Post Metric Hostel Admission-2025-26 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (PUC, ITI ಮತ್ತು DIPLOMA ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Post Metric Hostel Admission-2025-26
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ
▪️ಪ್ರವರ್ಗ-1, ಎಸ್.ಸಿ & ಎಸ್.ಟಿ – ₹.2.50 ಲಕ್ಷ
▪️ಪ್ರವರ್ಗ- 2A, 2B, 2A, 3B,-₹1.00 ಲಕ್ಷ
▪️ವಿದ್ಯಾರ್ಥಿಗಳು https://shp.karnataka.gov.in/bcwd ಅನ್ನು ಸಂಪರ್ಕಿಸಿ ಆನ್ಲೈನ್ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20.06.2025.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ https://bcwd. karnataka.gov.in ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@ gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ / ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.
ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆಗಳು: 8050770004 ಮತ್ತು 8050770005