Pariksha Pe Charcha 2025–26 ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಅನುಷ್ಠಾನಕ್ಕೆ ಸಂಪೂರ್ಣ ಮಾಹಿತಿ

Pariksha Pe Charcha 2025–26 ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಅನುಷ್ಠಾನಕ್ಕೆ ಸಂಪೂರ್ಣ ಮಾಹಿತಿ

Pariksha Pe Charcha 2025–26 ಮೇಲಿನ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವಾಲಯ ಮತ್ತು ಸಾಕ್ಷರತಾ ಇಲಾಖೆ, ನವದೆಹಲಿ “ಪರೀಕ್ಷಾ ಪೆ ಚರ್ಚಾ“ದ 2026 9ನೇ ಆವೃತ್ತಿಯನ್ನು ನವದೆಹಲಿಯ ಭಾರತ್ ಮಂಟಪದಲ್ಲಿ (ಟೌನ್-ಹಾಲ್ ರೂಪದಲ್ಲಿ) ಆಯೋಜಿಸುವ ಸಂಬಂಧ ಈ ಕಾರ್ಯಕ್ರಮದಲ್ಲಿ ಮಾನ್ಯ ಪ್ರಧಾನ ಮಂತ್ರಿಯವರು ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಪೋಷಕರೊಂದಿಗೆ ವಿದ್ಯಾರ್ಥಿಗಳಲ್ಲಿರುವ “ಪರೀಕ್ಷೆಯ ಒತ್ತಡವನ್ನು ಕಡಿಮೆ ಮಾಡುವ ಕುರಿತು ನೇರವಾಗಿ ಸಂವಹನ ನಡೆಸುವರು.

“ಪರೀಕ್ಷಾ ಪೆ ಚರ್ಚಾ (Pariksha Pe Charcha)”ದ 2025 8ನೇ ಆವೃತ್ತಿಯಲ್ಲಿ 5 ಕೋಟಿ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ದೇಶಾದ್ಯಂತ ಭಾಗವಹಿಸಿರುತ್ತಾರೆ. ದಿನಾಂಕ:01.12.2025 ರಿಂದ 11.01.2026ರ ವರೆಗೆ 6 ರಿಂದ 12ನೇ ತರಗತಿಯಲ್ಲಿರುವ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಭಾಗವಹಿಸಲು ಸೂಚಿಸಿದೆ.

ಉದ್ದೇಶಗಳು:-

▪️ಮಕ್ಕಳಲ್ಲಿರುವ ಪರೀಕ್ಷಾ ಒತ್ತಡ ಕಡಿಮೆ ಮಾಡುವುದು.

▪️ನಮ್ಮ ಭವಿಷ್ಯದ ರಾಷ್ಟ್ರ ನಿರ್ಮಾತೃಗಳಿಗೆ ಕಲಿಕೆಯನ್ನು ಹೆಚ್ಚು ಆಸಕ್ತಿ ಹಾಗೂ ಸಂತೋಷದಾಯಕವಾಗಿಸುವುದು.

▪️ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರೊಂದಿಗೆ ನೇರ ಸಂವಹನ ನಡೆಸಿ, ಪರೀಕ್ಷಾ ಪದ್ಧತಿ ಪಡೆದು ಪರೀಕ್ಷಾ ಪದ್ಧತಿಯನ್ನು ಕುರಿತು ಅಮೂಲ್ಯವಾದ ಸಲಹೆಗಳನ್ನು ಉತ್ತಮಪಡಿಸುವುದು.

ಅರ್ಹತೆ:-

ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಲ್ಲಿ 6 ರಿಂದ 12ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ಹಾಗೂ ಪೋಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಪ್ರಸಕ್ತ ಸಾಲಿನ ಸ್ಪರ್ಧೆಯು ಬಹು ಆಯ್ಕೆಯ ಪ್ರಶ್ನೆ (MCQ)ಗಳಾಗಿವೆ. ಭಾಗವಹಿಸುವವರೆಲ್ಲರಿಗೂ ಪ್ರಮಾಣ ಪತ್ರ ದೊರೆಯುವುದು. ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಕೇಳುವ ಪ್ರಶ್ನೆಗಳನ್ನು DSERT ರವರು Shortlist ಮಾಡಿ ಆಯ್ಕೆಯಾದ ಪ್ರಶ್ನೆಗಳಿಗೆ ಮಾಧ್ಯಮಗಳಲ್ಲಿ ಏರ್ಪಡಿಸುವ “ಪರೀಕ್ಷಾ ಪ ಚರ್ಚಾ(Pariksha Pe Charcha)” 2026ರಲ್ಲಿ ಕೇಳಲು ಅವಕಾಶ ಮಾಡಲಾಗುವುದು.

