Bcwd Pre-Matric Hostel-2025: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ.
Bcwd- ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆದಾಯ ಮಿತಿ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ಪೋಷಕರ ವಾರ್ಷಿಕ ಆದಾಯ ಮಿತಿಯ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
▪️ಪ್ರವರ್ಗ-1, ಎಸ್.ಸಿ & ಎಸ್.ಟಿ.₹2.50 ಲಕ್ಷ
▪️ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ₹1.00 ಲಕ್ಷ
ಅರ್ಜಿ ಸಲ್ಲಿಕೆ ಎಲ್ಲಿ ಮಾಡಬೇಕು?
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಕ್ಕೆ ಅರ್ಜಿ ಸಲ್ಲಿಕೆ ಮಾಡುವ ವಿದ್ಯಾರ್ಥಿಗಳು https://shp.karnataka.gov.in/bcwd ಅನ್ನು ಸಂಪರ್ಕಿಸಿ ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಕೆ ಮಾಡಬೇಕು.
ಮಹತ್ವದ ದಿನಾಂಕಗಳು:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಕ್ಕೆ ಅರ್ಜಿ ಸಲ್ಲಿಕೆ ಮಾಡುವ ವಿದ್ಯಾರ್ಥಿಗಳು ಈ ಕೆಳಗೆ ನೀಡಲಾದ ಮಹತ್ವದ ದಿನಾಂಕಗಳನ್ನು ಅವಶ್ಯವಾಗಿ ತಿಳಿಯಬೇಕು.
▪️ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16.06.2025.
ಮಹತ್ವದ ಲಿಂಕ್ ಗಳು:
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ಅನ್ನು ನೋಡಬಹುದಾಗಿದೆ
ಮುಖ್ಯ ಮಾಹಿತಿ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಕ್ಕೆ ಅರ್ಜಿ ಸಲ್ಲಿಕೆ ಮಾಡುವ ವಿದ್ಯಾರ್ಥಿಗಳು ತಿಳಿಯಬೇಕಾದ ಮುಖ್ಯ ಮಾಹಿತಿ ಇಲ್ಲಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡುವಾಗ ತಾಂತ್ರಿಕ ತೊಂದರೆಗಳು ಉಂಟಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು ಎಂದು ಪ್ರಕಟಣೆ ಯಲ್ಲಿ ತಿಳಿಸಲಾಗಿದೆ.
ಸಂಪರ್ಕ ಮಾಡಬಹುದಾದ ದೂರವಾಣಿ ಸಂಖ್ಯೆಗಳು: 8050770004 ಮತ್ತು 8050770005
ಹೆಚ್ಚಿನ ಮಾಹಿತಿ ಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
