Probation period: ಪರಿವೀಕ್ಷಣಾ ಅವಧಿಯಲ್ಲಿ ತಡೆಹಿಡಿಯಲಾದ ವಾರ್ಷಿಕ ವೇತನ ಬಡ್ತಿಗಳನ್ನು ಬಿಡುಗಡೆಗೊಳಿಸಿ ವೇತನ ನಿಗಧೀಕರಿಸುವ ಕುರಿತು ಸುತ್ತೋಲೆ ದಿನಾಂಕ:01.07.2025.

Probation period: ಪರಿವೀಕ್ಷಣಾ ಅವಧಿಯಲ್ಲಿ ತಡೆಹಿಡಿಯಲಾದ ವಾರ್ಷಿಕ ವೇತನ ಬಡ್ತಿಗಳನ್ನು ಬಿಡುಗಡೆಗೊಳಿಸಿ ವೇತನ ನಿಗಧೀಕರಿಸುವ ಕುರಿತು ಸುತ್ತೋಲೆ ದಿನಾಂಕ:01.07.2025.

Probation period: ಪರಿವೀಕ್ಷಣಾ ಅವಧಿಯಲ್ಲಿ ತಡೆಹಿಡಿಯಲಾದ ವಾರ್ಷಿಕ ವೇತನ ಬಡ್ತಿಗಳನ್ನು ಬಿಡುಗಡೆಗೊಳಿಸಿ ವೇತನ ನಿಗಧೀಕರಿಸುವ ಕುರಿತು ಸುತ್ತೋಲೆ ದಿನಾಂಕ:01.07.2025.:

ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ತನ್ನ ವರದಿಯಲ್ಲಿ ಈ ಕೆಳಕಂಡಂತೆ ಅವಲೋಕನ ಮಾಡಿರುತ್ತದೆ:

ಪರಿವೀಕ್ಷಣಾ ಅವಧಿಯನ್ನು ತೃಪ್ತಿಕರವಾಗಿ ಪೂರೈಸಿದ ಕೂಡಲೇ ವಾರ್ಷಿಕ ವೇತನ ಬಡ್ತಿ ಮಂಜೂರು ಮಾಡುವುದಕ್ಕೆ ಸಂಬಂಧಿಸಿದಂತೆ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ನೇಮಕಾತಿ ಹೊಂದಿರುವ ಸರ್ಕಾರಿ ನೌಕರರು ಪರಿವೀಕ್ಷಣಾವಧಿಯನ್ನು ತೃಪ್ತಿಕರವಾಗಿ ಪೂರೈಸಿರುವ ಘೋಷಣೆ ನಂತರದಲ್ಲಿ ವಾರ್ಷಿಕ ವೇತನ ಬಡ್ತಿ ಬಿಡುಗಡೆಗೆ ಒಳಗೊಂಡಂತೆ ಸಕ್ಷಮ ಪ್ರಾಧಿಕಾರಗಳಿಂದ ವೇತನ ನಿಗದಿ ಆದೇಶಗಳನ್ನು ಹೊರಡಿಸಲು ಸಾಮಾನ್ಯವಾಗಿ ವಿಳಂಬವಾಗುತ್ತಿದೆ. ಇದರಿಂದ ಅನಗತ್ಯ ತೊಂದರೆಯುಂಟಾಗುತ್ತಿದೆ.

ಈ ಸನ್ನಿವೇಶಗಳನ್ನು ಸರಿಪಡಿಸುವ ದೃಷ್ಟಿಯಿಂದ ವೇತನ ನಿಗಧಿ ಆದೇಶಗಳು/ವಾರ್ಷಿಕ ವೇತನ ಬಡ್ತಿ ಬಿಡುಗಡೆಗಳಂತಹ ಪ್ರಕರಣಗಳಲ್ಲಿ ಪರಿವೀಕ್ಷಣಾವಧಿಯನ್ನು ತೃಪ್ತಿಕರವಾಗಿ ಪೂರೈಸಿದ ಘೋಷಣಾ ಆದೇಶ ಹೊರಡಿಸಿದ ದಿನಾಂಕದಿಂದ ಒಂದು ತಿಂಗಳೊಳಗಾಗಿ ಮಂಜೂರು ಮಾಡುವ ಕುರಿತು ಸೂಚನೆ ನೀಡುವಂತೆ ಆಯೋಗವು ಶಿಫಾರಸ್ಸು ಮಾಡಿದೆ.

ಈ ಹಿನ್ನೆಲೆಯಲ್ಲಿ ಗ್ರೂಪ್-ಸಿ ಮತ್ತು ಡಿ ವೃಂದದ ಸರ್ಕಾರಿ ನೌಕರರ ಪರಿವೀಕ್ಷಣಾ ಅವಧಿಯನ್ನು ವಿಸ್ತರಿಸಿದ ಸಂದರ್ಭದಲ್ಲಿ, ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಗಳು ಪರಿವೀಕ್ಷಣಾ ಅವಧಿಯನ್ನು ತೃಪ್ತಿಕರವೆಂದು ಘೋಷಿಸಿ ಆದೇಶ ಹೊರಡಿಸಿದ ದಿನಾಂಕದಿಂದ ಒಂದು ತಿಂಗಳೊಳಗೆ ತಡೆಹಿಡಿಯಲಾದ ವಾರ್ಷಿಕ ವೇತನ ಬಡ್ತಿಗಳನ್ನು ಬಿಡುಗಡೆಗೊಳಿಸಿ ವೇತನ ನಿಗದಿಪಡಿಸಲು ಅಗತ್ಯ ಕ್ರಮ ಕೈಗೊಳ್ಳತಕ್ಕದ್ದು.

 

CLICK HERE TO DOWNLOAD

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!