Providing cashless medical facilities to retired employees.
Providing cashless medical facilities to retired employees.: ನಿವೃತ್ತ ನೌಕರರಿಗೆ ನಗದುರಹಿತ ವೈದ್ಯಕೀಯ ಸೌಲಭ್ಯ ಕಲ್ಪಿಸುವ ಕುರಿತು.
ಉಲ್ಲೇಖಿತ ತಮ್ಮ ಸಂಘಟನೆಯ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದ್ದು, ಸದರಿ ಪ್ರಸ್ತಾವನೆಯಲ್ಲಿನ ವಿಷಯಗಳ ಪರಿಶೀಲನೆಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಾಗೂ ಆರ್ಥಿಕ ಇಲಾಖೆಗೆ ಕಳುಹಿಸಲಾಗಿದೆ.
ರಾಜ್ಯ ಸರ್ಕಾರವು ಈ ವರ್ಷ ಈಗಾಗಲೇ ಸೇವೆಯಲ್ಲಿರುವ ಅಧಿಕಾರಿಗಳಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮೂಲಕ ನಗದುರಹಿತ ವೈದ್ಯಕೀಯ ಚಿಕಿತ್ಸೆಯ ಯೋಜನೆಯನ್ನು ಕಾರ್ಯಗತಗೊಳಿಸಲು ಸೂಚಿಸಿದ್ದು, ಈ ಯೋಜನೆಯನ್ನು ನಿರ್ವಹಿಸಲು ಕಂಪ್ಯೂಟರ್ ತಂತ್ರಾಂಶವನ್ನು ಅಭಿವೃದ್ಧಿಪಡಿಸುವ ಪ್ರಕ್ರಿಯೆ ಪುಗತಿಯಲ್ಲಿದೆ ಹಾಗೂ ನೌಕರರ ಅವಲಂಬಿತ ಕುಟುಂಬ ಸದಸ್ಯರ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಈ ಪ್ರಕ್ರಿಯೆ ಮುಕ್ತಾಯವಾದ ನಂತರ ತಮ್ಮ ಪ್ರಸ್ತಾವನೆಯನ್ನು ಪರಿಗಣಿಸಲಾಗುವುದು ಎಂದು ಆರ್ಥಿಕ ಇಲಾಖೆಯು ಹಿಂಬರಹವನ್ನು ನೀಡಿರುತ್ತದೆ. ಸದರಿ ಮಾಹಿತಿಯನ್ನು ತಮಗೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ. ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ವಿಶೇಷಾಧಿಕಾರಿಯವರಿಂದ ನಿರ್ದೇಶನ
