Pension proposal: ಪಿಂಚಣಿ ಪ್ರಸ್ತಾವನೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಮಹತ್ವದ ಆದೇಶ
Pension proposal: ಪಿಂಚಣಿ ಪ್ರಸ್ತಾವನೆಗಳನ್ನು ಸಕಾಲದಲ್ಲಿ ಇತ್ಯರ್ಥ ಪಡಿಸುವ ಕುರಿತು ಮಹತ್ವದ ಜ್ಞಾಪನ ಹೊರಡಿಸಲಾಗಿದೆ.
ವಿಷಯಕ್ಕೆ ಸಂಬಂಧಿಸಿದಂತೆ, ಪಿಂಚಣಿ ಪ್ರಸ್ತಾವನೆಗಳನ್ನು ಮಹಾಲೇಖಪಾಲರಿಗೆ ಸಲ್ಲಿಸುವ ಕುರಿತು ದಿನಾಂಕ: 16.04.2024ರ ಮಹಾಲೇಖಪಾಲರ ಪತ್ರದಲ್ಲಿ ಸರ್ಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದುವ ಅಧಿಕಾರಿಗಳ ಮುಂಚಿತ ಮೂರು ತಿಂಗಳಲ್ಲಿ ಪಿಂಚಣಿ ಪ್ರಸ್ತಾವನೆಯನ್ನು ಮಹಾಲೇಖಪಾಲರಿಗೆ ಸಲ್ಲಿಸಬೇಕಾಗಿರುತ್ತದೆ.
ಅದರಂತೆ ಸರ್ಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದಿದ್ದರೂ, ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳ ಪಿಂಚಣಿ ಪ್ರಸ್ತಾವನೆಗಳು ಮಹಾಲೇಖಪಾಲರ ಕಛೇರಿಗೆ ಸ್ವೀಕೃತವಾಗಿರುವುದಿಲ್ಲವೆಂದು ತಿಳಿಸಿ, ಸಂಬಂಧಪಟ್ಟ ನಿಯಂತ್ರಣಾಧಿಕಾರಿಗಳಿಗೆ ಬಾಕಿ ಪ್ರಕರಣಗಳ ಇತ್ಯರ್ಥ ಕುರಿತು ನಿರ್ದೇಶನ ನೀಡಲು ಸೂಚಿಸಿರುತ್ತಾರೆ.
ಅದರಂತೆ, ಮಹಾಲೇಖಪಾಲರ ಪತ್ರದ ಸೂಚನೆಯಂತೆ ಕೂಡಲೇ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸಲು ಸೂಚಿಸಿ, ನಿಯಂತ್ರಣಾಧಿಕಾರಿಗಳ ವ್ಯಾಪ್ತಿಯಲ್ಲಿನ ಬಾಕಿ ಪಿಂಚಣಿ ಪ್ರಕರಣಗಳ ಇತ್ಯರ್ಥ ಕುರಿತು ತೆಗೆದುಕೊಂಡ ಕ್ರಮದ ವರದಿಯನ್ನು ತಪ್ಪದೇ ಸಲ್ಲಿಸಲು ಸೂಚಿಸಲಾಗಿರುತ್ತದೆ.
ಮುಂದುವರೆದು, ತಮ್ಮ ವ್ಯಾಪ್ತಿಯಲ್ಲಿನ ನಿವೃತ್ರ/ ನಿವೃತ್ತಿ ಹೊಂದಲಿರುವ ಅಧಿಕಾರಿಗಳ ಪಿಂಚಣಿ ಪ್ರಸ್ತಾವನೆಯನ್ನು/ ಅಗತ್ಯ ಮಾಹಿತಿಯನ್ನು ಕನಾಸೇ ನಿಯಮ 327(1)ರನ್ನಯ ನಿಗಧಿತ ಅವಧಿಗೆ ಮಹಾಲೇಖಪಾಲರಿಗೆ ಸಲ್ಲಿಸಲು ನಿಯಮಾನುಸಾರ ಕ್ರಮವಹಿಸುವುದು ಹಾಗೂ ಸಂಬಂಧಪಟ್ಟ ನಿಯಂತ್ರಣಾಧಿಕಾರಿಗಳು ಪಿಂಚಿಣಿ ಪ್ರಕರಣಗಳ ಕುರಿತಂತೆ ತ್ರೈಮಾಸಿಕವಾಗಿ ಪರಿಶೀಲಿಸಿ ಹಾಗೂ ಪಿಂಚಣಿ ಪ್ರಕರಣಗಳನ್ನು ಇತ್ಯರ್ಥಪಡಿಸುವಲ್ಲಿ ಅನಗತ್ಯ ವಿಳಂಬಕ್ಕೆ ಅವಕಾಶ ನೀಡದೇ ಅಗತ್ಯ ಕ್ರಮವಹಿಸಲು ಸೂಚಿಸಿದೆ.

ಇದನ್ನೂ ನೋಡಿ……ಡಿಸೆಂಬರೊಳಗೆ ಎಸ್ಸೆಸ್ಸೆಲ್ಸಿ ಪಠ್ಯ ಬೋಧನೆ ಮುಗಿಸಿ