Permanent Power Connection in Karnataka: ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಹೊಸ ನಿಯಮ| ಸ್ವಾಧೀನಾನುಭವ ಪ್ರಮಾಣ ಪತ್ರದಿಂದ ಒಂದು ಬಾರಿಯ ವಿನಾಯಿತಿ-2026

Permanent Power Connection in Karnataka: ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಹೊಸ ನಿಯಮ| ಸ್ವಾಧೀನಾನುಭವ ಪ್ರಮಾಣ ಪತ್ರದಿಂದ ಒಂದು ಬಾರಿಯ ವಿನಾಯಿತಿ

Permanent Power Connection in Karnataka: ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಸ್ವಾಧೀನಾನುಭವ ಪ್ರಮಾಣ ಪತ್ರದಿಂದ ಒಂದು ಬಾರಿಯ ವಿನಾಯಿತಿ ನೀಡಿರುವ ರಾಜ್ಯ ಸರ್ಕಾರದ ಹೊಸ ಆದೇಶದ ಸಂಪೂರ್ಣ ಮಾಹಿತಿ. ಯಾರಿಗೆ ಅನ್ವಯ, ಅರ್ಹತೆ, 15 ದಿನಗಳ ಅರ್ಜಿ ಅವಕಾಶ ಹಾಗೂ ಪ್ರಮುಖ ಮಾರ್ಗಸೂಚಿಗಳ ವಿವರ ಇಲ್ಲಿದೆ.

ರಾಜ್ಯಾದ್ಯಂತ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವ ಅಥವಾ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವ ಪ್ರಕರಣಗಳಿಗೆ ಹಾಗೂ ಯಾವುದೇ ವಿದ್ಯುತ್ ಸಂಪರ್ಕ ಪಡೆಯದೇ ಕಟ್ಟಡ ಪೂರ್ಣಗೊಂಡಿರುವ ಪ್ರಕರಣಗಳಿಗೆ ಮಾತ್ರ ಅನ್ವಯಿಸುವಂತೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ, ವಿನಾಯಿತಿ ನೀಡುವ ಕುರಿತು.

ಪ್ರಸ್ತಾವನೆ:-

ಮೇಲೆ ಓದಲಾದ ಕ್ರಮ ಸಂಖ್ಯೆ (1) ರಿಂದ (4)ರ ಆದೇಶಗಳಲ್ಲಿ ಕ್ರಮವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿ, ರಾಜ್ಯದಲ್ಲಿನ ಮಹಾನಗರ ಪಾಲಿಕೆಗಳ ವ್ಯಾಪ್ತಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಮತ್ತು ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ 2400 ಚದರಡಿವೆರೆಗಿನ (+ 20% ಹೆಚ್ಚುವರಿ ವ್ಯತ್ಯಾಸದ ಮಿತಿಯೊಂದಿಗೆ) ಅಳತೆಯ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ಜಿ+3 ಅಂತಸ್ತಿನ ವಸತಿ ಕಟ್ಟಡಗಳು ಅಥವಾ ಸ್ಕಿಲ್ಸ್ ಪಾರ್ಕಿಂಗ್ + 4 ಮಹಡಿಗಳನ್ನು ಹೊಂದಿರುವ ವಸತಿ ಕಟ್ಟಡಗಳು, ಪೂರ್ಣಗೊಂಡು ವಿದ್ಯುತ್ ಸಂಪರ್ಕಕ್ಕಾಗಿ ದಿನಾಂಕ: 31.5.2026ರ ಒಳಗಾಗಿ ಅರ್ಜಿ ಸಲ್ಲಿಸಿದ್ದಲ್ಲಿ ವಿದ್ಯತ್ ಸಂಪರ್ಕ ಪಡೆಯಲು ಒಂದು ಬಾರಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ, ವಿನಾಯಿತಿ ನೀಡಿ ನಗರಾಭಿವೃದ್ಧಿ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ಇಲಾಖೆಗಳು ಆದೇಶ ಹೊರಡಿಸಿರುತ್ತವೆ.

