಪರಿಸೀಲಿಸಲು ಈಗಾಗಲೇ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ: 11.12.2018ರ ಮತ್ತು ದಿನಾಂಕ: 01.03.2023 ರ ಸರ್ಕಾರಿ ಆದೇಶಗಳನ್ವಯ ರಚಿಸಲಾಗಿರುವ ಸಮಿತಿಯನ್ನು ದಿನಾಂಕ: 16.08.2024 ರಲ್ಲಿ ಪುನರ್ ರಚಿಸಿ ಆದೇಶಿಸಲಾಗಿರುತ್ತದೆ.
ಸದರಿ ಸಮಿತಿಯು ಈಗಾಗಲೇ ಎರಡು ಸಭೆಗಳನ್ನು ನಡೆಸಿದೆ.
ರಾಷ್ಟ್ರೀಯ ಪಿಂಚಣಿ ಯೋಜನೆಗೆ ಬದಲಾವಣೆ/ಮಾರ್ಪಾಡು ಮಾಡಿರುವ ರಾಜ್ಯಗಳಾದ ಆಂಧ್ರ ಪ್ರದೇಶ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಿಗೆ ಅಧಿಕಾರಿಗಳನ್ನೊಳಗೊಂಡ ತಂಡಗಳುಅಧ್ಯಯನ ನಡೆಸಿ ವರದಿಗಳನ್ನು ಸಮಿತಿಗೆ ಸಲ್ಲಿಸಲಾಗಿದೆ. ಸಮಿತಿಯ ವರದಿಯನ್ನು ನಿರೀಕ್ಷಿಸಲಾಗಿದೆ.