Promotion Update: ಪಿಯು ಉಪನ್ಯಾಸಕರಾಗಿ ಬಡ್ತಿ| ಅರ್ಹತಾ ಪರೀಕ್ಷೆಯ ಹೊಸ ವೇಳಾಪಟ್ಟಿ ಪ್ರಕಟ!
Promotion Update: ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರಿಗೆ PU Lecturer ಆಗುವ ಅವಕಾಶ! ಅರ್ಹತಾ ಪರೀಕ್ಷೆಯ ಹೊಸ ವೇಳಾಪಟ್ಟಿ ಪ್ರಕಟವಾಗಿದ್ದು, ಸಂಪೂರ್ಣ ಮಾಹಿತಿಗಾಗಿ ಈ ಪೋಸ್ಟ್ ನೋಡಿ.
ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕ ವೃಂದದಿಂದ ಸರ್ಕಾರಿ ಪದವಿ-ಪೂರ್ವ ಕಾಲೇಜುಗಳ ಉಪನ್ಯಾಸಕರ ವೃಂದದ ಹುದ್ದೆಗೆ ಬಡ್ತಿ ನೀಡಲು ನಿಗದಿಪಡಿಸಿದ ಅರ್ಹತಾ ಪರೀಕ್ಷೆಯನ್ನು 2027ರ ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ಶಿಕ್ಷಕರು ನಿಯೋಜನೆಗೊಂಡಿರುವ ಕಾರಣದಿಂದಾಗಿ ಮುಂದೂಡಲಾಗಿತ್ತು. ಈ ಜನಗಣತಿ ಕಾರ್ಯವು ದಿನಾಂಕ: 16/05/2026ರೊಳಗೆ ಮುಗಿಯುವುದರಿಂದ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಈ ಕೆಳಗಿನಂತೆ ಪ್ರಕಟಿಸಿದೆ.
ಪರಿಷ್ಕೃತ ಪರೀಕ್ಷಾ ಪ್ರವೇಶ ಪತ್ರವನ್ನು ಇಲಾಖಾ ವೆಬ್ ಸೈಟ್:https://sts.karnataka.gov.in/GPSTRNHK/ ನಲ್ಲಿ ಒದಗಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮದಿನಾಂಕವನ್ನು ಭರ್ತಿ ಮಾಡಿ ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ಪಡೆದುಕೊಳ್ಳಲು ಸೂಚಿಸಲಾಗಿದೆ. ಪ್ರವೇಶ ಪತ್ರದಲ್ಲಿ ನಮೂದಿಸಿರುವ ಸೂಚನೆಗಳನ್ನು ತಪ್ಪದೇ ಪಾಲಿಸಿ ಎಲ್ಲಾ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ಕೋರಲಾಗಿದೆ.


CLICK HERE TO DOWNLOAD TIME TABLE