PM Rashtriya Bal Puraskar-2025: ಪಿಎಂ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸಲು ಜುಲೈ 31 ಕೊನೇ ದಿನ | ಡಿಸೆಂಬರ್ 26ರಂದು ಪ್ರಶಸ್ತಿ ಘೋಷಣೆ
PM Rashtriya Bal Puraskar-2025: ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ 5 ಮಕ್ಕಳ ಅಭಿವೃದ್ಧಿ ವರ್ಷದಿಂದ 18 ವರ್ಷದ ಮಕ್ಕಳಿಗೆ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಜುಲೈ 31 ಕೊನೇ ದಿನವಾಗಿದೆ.
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ PM (PMRBP) ಎಂಬುದು ಭಾರತದ ರಾಷ್ಟ್ರಪತಿಗಳು ವಾರ್ಷಿಕವಾಗಿ ನೀಡುವ ರಾಷ್ಟ್ರೀಯ ಪ್ರಶಸ್ತಿಯಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಮಕ್ಕಳ (5-18 ವರ್ಷ ವಯಸ್ಸಿನ) ಅಸಾಧಾರಣ ಸಾಧನೆಗಳನ್ನು ಗುರುತಿಸಲು ಇದನ್ನು ನೀಡಲಾಗುತ್ತದೆ. ಪ್ರಶಸ್ತಿ ಪುರಸ್ಕೃತರು ಗೌರವಾನ್ವಿತ ಪ್ರಧಾನ ಮಂತ್ರಿಯವರೊಂದಿಗೆ ಸಂವಹನ ನಡೆಸಲು ಮತು ತಮ್ಮ ಪರಿಧಿಯನ್ನು ವಿಸ್ತರಿಸಲು ಮತ್ತು ಭಾರತದ ಶ್ರೀಮಂತ ಪರಂಪರೆಯನ್ನು ಪ್ರಶಂಸಿಸಲು ದೆಹಲಿ ದರ್ಶನವನ್ನು ಕೈಗೊಳ್ಳಲು ಸಹ ಅವಕಾಶ ಪಡೆಯುತ್ತಾರೆ.
ಈ ಬಾಲ ಪುರಸ್ಕಾರ ಪ್ರಶಸ್ತಿಯನ್ನು ಏಕೆ ನೀಡಲಾಗುತ್ತದೆ?
ಅತಿ ಸಣ್ಣ ವಯಸ್ಸಿನಲ್ಲಿ ಶೌರ್ಯ, ಸಮಾಜ ಸೇವೆ, ಪರಿಸರ, ಕ್ರೀಡೆ, ಕಲೆ ಮತ್ತು ಸಂಸ್ಕೃತಿ, ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಾಧನೆ ಮಾಡಿದಂತಹ ಬಾಲಕ ಅಥವಾ ಬಾಲಕಿಯರನ್ನು ಗುರುತಿಸಿ ಈ ಬಾಲ ಪುರಸ್ಕಾರ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಈ ಬಾಲ ಪುರಸ್ಕಾರ ಪ್ರಶಸ್ತಿ ಪಡೆಯಲು ಯಾರು ಅರ್ಜಿ ಸಲ್ಲಿಸಬಹುದು?
ಈ ಪ್ರಶಸ್ತಿಗೆ 2025ರ ಜುಲೈ 31ಕ್ಕೆ 5 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದ ಒಳಗಿನ ಮಕ್ಕಳು ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಅರ್ಜಿ ಸಲ್ಲಿಸಲು ಧೈರ್ಯ ಸಾಹಸದಿಂದ ಇತರರನ್ನು ರಕ್ಷಿಸಿದವರು, ವಿವಿಧ ಕ್ಷೇತ್ರಗಳಲ್ಲಿ ಆವಿಷ್ಕಾರಗಳನ್ನು ಮಾಡಿದ ಹಾಗೂ ಉತ್ತಮ ಸಾಧನೆ ಮಾಡಿದಂತಹ ಮಕ್ಕಳು ಅರ್ಜಿ ಸಲ್ಲಿಸಬಹುದು.
ಯಾರು ನಾಮನಿರ್ದೇಶನ ಮಾಡಬಹುದು?
ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯು ಅಸಾಧಾರಣ ಸಾಧನೆ ಮಾಡಿದ ಮಕ್ಕಳನ್ನು 3. ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ನಾಮನಿರ್ದೇಶನ ಮಾಡಬಹುದು. ಮಕ್ಕಳು ಸ್ವಯಂ ನಾಮನಿರ್ದೇಶನದ 4 ಮೂಲಕವೂ ಅರ್ಜಿ ಸಲ್ಲಿಸಬಹುದು. ಕೇಂದ್ರ ಸಚಿವರು, ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು/ ರಾಜ್ಯಪಾಲರು/ಲೆಫ್ಟಿನೆಂಟ್ ಗವರ್ನರ್ಗಗಳು/ ಆಡಳಿತಗಾರರು, ಸಂಸತ್ ಸದಸ್ಯರು, ಕೇಂದ್ರ ಸರ್ಕಾರದ ಸಚಿವಾಲಯಗಳು/ಇಲಾಖೆಗಳು, ರಾಜ್ಯ ಸರ್ಕಾರಗಳು/ ಕೇಂದ್ರಾಡಳಿತ ಪ್ರದೇಶಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ/ ರಾಜ್ಯಗಳ/ ಕೇಂದ್ರಾಡಳಿತ ಪ್ರದೇಶಗಳ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು, ಕೇಂದ್ರೀಯ ವಿದ್ಯಾಲಯ ಸಂಘಟನ್/ನವೋದಯ ವಿದ್ಯಾಲಯ ಸಮಿತಿಯ ಅಡಿಯಲ್ಲಿ ಶಿಕ್ಷಣ ಸಂಸ್ಥೆಗಳು/ಶಾಲೆಗಳಿಂದ ಶಿಫಾರಸುಗಳನ್ನು ಆಹ್ವಾನಿಸಲಾಗುತ್ತದೆ.
ಪ್ರಶಸ್ತಿ ಘೋಷಣೆ:
ಡಿಸೆಂಬರ್ 26ರಂದು ‘ವೀರ ಬಾಲ ದಿವಸ’ ದಂದು ಪ್ರಶಸ್ತಿಗೆ ಆಯ್ಕೆಯಾದ ಬಾಲಕರ ಹೆಸರನ್ನು ಘೋಷಿಸಲಾಗುವುದು. ನಂತರ ನವದೆಹಲಿಯಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿಗಳು ಪ್ರಶಸ್ತಿಗಳನ್ನು ಪ್ರದಾನ ಮಾಡುತ್ತಾರೆ.
ಹೇಗೆ ಅರ್ಜಿ ಸಲ್ಲಿಸಬೇಕು?
ಸರ್ಕಾರದ ಅಧಿಕೃತ ಜಾಲತಾಣವಾಗಿರುವ https://awards.gov. in ಗೆ ಭೇಟಿ ನೀಡಿ, ಜುಲೈ 31ನೇ ತಾರೀಕಿನ ಒಳಗಾಗಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದು.
ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ:31-07-2025
ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿ – CLICK HERE
1 thought on “PM Rashtriya Bal Puraskar-2025: ಪಿಎಂ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ”