Postal Recuritment-2025: 21,413 posts in postal department, 1135 posts in Karnataka

Postal Recuritment: 21,413 posts in postal department, 1135 posts in Karnataka,Notification for Recruitment of Postal Servants

 

Postal Circle jobs: ಉದ್ಯೋಗ ಆಕಾಂಕ್ಷಿಗಳಿಗೆ ಅಂಚೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ.

ಭಾರತೀಯ ಅಂಚೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಬಾಕನಸುಳ್ಳವರಿಗೆ ಸುವರ್ಣಾವಕಾಶ. ದೇಶದಾದ್ಯಂತ ಇರುವ ಅಂಚೆವೃತ್ತಗಳಲ್ಲಿ ಖಾಲಿ ಇರುವ 21,413 ಗ್ರಾಮೀಣ ಡಾಕ್ ಸೇವಕ (ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ)/ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ -ಎಬಿಪಿಎಂ) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.

ಹುದ್ದೆಗಳ ಸಂಖ್ಯೆ:

ಒಟ್ಟು ಹುದ್ದೆಗಳ ಪೈಕಿ ಕರ್ನಾಟಕಕ್ಕೆ 1,135 ಹುದ್ದೆಗಳನ್ನು ಮೀಸಲಿಡಲಾಗಿದೆ. ಇವುಗಳಲ್ಲಿ ಸಾಮಾನ್ಯ ವರ್ಗದವರಿಗೆ 482, ಒಬಿಸಿ 260, ಎಸ್‌ಸಿ 175, ಎಸ್‌ಟಿ ಅಭ್ಯರ್ಥಿಗಳಿಗೆ 78 ಹಾಗೂ ಆರ್ಥಿಕ ದುರ್ಬಲ ವರ್ಗದವರಿಗೆ 122 ಹುದ್ದೆಗಳನ್ನು ಮೀಸಲಿಡಲಾಗಿದೆ. ಈಗಾಗಲೇ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 3 ಕೊನೆಯ ದಿನವಾಗಿದೆ. ಮಾರ್ಚ್ 6ರಿಂದ 8ರ ತನಕ ಅರ್ಜಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಶೈಕ್ಷಣಿಕ ಅರ್ಹತೆಗಳೇನು?:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿಯಲ್ಲಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಎಸ್ಸೆಸ್ಸೆಲ್ಸಿಯಲ್ಲಿ ಗಣಿತ ಮತ್ತು ಇಂಗ್ಲಿಷ್ ಭಾಷೆಯನ್ನು ಒಂದು ವಿಷಯನ್ನಾಗಿ ಅಧ್ಯಯನ ಮಾಡಿರುವುದು ಕಡ್ಡಾಯ. ಅಷ್ಟೇ ಅಲ್ಲ, ಅಭ್ಯರ್ಥಿಗಳು ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲಿಯೇ ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಅಂದರೆ ರಾಜ್ಯದ ಅಭ್ಯರ್ಥಿಗಳು ಕನ್ನಡದಲ್ಲಿಯೇ ವ್ಯಾಸಂಗ ಮಾಡಿರಬೇಕು. ಇದರೊಂದಿಗೆ ಅಭ್ಯರ್ಥಿಗಳು ಸೈಕಲಿಂಗ್ / ದ್ವಿಚಕ್ರ ವಾಹನ ಚಾಲನೆ ಕೂಡ ತಿಳಿದಿರಬೇಕು.

ವಯೋಮಿತಿ ವಿವರ:

ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯೋಮಿತಿ 40 ವರ್ಷ.

ನಿಯಮಾನುಸಾರ ಮೀಸಲಾತಿ ವ್ಯಾಪ್ತಿಗೆ ಬರುವ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಅರ್ಜಿ ಶುಲ್ಕದ ವಿವರ:

ಸಾಮಾನ್ಯ, ಆರ್ಥಿಕ ದುರ್ಬಲ ವರ್ಗ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಮಹಿಳಾ ಅಭ್ಯರ್ಥಿಗಳು, ವಿಶೇಷಚೇತನ ಅಭ್ಯರ್ಥಿಗಳು, ತೃತೀಯ ಲಿಂಗಿಗಳು ಮತ್ತು ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯ್ತಿ ನೀಡಲಾಗಿದೆ.