ಮೇಲೆ ಓದಲಾದ ಕ್ರಮ ಸಂಖ್ಯೆ (5) ರಲ್ಲಿ ದಿನಾಂಕ: 20.6.2026 ರಂದು ನಡೆದ ಸಚಿವ ಸಂಪುಟದ ಸಭೆಯ ಪ್ರಕರಣ ಸಂಖ್ಯೆ: ಸಸಂಶಾ(ಸಿ):67/2026: 68/2026 ರಲ್ಲಿ “ದಿನಾಂಕ: 03ನೇ ಜೂನ್, 2026 ರಂದು ಸಂಜೆ 6:00 ಗಂಟೆಗೆ ನಡೆದ ಸಚಿವ ಸಂಪುಟದ ಅನೌಪಚಾರಿಕ ಸಭೆಯ (ವಿಷಯ ಸಂಖ್ಯೆ: ಸಿ.310/2026 ರಲ್ಲಿನ ಕ್ರ.ಸಂ.4ರ ನಿರ್ಣಯವನ್ನು ಮಾನ್ಯ ಸಚಿವ ಸಂಪುಟವು ವಿಸ್ತ್ರತವಾಗಿ ಚರ್ಚಿಸಿ, ಸಾರ್ವಜನಿಕ ಹಿತದೃಷ್ಟಿಯಿಂದ ಈ ಕೆಳಕಂಡ ಮಾರ್ಪಾಡಿನೊಂದಿಗೆ ಮೇಲಿನ ನಿರ್ಣಯಗಳನ್ನು ಸ್ಥಿರಿಕರಿಸಿರುತ್ತದೆ.

“2400 ಚದರ ಅಡಿಗಳವರೆಗೆ (+20% ಹೆಚ್ಚುವರಿ ವ್ಯತ್ಯಾಸದ ಮಿತಿಯೊಂದಿಗೆ) ಅಳತೆಯ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ಜಿ+3 ಅಂತಸ್ತಿನ ವಸತಿ ಕಟ್ಟಡಗಳು ಅಥವಾ ಸ್ಟಿಲ್ಸ್ ಪಾರ್ಕಿಂಗ್ + 4 ಮಹಡಿಗಳನ್ನು ಹೊಂದಿರುವ ವಸತಿ ಕಟ್ಟಡಗಳು, ಪೂರ್ಣಗೊಂಡು ವಿದ್ಯುತ್ ಸಂಪರ್ಕಕ್ಕಾಗಿ ದಿನಾಂಕ: 31.5.2026ರ ಒಳಗಾಗಿ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವ ಅಥವಾ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವ ಪ್ರಕರಣಗಳಿಗೆ ಹಾಗೂ ಯಾವುದೇ ವಿದ್ಯುತ್ ಸಂಪರ್ಕ ಪಡೆಯದೆ ಕಟ್ಟಡ ಪೂರ್ಣಗೊಂಡಿರುವ ಪ್ರಕರಣಗಳಿಗೆ ಮಾತ್ರ ಅನ್ವಯಿಸುವಂತೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಆದೇಶ ಹೊರಡಿಸುವ ದಿನಾಂಕದಿಂದ 15 ದಿನಗಳವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿ ಒಂದು ಬಾರಿಯ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ ವಿನಾಯಿತಿ ನೀಡಲು ಸಚಿವ ಸಂಪುಟವು ನಿರ್ಧರಿಸಿತು.

ಮುಂದುವರೆದು, ಗ್ರಾಮೀಣ ಪ್ರದೇಶಗಳಲ್ಲಿ ರೈತರು ವಾಸಿಸಿರುವ ಮನೆ, ತೋಟದ ಮನೆ, ಕೃಷಿ ಉಪಕರಣಗಳನ್ನು ಇಡುವ ಮನೆ. ದನದ ಕೊಟ್ಟಿಗೆ, ರೇಷ್ಮೆ ಗೂಡಿನ ಮನೆ – ಇವುಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ, ವಿನಾಯಿತಿ ನೀಡಲು ಸಚಿವ ಸಂಪುಟವು ನಿರ್ಧರಿಸಿದೆ.