ಭಾಗವಹಿಸುವ ವಿಧಾನ:-

ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ಹಾಗೂ ಪೋಷಕರು https://innovateindia1.mygov.in/2026 ವೆಬ್ ಸೈಟ್ ಗೆ ಭೇಟಿ ನೀಡಿ ‘ಪರೀಕ್ಷಾ ಪೆ ಚರ್ಚಾ” 2026 ಪರೀಕ್ಷಾ ಪೆ ಚರ್ಚಾ ಈ ಕಾರ್ಯಕ್ರಮದಲ್ಲಿನ ನಿಯಮಗಳನ್ನು ಓದಿಕೊಂಡು, ಭಾಗವಹಿಸಿ ಎಂಬ ಬಟನ್ ಕ್ಲಿಕ್ ಮಾಡುವುದು ಹಾಗೂ ತಮ್ಮ ಸ್ವವಿವರಗಳನ್ನು ನೀಡಿ, ಆನ್‌ಲೈನ್ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಪುಸಕ್ತ ಸಾಲಿನ ಸ್ಪರ್ಧೆಯಲ್ಲಿ ಬಹು ಆಯ್ಕೆಯ ಪ್ರಶ್ನೆಗಳು ಹಾಗೂ ಬರವಣೆಗೆಗೆ ಅವಕಾಶವಿದೆ ಭಾಗವಹಿಸುವವರೆಲ್ಲರಿಗೂ NCERT ನಿರ್ದೇಶಕರು ಸಹಿ ಮಾಡಿದ ಪ್ರಮಾಣ ಪತ್ರ ದೊರೆಯುವುದು. ವಿಜೇತರಾದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರೊಂದಿಗೆ ಆನ್ ಲೈನ್ ಮೂಲಕ ಗೌರವಾನ್ವಿತ ಪ್ರಧಾನ ಮಂತ್ರಿಯವರು ನೇರವಾಗಿ ಸಂವಹನ ನಡೆಸುವರು.

11ನೇ ಜನವರಿ, 2026ರೊಳಗೆ ಈ ನಿಟ್ಟಿನಲ್ಲಿ ಮಾಧ್ಯಮ(Media/Website) ಯೋಜನೆಯೊಂದಿಗೆ ಟಿಪ್ಪಣಿಯನ್ನು Upload ಮಾಡಿದ್ದನ್ನು Website ನಲ್ಲಿ ಪ್ರದರ್ಶಿಸಲಾಗುತ್ತದೆ.

ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು (ಆಡಳಿತ ಹಾಗೂ ಅಭಿವೃದ್ಧಿ)ರವರು ಕ್ಷೇತ್ರಶಿಕ್ಷಣಾಧಿಕಾರಿಗಳ ಮೂಲಕ ಶಾಲಾ ಮುಖ್ಯ ಶಿಕ್ಷಕರಿಗೆ ಮಾಹಿತಿ ನೀಡಿ, ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಪೋಷಕರು ದಿನಾಂಕ:11.01.2026 ರೊಳಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಹಾಗೂ ಬ್ಯಾನರ್‌ಗಳನ್ನು ವೆಬ್ ಸೈಟ್‌ನಲ್ಲಿ ಅಳವಡಿಸಿಕೊಳ್ಳಲು ಕ್ರಮ ಕೈಗೊಳ್ಳಲು ಸೂಚಿಸಿದೆ. ಪ್ರಸ್ತುತ ಜಿಲ್ಲಾ ಸಂಪನ್ಮೂಲ ಅಧಿಕಾರಿಗಳು, ಕ್ಷೇತ್ರಶಿಕ್ಷಣಾಧಿಕಾರಿಗಳ, ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳು, ಮತ್ತು ಕ್ಲಸ್ಟರ್‌ ಸಂಪನ್ಮೂಲ ಅಧಿಕಾರಿಗಳನ್ನು ಪ್ರತಿಯೊಂದು ಹಂತದಲ್ಲಿ ನೋಡಲ್ ಅಧಿಕಾರಿಗಳಾಗಿ ನೇಮಿಸಿ ಜಿಲ್ಲೆಗೆ ಒದಗಿಸುವ ಸಂಖ್ಯೆಯನ್ನು ಪೂರ್ಣ ಪ್ರಮಾಣದಲ್ಲಿ ಕಡ್ಡಾಯವಾಗಿ ನೋಂದಣಿಯಾಗುವಂತೆ ಕ್ರಮವಹಿಸಲು ಸೂಚಿಸಿದೆ. ಇದರೊಂದಿಗೆ MoE ರವರ ಪತ್ರವನ್ನು ಹಾಗೂ ಬ್ಯಾನರ್‌ಗಳನ್ನು ಲಗತ್ತಿಸಿದ್ದು ಅದರಂತೆ ಕ್ರಮವಹಿಸಲು ಸೂಚಿಸಿದೆ.

Pariksha

ಭಾಗವಹಿಸಲುCLICK HERE

ಅಧಿಕೃತ ವೆಬ್ಸೈಟ್CLICK HERE

ಅಧಿಕೃತ ಸುತ್ತೋಲೆCLICK HERE 

CLICK HERE TO WATCH VIDEO

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!