ನೇಮಕಾತಿ ವಿಧಾನ:

 

ನಿಗದಿತ ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳನ್ನು ಆಧರಿಸಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಇಬ್ಬರೂ/ಅದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಸಮಾನವಾದ ಅಂಕಗಳನ್ನು ಪಡೆದಿದ್ದಲ್ಲಿ ಹಿರಿತನದ ಆಧಾರದಲ್ಲಿ ಆಯ್ಕೆ ನಡೆಯುತ್ತದೆ. ಹೆಚ್ಚು ಓದಿದ್ದರೂ ಎಸ್ಸೆಸ್ಸೆಲ್ಸಿಯ ಅಂಕಗಳನ್ನಷ್ಟೇ ಪರಿಗಣಿಸಲಾಗುತ್ತದೆ. ನೇಮಕದ ಕುರಿತ ಮಾಹಿತಿಗಳನ್ನು ಎಸ್‌ಎಂಎಸ್ ಮೂಲಕ ಅಭ್ಯರ್ಥಿಗಳಿಗೆ ಕಳುಹಿಸಲಾಗುತ್ತದೆ.

ಗಮನಿಸಬೇಕಾದ ಮುಖ್ಯ ಅಂಶಗಳು:

▪️ಯಾವುದೇ ಉದ್ಯೋಗ ಪೂರ್ವ ಸೇವಾನುಭವವನ್ನು ಈ ನೇಮಕಾತಿಯಲ್ಲಿ ಪರಿಗಣಿಸಲಾಗುವುದಿಲ್ಲ.

▪️ಅರ್ಜಿ ಸಲ್ಲಿಸುವ ಮುನ್ನ ಒಬ್ಬ ಅಭ್ಯರ್ಥಿಗೆ ಒಂದು ಬಾರಿ ಮಾತ್ರ ಹೆಸರು ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಯಾವುದೇ ವೃತ್ತಕ್ಕೆ ಅರ್ಜಿ ಸಲ್ಲಿಸುವುದಾದರೂ ಅಭ್ಯರ್ಥಿಗಳು ಇದೇ ನೋಂದಣಿ ಸಂಖ್ಯೆಯನ್ನು ಬಳಸಬೇಕಾಗುತ್ತದೆ. ನೋಂದಣಿ ಮಾಡಿಕೊಳ್ಳುವಾಗ ಮೊಬೈಲ್ ಸಂಖ್ಯೆ ನಮೂದಿಸುವುದು ಕಡ್ಡಾಯ.

▪️ಒಮ್ಮೆ ಪಾವತಿಸಿದ ಶುಲ್ಕವನ್ನು ಮತ್ತೆ ಯಾವುದೇ ನೇಮಕಕ್ಕೆ ಹೊಂದಿಸಲಾಗುವುದಿಲ್ಲ ಮತ್ತು ಹಿಂಪಡೆಯಲೂ ಅವಕಾಶವಿಲ್ಲ.

▪️ರಾಜ್ಯದ ಯಾವ ಜಿಲ್ಲೆಯಲ್ಲಿ, ಎಲ್ಲಿ ಎಷ್ಟು ಹುದ್ದೆ ಖಾಲಿ ಇದೆ ಎಂಬ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ. ಇದನ್ನು ನೋಡಿಕೊಂಡೇ ಅರ್ಜಿ ಸಲ್ಲಿಸಿ.

ವೇತನ ವಿವರ:

ವೇತನ: ₹10,000 ರೂ.ನಿಂದ ₹29,380 ವರೆಗೆ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-03-2025

ಅರ್ಜಿ ತಿದ್ದುಪಡಿಗೆ ಅವಕಾಶ ಮಾರ್ಚ್ 6-8-2025

 

ಹೆಚ್ಚಿನ ವಿವರಗಳಿಗೆ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

https://indiapostgdsonline.gov.in/#

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

3 thoughts on “Postal Recuritment-2025: 21,413 posts in postal department, 1135 posts in Karnataka”

Leave a Comment

error: Content is protected !!