ವಿದ್ಯುತ್‌ ಸಂಪರ್ಕಕ್ಕಾಗಿ ಸ್ವಾಧೀನಾನುಭವ ಪ್ರಮಾಣಪತ್ರದಿಂದ ಒಂದು ಬಾರಿಗೆ ವಿನಾಯಿತಿ ನೀಡಿರುವುದರಿಂದ, ಇದರ ಅನುಷ್ಠಾನಕ್ಕಾಗಿ ಆದೇಶ ಹೊರಡಿಸುವಂತೆ ಇಂಧನ ಇಲಾಖೆಗೆ ಸಚಿವ ಸಂಪುಟವು ಸೂಚಿಸಿರುತ್ತದೆ.

ಮೇಲಿನ ಸಚಿವ ಸಂಪುಟದ ನಿರ್ಣಯದ ಹಿನ್ನೆಲೆಯಲ್ಲಿ, ಸರ್ಕಾರದ ಈ ಕೆಳಕಂಡ ಆದೇಶ.

ಸರ್ಕಾರದ ಆದೇಶ ಸಂಖ್ಯೆ ಎನರ್ಜಿ 556 ಇಇಬಿ 2026, ಬೆಂಗಳೂರು ದಿನಾಂಕ:22.6.2026

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿ, ರಾಜ್ಯದಲ್ಲಿನ ಮಹಾನಗರ ಪಾಲಿಕೆಗಳ ವ್ಯಾಪ್ತಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಮತ್ತು ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ “2400 ಚದರ ಅಡಿಗಳವರೆಗೆ (+20% ಹೆಚ್ಚುವರಿ ವ್ಯತ್ಯಾಸದ ಮಿತಿಯೊಂದಿಗೆ) ಅಳತೆಯ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ಜಿ+3 ಅಂತಸ್ತಿನ ವಸತಿ ಕಟ್ಟಡಗಳು ಅಥವಾ ಸ್ಕಿಲ್ಸ್ ಪಾರ್ಕಿಂಗ್ + 4 ಮಹಡಿಗಳನ್ನು ಹೊಂದಿರುವ ವಸತಿ ಕಟ್ಟಡಗಳು, ಪೂರ್ಣಗೊಂಡು ವಿದ್ಯುತ್ ಸಂಪರ್ಕಕ್ಕಾಗಿ ದಿನಾಂಕ: 31.5.2026ರ ಒಳಗಾಗಿ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವ ಅಥವಾ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವ ಪ್ರಕರಣಗಳಿಗೆ ಹಾಗೂ ಯಾವುದೇ ವಿದ್ಯುತ್ ಸಂಪರ್ಕ ಪಡೆಯದೆ ಕಟ್ಟಡ ಪೂರ್ಣಗೊಂಡಿರುವ ಪ್ರಕರಣಗಳಿಗೆ ಮಾತ್ರ ಅನ್ವಯಿಸುವಂತೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಆದೇಶ ಹೊರಡಿಸುವ ದಿನಾಂಕದಿಂದ 15 ದಿನಗಳವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿ, ಒಂದು ಬಾರಿಯ ಕ್ರಮವಾಗಿ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ ವಿನಾಯಿತಿ ನೀಡಿದೆ.

ಮುಂದುವರೆದು, ಗ್ರಾಮೀಣ ಪ್ರದೇಶಗಳಲ್ಲಿ ರೈತರು ವಾಸಿಸುವ ಮನೆ, ತೋಟದ ಮನೆ, ಕೃಷಿ ಉಪಕರಣಗಳನ್ನು ಇಡುವ ಮನೆ, ದನದ ಕೊಟ್ಟಿಗೆ, ರೇಷ್ಮೆ ಗೂಡಿನ ಮನೆ – ಇವುಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ, ವಿನಾಯಿತಿ ನೀಡಿ ಆದೇಶಿಸಿದೆ.

ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ಸಂಪರ್ಕ ನೀಡಲು ಅನುಸರಿಸಬೇಕಾದ ಸಾಮಾನ್ಯ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು.

Permanent Power Connection

CLICK HERE TO DOWNLOAD ORDER

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!